ಜಗತ್ತಿನಲ್ಲೇ ಮೊತ್ತಮೊದಲ ಕೇಸ್ – ಆತ್ಮಹತ್ಯೆ ಮಾಡಿಕೊಂಡ ರೋಬೋಟ್..!! ಕಾರಣ ಏನು?
ನ್ಯೂಸ್ ಆ್ಯರೋ : ಸಾರ್ವಜನಿಕ ಬದುಕಿನ ಜಂಜಾಟ, ಸಾಂಸಾರಿಕ ಸಮಸ್ಯೆ, ಆರ್ಥಿಕ ಸಮಸ್ಯೆಗಳಿಂದಲೋ ಲವ್ ಫೈಲ್ಯೂರ್ ನಿಂದಲೋ ಜೀವನದ ಮೇಲೆ ಆಸಕ್ತಿ ಕಳೆದುಕೊಂಡವರು ಆತ್ಮಹತ್ಯೆಗೆ ಶರಣಾಗೋದು ಮಾಮೂಲಿ. ಆದರೆ ಜಗತ್ತಿನಲ್ಲೇ ಮೊತ್ತ ಮೊದಲ ಬಾರಿಗೆ ರೋಬೋಟ್ ಒಂದು ಆತ್ಮಹತ್ಯೆಗೆ ಶರಣಾದ ಬಗ್ಗೆ ವರದಿಯಾಗಿದೆ.
ಮಧ್ಯ ದಕ್ಷಿಣ ಕೊರಿಯಾದ ಪುರಸಭೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಬೋಟ್ ಮೆಟ್ಟಿಲುಗಳ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಬಳಿಕ ರೋಬೋಟ್ನ ಭಾಗಗಳನ್ನು ಸಂಗ್ರಹಿಸಲಾಗಿದೆ. ರೋಬೋಟ್ ಅನ್ನು ವಿನ್ಯಾಸಗೊಳಿಸಿದ ಕಂಪನಿಯು ಆತ್ಮಹತ್ಯೆಗೆ ಕಾರಣವೇನೆಂದು ವಿಶ್ಲೇಷಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತ್ವರಿತ ಕಡತ ವಿಲೇವಾರಿಗೆ ರೋಬೋಟಿಕ್ಸ್ ಟೆಕ್ ಸಂಸ್ಥೆ ಈ ರೋಬೋಟ್ ಅಭಿವೃದ್ಧಿಪಡಿಸಿತ್ತು. ಬಳಿಕ 2023ರಿಂದ ನಗರ ಪಾಲಿಕೆಯಲ್ಲಿ ಕೆಲಸದಲ್ಲಿ ತೊಡಗಿತ್ತು. ರೋಟೋ ಕಾರಣ ಒಂದು ನಿಮಿಷವೂ ಬಿಡುವಿಲ್ಲದೆ ಕಡತಗಳ ವಿಲೇವಾರಿ, ವಿತರಣೆಗೆ ಆಜ್ಞೆಗಳನ್ನು ನೀಡಲಾಗಿತ್ತು. ಹೀಗೆ ಕೆಲಸದಲ್ಲಿ ತೊಡಗಿದ್ದ ರೋಬೋಟೋ ಮೆಟ್ಟಿಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದೆ. ಜಿಗಿದ ಪರಿಣಾಮ ರೋಬೋ ಚಿಪ್,ಬಿಡಿ ಭಾಗಗಳು ನಾಶವಾಗಿದೆ.
ಇತ್ತ ರೋಬೋಟಿಕ್ಸ್ ಸಂಸ್ಥೆಯ ವಿಜ್ಞಾನಿಗಳು ಸ್ಥಳಕ್ಕೆ ಆಗಮಿಸಿ ಬಿಡಿ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಸಿಸಿಟಿವಿ ದೃಶ್ಯಗಳನ್ನು ವಶಪಡಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ. ಘಟನೆ ಕಾರಣ ಏನು ಅನ್ನೋದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ರೋಬೋಟಿಕ್ಸ್ ಸಂಸ್ಥೆ ಹೇಳಿದೆ.
ಆತ್ಮಹತ್ಯೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅಧಿಕಾರಿ ಮಾತನಾಡಿದ್ದು, ಮುನ್ಸಿಪಾಲ್ ಕಾರ್ಪೊರೇಷನ್ನ ಕೆಲಸದಲ್ಲಿ ರೋಬೋಟ್ ಸಹಾಯ ಮಾಡುತ್ತಿತ್ತು. ಕಳೆದ ಒಂದು ವರ್ಷದಿಂದ ಗುಮಿ ನಗರದ ನಿವಾಸಿಗಳಿಗೆ ಆಡಳಿತಾತ್ಮಕ ಕೆಲಸದಲ್ಲಿ ಬ್ಯುಸಿ ಆಗಿತ್ತು. ಕಳೆದ ವಾರ ಮೆಟ್ಟಿಲುಗಳ ಕೆಳಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ರೋಬೋಟ್ ಪತ್ತೆಯಾಗಿದೆ. ಪ್ರತ್ಯಕ್ಷದರ್ಶಿಗಳು ರೋಬೋಟ್ ಬೀಳುವ ಮೊದಲು ಓಡಾಡುತ್ತಿರೋದನ್ನು ನೋಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕೆಲಸ ಮಾಡುತ್ತಿತ್ತು. ಯಾಕೆ ಹಾಗೆ ಮಾಡಿಕೊಂಡಿತು ಅನ್ನೋದ್ರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Leave a Comment