ಈ ರಾಶಿಯವರಿಗೆ ಇಂದು ಉತ್ತಮ ಮಾರ್ಗಗಳು ತೆರೆದುಕೊಳ್ಳಲಿವೆ; ಹಣದ ವಿಚಾರದಲ್ಲಿ ಎಚ್ಚರವಿರಲಿ

Horoscope
Spread the love

ಮೇಷ ರಾಶಿ: ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಸೋಲಾಗಬಹುದು. ಇಂದು ನಿಮಗೆ ಗೊತ್ತಿಲ್ಲದೇ ಪುಣ್ಯವು ನಿಮ್ಮನ್ನು ಸೇರಿಸುವ ಸ್ಥಳಕ್ಕೆ ತಂದುಬಿಡುವುದು. ಶತ್ರುಗಳ ಬಗ್ಗೆ ನೀವು ಸರಿಯಾದ ಮಾಹಿತಿಯನ್ನು ಪಡೆಯುವಿರಿ. ಅನಿರೀಕ್ಷಿತ ವಾರ್ತೆಗಳು ನಿಮ್ಮ ಮನಸ್ಸನ್ನು ಖಿನ್ನಗೊಳಿಸುವುದು. ನಿಮ್ಮ ಕೊಟ್ಟ ಜವಾಬ್ದಾರಿಯನ್ನು ಸಕಾಲಕ್ಕೆ ಪೂರ್ಣಗೊಳಿಸುವಿರಿ. ಸುಳ್ಳು ಹೇಳವ ಸಂದರ್ಭವೂ ಬರಬಹುದು. ಉದ್ವೇಗಕ್ಕೆ ಸಿಲುಕಿ ಏನನ್ನಾದರೂ ಮಾಡಲು ಹೋಗುವಿರಿ. ಸುಲಭವಾದ ಕಾರ್ಯವನ್ನು ಮೊದಲು ಮಾಡಿ ಮುಗಿಸಿ. ಒತ್ತಡದಿಂದ ಒಳ್ಳೆಯ ಕಾರ್ಯವೂ ಹಾಳಾಗುವುದು.

ವೃಷಭ ರಾಶಿ: ಇಂದು ಬರುವ ಅಪರೂಪದ ಸಂದರ್ಭವನ್ನು ಬಳಿಸಿದರೆ ಉತ್ತಮ ಮಾರ್ಗವು ನಿಮಗೆ ತೆರೆದುಕೊಳ್ಳುವುದು. ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ. ಬಂಧುಗಳ ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ಬರುವ ಆದಾಯಕ್ಕೆ ಅಡೆತಡೆಗಳು ಬರಬಹುದು. ಸ್ನೇಹವು ಶಿಥಿಲವಾಗುವುದು. ನಿಮಗೆ ಬೇಕಾದುದನ್ನು ಮಾತ್ರ ಇಟ್ಟುಕೊಂಡು ಬೇಡದ್ದನ್ನು ಕೊಡಿ. ಬಹಳ ದಿನಗಳಿಂದ ನಿಮ್ಮ ಕೆಲಸವು ವೇಗವಾಗಿ ಸಾಗುತ್ತಿದ್ದು ಅನಿರೀಕ್ಷತವಾಗಿ ಮಂದಗತಿಯಲ್ಲಿ ಸಾಗುವುದು. ಹಣದ ವಿಚಾರದಲ್ಲಿ ಎಚ್ಚರವಿರಲಿ.

ವೃಷಭ ರಾಶಿ

ಮಿಥುನ ರಾಶಿ: ಭರವಸೆಯ ಮಾತುಗಳೇ ನಿಮಗೆ ಧೈರ್ಯವನ್ನು ಕೊಡಬಹುದು. ಉದ್ಯೋಗದಲ್ಲಿ ಆಗದ ಸಣ್ಣ ತಪ್ಪಿನಿಂದ ನಷ್ಟವಾಗಲಿದ್ದು ಅದು ನಿಮ್ಮ ಮೇಲೆ ಬರಬಹುದು.‌ ಭೂಮಿಯ ವ್ಯವಹಾರದಲ್ಲಿ ಲಾಭವಾಗದೇ ಕೇವಲ ಓಡಾಟವನ್ನು ಮಾಡಬೇಕಾಗಬಹುದು. ತುರ್ತು ಹಣವು ಬೇಕಾಗಿದ್ದು ಸಾಲವನ್ನು ಮಾಡಲು ನಿಮಗೆ ಹೆದರಿಕೆ ಆಗಬಹುದು. ಸರಿಯಾದ ಕಡೆ ಹೂಡಿಕೆ ಮಾಡದೇ ಹಣವನ್ನು ಕಳೆದುಕೊಳ್ಳಬಹುದು. ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬುವುದು ಕಷ್ಟವಾದೀತು. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನಿಮ್ಮ ಕೌಶಲವನ್ನು ಪ್ರದರ್ಶಿಸಲು ಅವಕಾಶವಿದೆ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ.

