ಪೊಲೀಸ್ ಠಾಣೆ ಮುಂದೆ ಧರಣಿ; ದ್ರೌಪದಿಯ ಬಂಧಿಸಿದ ಪೊಲೀಸರು
ನ್ಯೂಸ್ ಆ್ಯರೋ: ಭಾರತೀಯ ಜನತಾ ಪಾರ್ಟಿಯ ಮಾಜಿ ಸಂಸದೆ ಹಾಗೂ ಮಹಾಭಾರತ ಸೀರಿಯಲ್ನಲ್ಲಿ ದ್ರೌಪದಿ ಪಾತ್ರ ಮಾಡಿ ದೇಶದ ಲಕ್ಷಾಂತರ ಜನರನ್ನು ರಂಜಿಸಿದ್ದ ನಟಿ ರೂಪಾ ಗಂಗೂಲಿ ಅವರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.
ಬನ್ಸ್ದ್ರೋನಿ ಪೊಲೀಸ್ ಠಾಣೆ ಮುಂದೆ ಧರಣಿ ಕುಳಿತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಕಮೀಷನರ್ ಮನೋಜ್ ಕುಮಾರ್ ವರ್ಮಾ ಹೇಳಿದ್ದಾರೆ.
ಕಳೆದ ದಿನ ಬನ್ಸ್ದ್ರೋನಿ ಬಳಿ ಅಪಘಾತವೊಂದು ಸಂಭವಿಸಿತ್ತು. ಈ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸಾವನ್ನಪ್ಪಿದ್ದ, ಈ ಘಟನೆಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ವೇಳೆ ಪೊಲೀಸ್ ಠಾಣೆಗೆ ಬಂದ ರೂಪಾ ಗಂಗೂಲಿ ಅವರು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಕ್ಕೆ ಈ ನಾಲ್ವರನ್ನು ಬಂಧಿಸಲಾಗಿದೆ. ಹೀಗಾಗಿ ಕೂಡಲೇ ಬಂಧಿಸಿದವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ ಇದಕ್ಕೆ ಪೊಲೀಸರು ಒಪ್ಪದೇ ಇದ್ದಾಗ ಅಲ್ಲೇ ಧರಣಿ ಕುಳಿತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕೋರ್ಟ್ ಬೇಲ್ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸ್ ಕಮೀಷನರ್ ಮನೋಜ್ ಕುಮಾರ್ ವರ್ಮಾ ಹೇಳಿದ್ದಾರೆ.
Leave a Comment