ಮೋಹಕ ತಾರೆಯ ಮದುವೆ ಡೇಟ್ ಫಿಕ್ಸ್? ಕೊನೆಗೂ ಕೂಡಿಬಂತು ಕಂಕಣ ಭಾಗ್ಯ…!
ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾಗೆ ಕೊನೆಗೂ ಕೂಡಿಬಂತು ಕಂಕಣ ಭಾಗ್ಯ. ಇದೇ ವರ್ಷಾಂತ್ಯದ ನವೆಂಬರ್ ತಿಂಗಳಿನಲ್ಲಿ ರಮ್ಯಾ ಹಸೆಮಣೆ ಏರಲಿದ್ದಾರೆ ಎಂದು ವರದಿಯಾಗಿದೆ.
ನವೆಂಬರ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧತೆಗಳಾಗುತ್ತಿದೆ. ಜೊತೆಗೆ ಸದ್ಯದಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮವು ನಡೆಯಲಿದೆ ಎನ್ನಲಾಗಿದೆ.
ನಟಿ ರಮ್ಯಾ ಬೆಂಗಳೂರಿನ ಖ್ಯಾತ ಉದ್ಯಮಿಯನ್ನು ಮದುವೆಯಾಗಲಿದ್ದಾರೆ ಎನ್ನಲಾಗಿದೆ. ಆದರೆ ಉದ್ಯಮಿ ಯಾರು ಎಂಬ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯದಲ್ಲೇ ಪ್ರಶ್ನೆಗೆ ತೆರೆಬೀಳಲಿದೆ.
2003 ರಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ಅಭಿ ಚಿತ್ರದ ಮೂಲಕ ಕನ್ನಡ ಚಿತ್ರ ರಂಗದಲ್ಲಿ ನಾಯಕಿಯಾಗಿ ಪಾದಾರ್ಪಣೆ ಮಾಡಿದ್ದರು. ಇದಾದ ಮೇಲೆ ಒಂದರ ಮೇಲೆ ಒಂದರಂತೆ ಹಿಟ್ ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದಾರೆ.
ಇದಾದ ಬಳಿಕ 2011 ರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು 2013ರ ಉಪಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು.
Leave a Comment