Canc

ಕರ್ಕಾಟಕ ರಾಶಿ: ದುರಸ್ತಿ ಕಾರ್ಯಗಳಿಗೆ ಸಂಪತ್ತನ್ನು ಖಾಲಿಮಾಡಬೇಕಾಗಬಹುದು. ಇಂದು ಹಠದ ಸ್ವಭಾವದಿಂದ ಪ್ರೀತಿಯನ್ನು ಕಳೆದುಕೊಳ್ಳುವಿರಿ. ಇಂದು ವ್ಯವಹಾರವನ್ನು ಮಾಡಲು ನಿಮಗೆ ಧೈರ್ಯವು ಸಾಕಾಗದು. ವಾಹನದಿಂದ ಇಂದು ಆದಾಯವು ಬರಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ನಿಮ್ಮ ನಿರ್ಧಾರವನ್ನು ಸ್ಪಷ್ಟವಾಗಿ ಹೇಳಿ.‌ ನಿಮ್ಮ ಇಷ್ಟವಾದ ವಸ್ತುವನ್ನು ಕಳೆದುಕೊಳ್ಳುವಿರಿ. ಆರ್ಥಿಕ ಸಹಾಯವನ್ನು ಇನ್ನೊಬ್ಬರಿಂದ ಕೇಳುವಿರಿ. ಹೂಡಿಕೆಯಿಂದ ಹಿಂಜರಿಯುವ ಸಾಧ್ಯತೆ ಇದೆ. ಆಪ್ತರ ಮಾತಿನಿಂದ ನಿಮಗೆ ಬೇಸರವಾಗಲಿದೆ. ನಿಮ್ಮ ಭಾವವನ್ನು ಬಂಧಿಸಿಟ್ಟರೂ ಅದು ಗೊತ್ತಾಗುವುದು. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ.

ಸಿಂಹ ರಾಶಿ: ಗೃಹ ಬಳಕೆಗೆ ಬೇಕಾದ ಸಾಮಾನುಗಳನ್ನು ನೀವು ಖರೀದಿಸುವ ಭರದಲ್ಲಿ ಖರ್ಚಿನ ಬಗ್ಗೆಯೂ ಸೂಕ್ತ ಆಲೋಚನೆಯನ್ನು ಮಾಡಿ. ಶತ್ರುಗಳ ವಿರುದ್ಧ ಸಮರಸಾರದೇ ತಾಳ್ಮೆಯಿಂದ ನಿರ್ವಹಿಸುವಿರಿ. ಮೇಲಧಿಕಾರಿಗಳ ಜೊತೆ ನಿಮ್ಮ ಒಡನಾಟವು ಚೆನ್ನಾಗಿರುವುದು. ನಿಮ್ಮ ಗುರಿಯ ಬಗ್ಗೆ ಕೆಲವರು ಆಡಿಕೊಂಡಾರು. ನಿಮ್ಮದೇ ಕೆಲಸವಾದರೂ ಸಂಪೂರ್ಣ ಯಶಸ್ಸನ್ನು ನೀವು ಪಡೆಯಲಾರಿರಿ. ಬೇಡವೆನಿಸಿದ್ದನ್ನು ಒತ್ತಾಯಪೂರ್ವಕ ಪಡೆಯುವುದು ಬೇಡ. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ. ಕೆಲವು ತೊಂದರೆಗಳನ್ನು ನೀವು ತೆಗೆದುಕೊಳ್ಳುವುದು ಅನಿವಾರ್ಯ.

ಕನ್ಯಾ ರಾಶಿ: ಕಾರ್ಯದಲ್ಲಿ ಇಂದು ನಿಮ್ಮಿಂದಲೇ ತಪ್ಪಾಗುವುದು. ಇದರಿಂದ ಉತ್ತಮ ಕಲಿಕೆಯೂ ನಿಮಗೇ ಆಗುವುದು. ಇಂದು ನಿಮ್ಮ ವ್ಯವಹಾರದಲ್ಲಿ ಕೆಲವು ಬದಲಾವಣೆಗಳು ಬೇಕು ಎಂದು ಅನ್ನಿಸಬಹುದು. ಉದ್ಯಮದಲ್ಲಿ ಆಗುವ ಒತ್ತಡವನ್ನು ನಿವಾರಿಸಿಕೊಳ್ಳಲು ಅನ್ಯ ಮಾರ್ಗವನ್ನು ಕಂಡುಕೊಳ್ಳಿ.‌ ನಿಮ್ಮ ವಿರುದ್ಧ ನಡೆಸುವ ತಂತ್ರಗಾರಿಕೆಯು ನಿಲ್ಲದು. ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸರಿ‌ಮಾಡಿಕೊಳ್ಳಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯಾಗಬಹುದು. ಸಂಬಂಧಗಳನ್ನು ಬೆಳೆಸಿಕೊಂಡಾಗಲಷ್ಟೇ ಬಾಂಧವ್ಯ ಬೆಳೆಡಯುವುದು. ಪ್ರೀತಿಯಿಂದ ಆಡಿದ ಮಾತು ಇಂದು ಉಪಯೋಗಕ್ಕೆ ಬರುವುದು.

Leave a Comment

Leave a Reply

Your email address will not be published. Required fields are marked *

error: Content is protected !!