ಅತ್ಯಾಚಾರ ಸಂತ್ರಸ್ತೆಯ ಕಿಡ್ನ್ಯಾಪ್ ಕೇಸ್; ಭವಾನಿ ರೇವಣ್ಣಗೆ ಸುಪ್ರೀಂ ನಿಂದ ಸಿಕ್ತು ಮಹತ್ವ ಆದೇಶ
ನ್ಯೂಸ್ ಆ್ಯರೋ: ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅತ್ಯಾಚಾರ ಕೇಸ್‌ನ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ್ದ ಕೇಸ್‌ನಲ್ಲಿ ಈ ಹಿಂದೆ ಭವಾನಿ ರೇವಣ್ಣ ಜಾಮೀನು ಪಡೆದಿದ್ದರು. ಇದಕ್ಕೆ ತಡೆಯಾಜ್ಞೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇಂದು ವಿಚಾರಣೆ ನಡೆಸಿದ ಕೋರ್ಟ್ ತಡೆಯಾಜ್ಞೆ ನಿರಾಕರಿಸಿದೆ. ಇದರಿಂದ ಭವಾನಿ ರೇವಣ್ಣ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ಭವಾನಿ ರೇವಣ್ಣ ಅವರ ಪುತ್ರನೂ ಆಗಿರುವ ಜೆಡಿಎಸ್ ಮಾಜಿ ಸಂಸದ ಎಚ್.ಡಿ.ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಇದಕ್ಕೆ ಸಬಂಧಿಸಿದ್ದು ಎನ್ನಲಾದ ಹಲವು ಅಶ್ಲೀಲ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿದ್ದವು. ಬಳಿಕ ಈ ಪ್ರಕರಣದಲ್ಲಿ ಪ್ರಜ್ವಲ್ ಅವರ ಬಂಧನವೂ ಆಗಿತ್ತು.
ಇದಾದ ನಂತರ ಅಶ್ಲೀಲ ವಿಡಿಯೋದಲ್ಲಿದ್ದರು ಎನ್ನಲಾದ ಸಂತ್ರಸ್ತ ಮಹಿಳೆಯೊಬ್ಬರು ದಿಢೀರ್ ಕಾಣೆಯಾಗಿದ್ದರು. ಈ ಸಂಬಂಧ ಸಂತ್ರಸ್ತ ಮಹಿಳೆಯ ಪುತ್ರ ಮೈಸೂರಿನ ಕೆ.ಆರ್.ನಗರ ಠಾಣೆಗೆ ದೂರು ನೀಡಿದ್ದರು. ಎಚ್.ಡಿ.ರೇವಣ್ಣ, ಭವಾನಿ ಹಾಗೂ ಅಬರ ಸಂಬಂಧಿ ಬಾಬು ಎಂಬುವರ ವಿರುದ್ಧ ಕೇಸ್ ದಾಖಲಾಗಿತ್ತು. ಬಳಿಕ ಎಸ್‌ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ಅರೆಸ್ಟ್ ಮಾಡಿದ್ದರು.
ಈ ಬೆಳವಣಿಗೆ ನಂತರ ಭವಾನಿ ರೇವಣ್ಣ ಅವರು ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ನಲ್ಲಿ ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಕೂಡ ಮಂಜೂರಾಗಿತ್ತು. ಭವಾನಿ ಅವರು ಮೈಸೂರು, ಹಾಸನ ಜಿಲ್ಲೆಗಳನ್ನು ಪ್ರವೇಶಿಸಬಾರದು ಎಂದೂ ಷರತ್ತು ವಿಧಿಸಿ, ಜಾಮೀನು ನೀಡಿತ್ತು. ಬಳಿಕ ಕರ್ನಾಟಕ ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ, ಎಸ್‌ಐಟಿ ಅಧಿಕಾರಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಭವಾನಿ ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನಿಗೆ ತಡೆಯಾಜ್ಞೆ ನೀಡುವಂತೆ ಎಸ್‌ಐಟಿ ಮನವಿ ಮಾಡಿತ್ತು. ಬಳಿಕ ಭವಾನಿ ರೇವಣ್ಣ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಕೂಡ ನೀಡಿತ್ತು. ಇಂದು ವಿಚಾರಣೆ ನಡೆಸಿದ ಕೋರ್ಟ್, ಕರ್ನಾಟಕ ಹೈಕೋರ್ಟ್ ತೀರ್ಪನ್ನೇ ಎತ್ತಿ ಹಿಡಿದಿದೆ. ಇದರಿಂದ ಭವಾನಿ ರೇವಣ್ಣ ಅವರಿಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
Leave a Comment