ಅಂಗಡಿ ಮಾಲೀಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಕಾಮುಕನ ಕೃತ್ಯ ಮೊಬೈಲ್ ನಲ್ಲಿ ಸೆರೆ

20240905 191818
Spread the love

ನ್ಯೂಸ್ ಆ್ಯರೋ : 70 ವರ್ಷದ ಮೊಹಮ್ಮದ್ ಅನ್ವರ್ ಆತನ ಅಂಗಡಿಗೆ ಚಾಕೊಲೇಟ್ ಖರೀದಿಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಾಮುಕನ ಈ ಹೀನಾಯ ಕೃತ್ಯವೂ ಮೊಬೈಲ್ ನಲ್ಲಿ ಸೆರೆಯಾಗಿದೆ.

ಈ ಘಟನೆಯು ಸೆ. 03 ರಂದು ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ. ನೀಚ ವೃದ್ಧನು ಪುಟ್ಟ ಬಾಲಕಿ ಎಂದು ನೋಡದೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆದಿದ್ದಾನೆ.

ಈತನ ಹೇಯ ಕೃತ್ಯವನ್ನು ಅಲ್ಲೇ ಇದ್ದ ಸಾರ್ವಜನಿಕರೊಬ್ಬರು ತಮ್ಮ ಫೋನ್ ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ವೈರಲ್ ಆಗಿದೆ. ಇದೀಗ ಸೋಶಿಯಲ್ ಮೀಡಿಯಾ ಬಳಕೆದಾರರು ಈತನ ವಿರುದ್ಧ ಕಿಡಿಕಾರಿದ್ದಾರೆ.


ಸಂತ್ರಸ್ತ ಬಾಲಕಿಯು ಬುಡಕಟ್ಟ ಜನಾಂಗಕ್ಕೆ ಸೇರಿರುವುದರಿಂದ ಆತನ ವಿರುದ್ಧ ಎಸ್‌ಸಿ/ಎಸ್‌ಟಿ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!