Mangalore : ಮಲಗುವ ಕೋಣೆಯಲ್ಲಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣ – ಇಬ್ಬರು ಅಪ್ರಾಪ್ತ ಬಾಲಕರ ಸಹಿತ ಐವರು ಆರೋಪಿಗಳ ಬಂಧನ

20240706 215818
Spread the love

ನ್ಯೂಸ್ ಆ್ಯರೋ : ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಧರ್ಮನಗರದ ಶ್ರೀಧರ್ ಎಂಬವರ ಮನೆಯ ಮಲಗುವ ಕೋಣೆಯ ಕಪಾಟಿನಲ್ಲಿರಿಸಿದ್ದ ಸುಮಾರು 32 ಪವನ್ ಗಿಂತಲೂ ಹೆಚ್ಚಿದ್ದ ಸುಮಾರು 15 ಲಕ್ಷ ಬೆಲೆಬಾಳುವ ಚಿನ್ನಾಭರಣಗಳನ್ನು ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಇಬ್ಬರು ಅಪ್ರಾಪ್ತರ ಸಹಿತ ಒಟ್ಟು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ‌.

ಪ್ರಕರಣದ ವಿವರ :
ದಿನಾಂಕ:08-06-2024 ರ ಬೆಳಿಗ್ಗೆ ಸುಮಾರು 08:00 ಗಂಟೆಯಿಂದ ದಿನಾಂಕ: 16-06-2024 ರ ಮಧ್ಯಾಹ್ನ ಸುಮಾರು 12:00 ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನ ನಡೆದಿತ್ತು.

ಶ್ರೀಧರ್ ಅವರ ದೂರಿನನ್ವಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೊ. ಸಂಖ್ಯೆ. 124/2024 ಕಲಂ: 380 ಭಾದಂಸಂ ಅಂತೆ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆಯನ್ನು ಕೈಗೊಂಡ ಉಳ್ಳಾಲ ಪೊಲೀಸ್ ನಿರೀಕ್ಷಕರಾದ ಶ್ರೀ ಬಾಲಕೃಷ್ಣ ರವರು ಅವರ ಸಿಬ್ಬಂದಿಯವರೊಂದಿಗೆ ಎ.ಸಿ.ಪಿ ದಕ್ಷಿಣ ಶ್ರೀಮತಿ ಧನ್ಯ ನಾಯಕ್ ರವರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಪತ್ತೆ ಕಾರ್ಯದಲ್ಲಿ ತೊಡಗಿದ್ದು, ಇಬ್ಬರು ಬಾಲಕರು ಸೇರಿದಂತೆ ಆರೋಪಿಗಳಾದ ಶ್ರೇಯಸ್ ಬೆಳ್ತಂಗಡಿ, ಪೃಥ್ವಿರಾಜ್ ಉರ್ವ ಮತ್ತು ತೌಸೀಫ್ ಬೆಳ್ತಂಗಡಿಯವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಕಳವು ಮಾಡಿ ಮಂಗಳೂರು ನಗರದ ವಿವಿಧ ಚಿನ್ನಾಭರಣ ಅಂಗಡಿಗಳಿಗೆ ಮಾರಾಟ ಮಾಡಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಆರೋಪಿಗಳಾದ ಶ್ರೇಯಸ್ ಬೆಳ್ತಂಗಡಿ, ಪೃಥ್ವಿರಾಜ್ ಉರ್ವ ಮತ್ತು ತೌಸೀಫ್ ಬೆಳ್ತಂಗಡಿ ರವರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರುಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನಿಬ್ಬರು ಬಾಲಕರ ವಿರುದ್ಧ ಜೆ.ಜೆ ನ್ಯಾಯಾಲಯಕ್ಕೆ ವರಧಿ ಸಲ್ಲಿಸಲಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!