Ration Card : ಆಗಸ್ಟ್ 31ರ ಒಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿಕೊಳ್ಳಿ – ಬೇಕಾಗುವ ದಾಖಲೆಗಳೇನು? ಆನ್ ಲೈನ್ ನಲ್ಲಿ ಮಾಡೋದು ಹೇಗೆ?

IMG 20240818 WA0050
Spread the love

ನ್ಯೂಸ್ ಆ್ಯರೋ : ಪಡಿತರ ಕಾರ್ಡ್‍ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು ಇನ್ನೂ ಮಾಡಿಸದೆ ಬಾಕಿ ಇರುವ ಪಡಿತರ ಚೀಟಿಗಳ ಫಲಾನುಭಾವಿಗಳು ತಪ್ಪದೇ ಇ-ಕೆವೈಸಿ ಮಾಡಿಸುವಂತೆ ಸೂಚನೆ ನೀಡಲಾಗಿದೆ.

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಹತ್ತಿರದ ನ್ಯಾಯ ಬೆಲೆ ಅಂಗಡಿಗೆ ಆಗಸ್ಟ್ 31 ರೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಬೇಕಾಗುವ ದಾಖಲೆಗಳು
ಪಡಿತರ ಚೀಟಿಯ ಒರಿಜಿನಲ್ ಪ್ರತಿ
ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ
ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ

ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ

ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ ಗೆ ಭೇಟಿ ನೀಡಿ.
ಸಕ್ರಿಯ ಕಾರ್ಡ್ ನೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿ.
ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.
ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
ಮುಂದುವರಿಯಿರಿ / ಸಲ್ಲಿಸಿ ಬಟನ್ ಆಯ್ಕೆ ಮಾಡಿ.
ನೀವು ಈಗ ನಿಮ್ಮ ಮೊಬೈಲ್ ಫೋನ್ಗೆ ಒಟಿಪಿಯನ್ನು ಸ್ವೀಕರಿಸುತ್ತೀರಿ.

ಆಧಾರ್ ಪಡಿತರ ಲಿಂಕ್ ಪುಟದಲ್ಲಿ ಒಟಿಪಿಯನ್ನು ನಮೂದಿಸಿ ಮತ್ತು ಅದಕ್ಕಾಗಿ ನಿಮ್ಮ ವಿನಂತಿಯನ್ನು ಈಗ ಸಲ್ಲಿಸಿದಂತಾಗುತ್ತದೆ.

Leave a Comment

Leave a Reply

Your email address will not be published. Required fields are marked *

error: Content is protected !!