ಹಾವೇರಿ : ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ – 13 ಮಂದಿ ದುರ್ಮರಣ, ದೇವರ ದರ್ಶನಕ್ಕೆ ಹೋದವರು ಯಮನ ಪಾಲು

N619710859171954583975373e48160a70ce1839fb795bd0a92e5195a77187433a6a5710401ba12dbffd33e
Spread the love

ನ್ಯೂಸ್ ಆ್ಯರೋ : ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮನೆಗೆ ವಾಪಾಸ್ಸಾಗುತ್ತಿದ್ದವರು ಮಸಣ ಸೇರಿದ್ದಾರೆ. ಇಂದು (ಜೂನ್​ 28) ನಸುಕಿನ ಜಾವ 4 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್​ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ದುರಂತ ಸಾವಿಗೀಡಾಗಿದ್ದಾರೆ.

ಮೃತರನ್ನು ಪರಶುರಾಮ್‌, ಭಾಗ್ಯ, ನಾಗೇಶ್, ವಿಶಾಲಾಕ್ಷಿ, ಅರ್ಪಿತಾ, ಸುಭದ್ರಾ ಬಾಯಿ, ಪುಣ್ಯ, ಮಂಜುಳಾ ಬಾಯಿ, ಆದರ್ಶ ಮಾನಸ, ರೂಪ, ಮಂಜುಳಾ ಎಂದು ಗುರುತಿಸಲಾಗಿದೆ. ಮೃತರೆಲ್ಲರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎನ್ನಲಾದ ಎನ್ನಲಾಗಿದೆ.

N6197117261719545901921d86fe042197144dc3312bba3a12e76a6a59b39c525af1e26a4a8d68abd4079f67306424314905723932

ಸದ್ಯ ಹದಿಮೂರು ಜನರ ಸಾವು ದೃಢವಾಗಿದೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ದುರ್ಘಟನೆಯಲ್ಲಿ ಸಣ್ಣ ಸಣ್ಣ ಮಕ್ಕಳು ಕೂಡ ಮೃತಪಟ್ಟಿದ್ದಾರೆ. ತಾಯಿಯ ಎದುರೇ ಅವಳಿ ಮಕ್ಕಳ ಸಾವು ಕಂಡು ಆಂಬ್ಯುಲೆನ್ಸ್ ಸಿಬ್ಬಂದಿ ಕೂಡ ಕಣ್ಣೀರು ಹಾಕಿದ್ದಾರೆ.

ಓರ್ವ ಬಾಲಕಿ ಮತ್ತು ಅಜ್ಜಿಗೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನದಲ್ಲಿ 15ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತದೇಹಗಳು ಅಪ್ಪಚ್ಚಿಯಾಗಿವೆ.

ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದರ್ಶನ ಮಾಡಿಕೊಂಡು ಸ್ವಗ್ರಾಮಕ್ಕೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸದ್ಯ ಟಿಟಿ ವಾಹನದಲ್ಲಿ ಸಿಲುಕಿಕೊಂಡಿರುವ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಹೊರ ತೆಗೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Comment

Leave a Reply

Your email address will not be published. Required fields are marked *

error: Content is protected !!