Valmiki Corporation Scam : 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎಸ್ಐಟಿ – 50 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಸೀಜ್

N62520614717228478010567965ca5324d54ac3033a22cf090386ed1e23b49386204126b69d055202a7919e
Spread the love

ನ್ಯೂಸ್ ಆ್ಯರೋ : ರಾಜ್ಯಾದ್ಯಂತ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿದಂತೆ ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ. ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ. ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಪ್ರಕರಣದಲ್ಲಿ ಸುಮಾರು 50 ಕೋಟಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಸೀಜ್ ಮಾಡಿ ನ್ಯಾಯಾಲಯದ ಸುಪರ್ದಿಗೆ ನೀಡಲಾಗಿದೆ.

ಪ್ರಕರಣದಲ್ಲಿ ಮೊದಲಿಗೆ ಬಂಧನವಾದ ಆರೋಪಿಗಳ ವಿರುದ್ಧ ಸುಮಾರು‌ 3000 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಸಾಕಷ್ಟು ಸಾಕ್ಷ್ಯಗಳನ್ನ ದಾಖಲಿಸಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

ಸುಮಾರು 94 ಕೋಟಿ ರುಪಾಯಿ ನಿಗಮದ ಹಣವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಬಿ ನಾಗೇಂದ್ರ ಅವರ ಮೇಲೆ ಆಪ್ತನೋರ್ವನಿಂದ 25 ಲಕ್ಷ ಲಂಚ ಸ್ವೀಕರಿಸಿರುವ ಆರೋಪವೂ ಇದೆ.

Leave a Comment

Leave a Reply

Your email address will not be published. Required fields are marked *