ಬ್ರಹ್ಮಗಂಟು ನಟಿ ಶೋಭಿತಾ ಶಿವಣ್ಣ ದುರಂತ ಅಂತ್ಯ; ದುರಂತಕ್ಕೆ ಅಸಲಿ ಕಾರಣವೇನು?

Shobitha no more
Spread the love

‘ಎರಡೊಂದ್ಲಾ ಮೂರು’, ‘ಒಂದ್‌ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ. ಹಾಸನ‌‌ ಮೂಲದ ಸಕಲೇಶಪುರದನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದ ಶೋಭಿತಾ ಅವರು ಮದುವೆ ಬಳಿಕ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿತ್ತು.

ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ನಟಿಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಶನಿವಾರ (ನವೆಂಬರ್​ 30) ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಶನಿವಾರವಷ್ಟೇ ಸೋಶಿಯಲ್‌ ಮೀಡಿಯಾದಲ್ಲಿ ಸ್ಟೋರಿ ಶೇರ್ ಮಾಡಿದ್ದರು. ಆ ಬಳಿಕ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದ್ದು ಅಚ್ಚರಿಗೆ ಕಾರಣ ಆಗಿದೆ.

ಮದುವೆಯ ನಂತರ ಶೋಭಿತಾ ಅವರು ಹೈದರಾಬಾದ್‌ನ ಕೊಂಡಾಪುರ ಶ್ರೀರಾಮ ಕಾಲೋನಿಯಲ್ಲಿ ವಾಸವಾಗಿದ್ದರು. ಶೋಭಿತಾ ಅವರ ಈ ದುರಂತ ಅಂತ್ಯ ಸಾಕಷ್ಟು ಅನುಮಾನಗಳಿಗೂ ಕಾರಣವಾಗಿದೆ. ಶೋಭಿತಾ ಅವರ ಕುಟುಂಬ ಸದಸ್ಯರು ಹೈದರಾಬಾದ್‌ಗೆ ತೆರಳಿದ್ದು, ಅಸಲಿಗೆ ಏನಾಯ್ತು ಅನ್ನೋ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸೈಬರಾಬಾದ್‌ನ ಗಚ್ಚಿಬೌಲಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲು ಮಾಡಲಾಗಿದೆ.

ಮೇಲ್ನೋಟಕ್ಕೆ ಮದುವೆಯಾದ ಮೇಲೆ ಶೋಭಿತಾ ಅವರ ಬದುಕಿನ ಶೈಲಿ ಬದಲಾಗಿದ್ದು, ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿ ಇರಲಿಲ್ಲ ಅನ್ನೋ ಅನುಮಾನಗಳನ್ನು ಹುಟ್ಟಿ ಹಾಕಿದೆ. ನಟಿ ಶೋಭಿತಾ ಶಿವಣ್ಣ ಅವರು ಸೈಬರಾಬಾದ್ ಮೂಲದ ಸುಧೀರ್ ಎಂಬುವವರನ್ನು ವಿವಾಹವಾಗಿದ್ದರು. ಮದುವೆಯ ಹೈದರಾಬಾದ್‌ನಲ್ಲೇ ಸೆಟಲ್ ಆಗಿದ್ದ ಶೋಭಿತಾ ಅವರು ಕಳೆದ ಒಂದೂವರೆ ವರ್ಷದಿಂದ ಬಣ್ಣ ಹಚ್ಚಿರಲಿಲ್ಲ. ಯಾವುದೇ ಧಾರಾವಾಹಿ, ಸಿನಿಮಾದಲ್ಲಿ ಶೋಭಿತಾ ಅವರು ಅಭಿನಯಿಸಿರಲಿಲ್ಲ.

ಧಿಡೀರ್ ಮದುವೆಯಾಗಿದ್ದ ಶೋಭಿತಾ ಶಿವಣ್ಣ ಅವರು ಇನ್ಸ್‌ಸ್ಟಾಗ್ರಾಂನಲ್ಲಿ ಮದುವೆ ಫೋಟೋಗಳನ್ನು ಪೋಸ್ಟ್ ಮಾಡಿದ್ದರು. ಆದರೆ, ಕೆಲವು ದಿನಗಳ ಬಳಿಕ ಇನ್ಸ್‌ಸ್ಟಾಗ್ರಾಂನಲ್ಲಿ ಗಂಡನ ಒಂದು ಫೋಟೋ ಬಿಡದಂತೆ ಎಲ್ಲವನ್ನು ಡಿಲೀಟ್ ಮಾಡಿದ್ದರು. ಸೈಬರಾಬಾದ್‌ನ ಗಚ್ಚಿಬೌಲಿ ಠಾಣೆಯಲ್ಲಿ ನಟಿ ಶೋಭಿತಾ ಶಿವಣ್ಣ ದುರಂತ ಅಂತ್ಯದ ಪ್ರಕರಣ ದಾಖಲಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!