ಮಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ; ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿ
ನ್ಯೂಸ್ ಆ್ಯರೋ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪರದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.
ಬೆಳಗಿನ ಜಾವ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ನಂತರ ಖಾಸಗಿ ಟೂರಿಸ್ಟ್ ಬಸ್ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎನ್ನಲಾಗಿದೆ.
ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದೆ.
ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆಗೆ ಉರುಳಿದೆ. ಗಾಯಾಳುಗಳಿಗೆ ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Leave a Comment