ಸಂಜನಾ ಜೊತೆಗೆ ಚಂದನ್ ಶೆಟ್ಟಿ ಮದುವೆ; ಏನು ಸ್ಪಷ್ಟನೆ ಕೊಟ್ರು ನಟಿ

Sanjana Anand and Chandan Shetty
Spread the love

ನ್ಯೂಸ್ ಆ್ಯರೋ: ಸಾಮಾಜಿಕ ಜಾಲತಾಣದಲ್ಲಿ ಸಂಜನಾ ಆನಂದ್ ಮತ್ತು ಚಂದನ್ ಶೆಟ್ಟಿಯ ಮದುವೆ ಬಗ್ಗೆ ಕಳೆದ ಕೆಲವು ದಿನಗಳಿಂದ ಸುದ್ದಿ ಹಬ್ಬಿದೆ. ಇದಕ್ಕೆ ಸ್ವತಃ ಸಂಜನಾ ಆನಂದ್‌ ಅವರು ಸ್ಪಷ್ಟನೆ ನೀಡಿದ್ದಾರೆ.

ನಿವೇದಿತಾ ಗೌಡರಿಂದ ದೂರ ಆಗಿರುವ ಚಂದನ್ ಶೆಟ್ಟಿ, ಸದ್ಯ ಸಿನೆಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಆದರೆ ಚಂದನ್‌ ಎರಡನೇ ಮದುವೆ ಆಗುತ್ತಿದ್ದಾರೆಂದು ಕಳೆದ ಕೆಲವು ದಿನಗಳಿಂದ ಸುದ್ದಿ ಹಬ್ಬಿದ್ದು, ಕನ್ನಡ ನಟಿ ಸಂಜನಾ ಆನಂದ್ ಅವರು ಚಂದನ್ ಬಾಳಿಗೆ ಬೆಳಕಾಗಿ ಬರಲಿದ್ದಾರೆಂದು ಸುದ್ದಿ ಹಬ್ಬಿತ್ತು. ಈ ಸುದ್ದಿಯನ್ನು ಅನೇಕ ಮಂದಿ ನಿಜ ಎಂದುಕೊಂಡಿದ್ದರು ಕೂಡ.

ಇನ್ಸ್ಟಾಗ್ರಾಮ್‌ನಲ್ಲಿ ಸ್ಪಷ್ಟನೆ ಕೊಟ್ಟಿರುವ ಸಂಜನಾ ಆನಂದ್, “ಚಂದನ್ ಶೆಟ್ಟಿ ಜೊತೆ ನಾನು ಮದುವೆಯಾಗುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು, ಈ ತರಹದ ಸುಳ್ಳು ಸುದ್ದಿಗಳನ್ನೆಲ್ಲ ಹಬ್ಬಿಸಬೇಡಿ” ಎಂದು ಮನವಿ ಮಾಡಿಕೊಂಡಿದ್ದಾರೆ.

ಸದ್ಯ ಚಂದನ್ ಶೆಟ್ಟಿ ಸದ್ಯಕ್ಕೆ ಬ್ಯಾಚುಲರ್ ಜೀವನ ಎಂಜಾಯ್ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶನ, ಹಾಡು, ಅಭಿನಯ ಎಂದು ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ದುಬೈ ಪ್ರವಾಸ ಕೂಡ ಹೋಗಿದ್ದರು.

Leave a Comment

Leave a Reply

Your email address will not be published. Required fields are marked *

error: Content is protected !!