ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗಾವಕಾಶ; ಕಂಡಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

Job
Spread the love

ನ್ಯೂಸ್ ಆ್ಯರೋ: ರಾಜಸ್ಥಾನ ಸ್ಟಾಫ್ ಸೆಲೆಕ್ಷನ್ ಬೋರ್ಡ್, RSSB ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು RSSB ಯ ಅಧಿಕೃತ ವೆಬ್‌ಸೈಟ್ rssb.rajasthan.gov.in ನಲ್ಲಿ ಲಭ್ಯವಿರುವ ವಿವರವಾದ ಅಧಿಸೂಚನೆಯನ್ನು ಪರಿಶೀಲಿಸಬಹುದು. ನೋಂದಣಿ ಪ್ರಕ್ರಿಯೆಯು ಮಾರ್ಚ್ 27 ರಂದು ಪ್ರಾರಂಭವಾಗಲಿದ್ದು, ಏಪ್ರಿಲ್ 25, 2025 ರಂದು ಮುಕ್ತಾಯಗೊಳ್ಳಲಿದೆ.

ಆರ್‌ಎಸ್‌ಎಸ್‌ಬಿ ನೇಮಕಾತಿಯು ಒಟ್ಟೂ 500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿದ್ದರೆ, ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ.

ಶೈಕ್ಷಣಿಕ ಅರ್ಹತೆ:
ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಚಾಲನಾ ಪರವಾನಗಿ(Driving license) ಯನ್ನು ಹೊಂದಿರಬೇಕು.

ವಯಸ್ಸಿನ ಮಿತಿ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜನವರಿ 1, 2026 ಕ್ಕೆ 18 ರಿಂದ 40 ವರ್ಷ ವಯಸ್ಸಿನ ಒಳಗಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ:
ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಮಂಡಳಿಯು ಮೇಲಿನ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) / ಟ್ಯಾಬ್ಲೆಟ್ ಆಧಾರಿತ ಪರೀಕ್ಷೆ (TBT) / ಆಫ್‌ಲೈನ್ (OMR) ಆಧಾರಿತ ಪರೀಕ್ಷೆಯನ್ನು ನಡೆಸಬಹುದು. ಮಂಡಳಿಯು ಮಂಡಳಿಯ ವೆಬ್‌ಸೈಟ್ ಮತ್ತು ಪತ್ರಿಕಾ ಪ್ರಕಟಣೆಯ ಮೂಲಕ ಮೇಲ್ಕಂಡ ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಗೆ ವಿವರವಾದ ಮಾಹಿತಿಯನ್ನು ಪ್ರತ್ಯೇಕವಾಗಿ ನೀಡುತ್ತದೆ.

Leave a Comment

Leave a Reply

Your email address will not be published. Required fields are marked *

error: Content is protected !!