ಶೀಘ್ರವೇ ಜುಲೈ, ಆಗಸ್ಟ್ ತಿಂಗಳ ‘ಗೃಹಲಕ್ಷ್ಮಿ’ ಹಣ ಯಜಮಾನಿಯರ ಖಾತೆಗೆ ಜಮೆ; ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Spread the love

ನ್ಯೂಸ್ ಆ್ಯರೋ :  ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬಾರದಿದ್ದ ಕಾರಣ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ವರ್ಗಾಯಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈವರೆಗೆ 11 ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮಿಯ ಜೂನ್ ತಿಂಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಈ ಹಣ ಕೆಲವರ ಖಾತೆಗೆ ಜಮೆಯಾಗಲಿಲ್ಲ.

ಆದ್ದರಿಂದ ಜೂನ್ ತಿಂಗಳ ಜೊತೆಗೆ ಜುಲೈ ಹಾಗೂ ಅಗಸ್ಟ್ ತಿಂಗಳ ಹಣವನ್ನು ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ. ತಾಂತ್ರಿಕ ದೋಷದಿಂದ ಈ ಕಾರ್ಯವು ವಿಳಂಬವಾಗಿದೆ ಎಂದು ಚಿತ್ರದುರ್ಗದಲ್ಲಿ  ಸುದ್ದಿಗಾರರೊಂದಿಗೆ  ಹೇಳಿದ್ದಾರೆ.

15 ದಿನಗಳಿಂದ ಗೃಹಲಕ್ಷ್ಮಿ ಹಣ ಖಾತೆಗೆ ಹಾಕುವ ಪ್ರಕ್ರಿಯೆ ನಡೆಯುತ್ತಿದ್ದು, ಇನ್ನು 15 ದಿನಗಳಲ್ಲಿ ಎಲ್ಲರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಆಶ್ವಾಸನೆ ನೀಡಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!