ಫಿಫಾ ವಿಶ್ವಕಪ್‌: ಫೈನಲ್‌ಗೆ ಲಗ್ಗೆ ಇಟ್ಟ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ – ಸೆಮಿಯಲ್ಲಿ ನಡೆಯದ ಕ್ರೊಯೇಷಿಯಾ ಮ್ಯಾಜಿಕ್

ಫಿಫಾ ವಿಶ್ವಕಪ್‌: ಫೈನಲ್‌ಗೆ ಲಗ್ಗೆ ಇಟ್ಟ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ – ಸೆಮಿಯಲ್ಲಿ ನಡೆಯದ ಕ್ರೊಯೇಷಿಯಾ ಮ್ಯಾಜಿಕ್

ನ್ಯೂಸ್ ಆ್ಯರೋ : ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ಕ್ರೊಯೇಷಿಯಾ ತಂಡವನ್ನು 3-0 ಗೋಲುಗಳ ಅಂತರದಲ್ಲಿ ಮಣಿಸುವ ಮೂಲಕ ಫಿಫಾ ವಿಶ್ವಕಪ್‌ನ ಫೈನಲ್‌ಗೆ ತಲುಪಿದೆ.

ಮಂಗಳವಾರ ತಡರಾತ್ರಿ ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಕ್ರೊಯೇಷಿಯಾ ತಂಡವನ್ನು 3-0 ಗೋಲ್​ಗಳಿಂದ ಅರ್ಜೆಂಟೀನಾ ಮಣಿಸಿತು. ಈ ಮೂಲಕ ಅರ್ಜೆಂಟೀನಾ ತಂಡ ಆರನೇ ಬಾರಿ ವಿಶ್ವ ಕಪ್​ನ ಫೈನಲ್​ಗೇರಿದಂತಾಗಿದೆ.

ಅರ್ಜೆಂಟೀನಾ ತಂಡದ ಪರ ಜೂಲಿಯಾನ್​ ಅಲ್ವಾರೆಜ್​ (39 ಮತ್ತು 69ನೇ ನಿಮಿಷ) ಅವಳಿ ಗೋಲ್​ ಬಾರಿಸಿದರೆ, ಸ್ಟಾರ್​ ಆಟಗಾರ ಲಿಯೋನೆಲ್​ ಮೆಸ್ಸಿ (39ನೇ ನಿಮಿಷ) ಏಕೈಕ ಗೋಲ್​ ಬಾರಿಸಿದರು. 16ನೇ ಸುತ್ತಿನ ಪಂದ್ಯದಲ್ಲಿ ಜಪಾನ್​ ಹಾಗೂ ಕ್ವಾರ್ಟರ್​ಫೈನಲ್​ ಪಂದ್ಯದಲ್ಲಿ ಬಲಿಷ್ಠ ಬ್ರೆಜಿಲ್​ ತಂಡಕ್ಕೆ ಆಘಾತ ಕೊಟ್ಟು ಸೆಮಿ ಹಂತಕ್ಕೆ ಪ್ರವೇಶ ಪಡೆದಿದ್ದ ಕ್ರೊಯೇಷಿಯಾ ಬಳಗ ಅಂದುಕೊಂಡಂತೆ ಆಟವಾಡಲಿಲ್ಲ.

ಪಂದ್ಯದ ಪ್ರಥಮಾರ್ಧ ಮುಕ್ತಾಯದ ವೇಳೆಗೆ 2-0 ಗೋಲ್​ಗಳ ಮುನ್ನಡೆ ಪಡೆದುಕೊಂಡ ಅರ್ಜೆಂಟೀನಾ ಬಳಗ, ದ್ವಿತೀಯಾರ್ಧದಲ್ಲೂ ಅದೇ ಮಾದರಿಯ ಆಟವನ್ನು ಮುಂದುವರಿಸಿ 69ನೇ ನಿಮಿಷದಲ್ಲಿ ಮತ್ತೊಂದು ಗೋಲ್​ ಹೊಡೆದು ಗೆಲುವಿಗೆ ಮತ್ತಷ್ಟು ಹತ್ತಿರವಾಯಿತು. ಇಂದು ರಾತ್ರಿ ನಡೆಯುವ ಫ್ರಾನ್ಸ್ ಮತ್ತು ಮೊರಾಕ್ಕೊ ತಂಡಗಳ ನಡುವಿನ ಎರಡನೇ ಸೆಮಿಫೈನಲ್​ ಪಂದ್ಯದ ವಿಜೇತರ ಜತೆ ಫೈನಲ್​ನಲ್ಲಿ ಅರ್ಜೆಂಟೀನಾ ಆಟವಾಡಲಿದೆ.

Related post

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…

Leave a Reply

Your email address will not be published. Required fields are marked *