ಅಂತರಾಷ್ಟ್ರೀಯ T20 ಕ್ರಿಕೆಟ್ ಗೆ ರೋಹಿತ್ ಶರ್ಮಾ ವಿದಾಯ – ಕೊಹ್ಲಿ ನಿವೃತ್ತಿ ಬೆನ್ನಲ್ಲೇ ವಿದಾಯದ ನಿರ್ಧಾರ ಪ್ರಕಟಿಸಿದ ‘ಹಿಟ್ ಮ್ಯಾನ್’..!!

20240630 010139
Spread the love

ನ್ಯೂಸ್ ಆ್ಯರೋ : ಬಾರ್ಬಡೋಸ್​ ನ ಕೆನ್ಸಿಂಗ್ಟನ್​ ಓವಲ್​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಭಾರತ ತಂಡವು ಗೆದ್ದು ಬೀಗಿದ್ದು, ಚುಟುಕು ವಿಶ್ವಸಮರದಲ್ಲಿ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

ಇದರ ಬೆನ್ನಲ್ಲೇ ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಸ್ವೀಕರಿಸುವ ವೇಳೆ T20 ಕ್ರಿಕೆಟ್ ಗೆ ವಿದಾಯ ಘೋಷಿಸುವ ಮೂಲಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಶಾಕ್ ನೀಡಿದ್ದರೆ, ಪಂದ್ಯದ ಬಳಿಕದ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಶರ್ಮಾ ಕೂಡ ವಿದಾಯದ ಘೋಷಣೆ ಮಾಡಿದ್ದಾರೆ.

ಫೈನಲ್ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯವೂ ಹೌದು. ಈ ಫಾರ್ಮ್ಯಾಟ್ ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಇದೇ ಫಾರ್ಮ್ಯಾಟ್ ನೊಂದಿಗೆ ನನ್ನ ವೃತ್ತಿ ಜೀವನ ಆರಂಭಿಸಿದ್ದೆ. ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದನ್ನು ವರ್ಣಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಈ ಬಾರಿ ನಾವು ಗೆದ್ದಿರುವುದು ಖುಷಿ ನೀಡಿದೆ ಎಂದು ಅವರು ಹೇಳಿದರು.

ಇದುವರೆಗೆ ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, ಇದರಲ್ಲಿ 5 ಶತಕ ಹಾಗೂ 37 ಅರ್ಧಶತಕಗಳು ಸೇರಿವೆ.

Leave a Comment

Leave a Reply

Your email address will not be published. Required fields are marked *

error: Content is protected !!