ಹಿರಿಯ ಸಾಹಿತಿ ನಾ. ಡಿಸೋಜಾ ಇನ್ನಿಲ್ಲ

na-dsouza
Spread the love

ನ್ಯೂಸ್ ಆ್ಯರೋ: ಕನ್ನಡದ ಹಿರಿಯ ಸಾಹಿತಿ ನಾ. ಡಿಸೋಜಾ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ನಾ.ಡಿಸೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಶರಾವತಿ ಮುಳುಗಡೆ ಪ್ರದೇಶದ ಹಿನ್ನೆಲೆ ಕಥನವಿದ್ದ ಇವರ ‘ದ್ವೀಪ’ ಕಾದಂಬರಿ ಸಿನಿಮಾ ಆಗಿತ್ತು.

ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಮಾಹಿತಿ ಪ್ರಕಟಿಸಿದ್ದಾರೆ. ಹಿರಿಯ ಸಾಹಿತಿ ನಾ.ಡಿಸೋಜ ನಿಧನದ ವಿಷಯ ತಿಳಿಯುತ್ತಿದ್ದಂತೆ ರಾಜ್ಯದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!