Women’s T20 WC : ಸೆಮಿಫೈನಲ್ಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ವನಿತೆಯರಿಗೆ ಸೋಲು

Women’s T20 WC : ಸೆಮಿಫೈನಲ್ಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ವನಿತೆಯರಿಗೆ ಸೋಲು

ನ್ಯೂಸ್ ಆ್ಯರೋ : ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಟಿ20 ಮಹಿಳಾ ವಿಶ್ವಕಪ್ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ ಐದು ರನ್ ಗಳ ಗೆಲುವು ದಾಖಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಕಲೆಹಾಕುವ ಮೂಲಕ ಭಾರತಕ್ಕೆ ಭಾರಿ ಗುರಿ ನೀಡಿತ್ತು. ಆರಂಭಿಕ ಬ್ಯಾಟರ್ ಗಳಾದ ಅಲಿಸ್ಸಾ ಹೀಲಿ ಮತ್ತು ಬೆತ್ ಮೂನಿ ಅತ್ಯುತ್ತಮ ಆರಂಭ ಒದಗಿಸಿದರು. 7.3 ಓವರ್ ಗಳಲ್ಲಿ ಈ ಜೋಡಿ 52 ರನ್ ಕಲೆ ಹಾಕುವ ಮೂಲಕ ಆಸ್ಟ್ರೇಲಿಯಾದ ಇನ್ನಿಂಗ್ಸ್‌ಗೆ ಉತ್ತಮ ಅಡಿಪಾಯ ಹಾಕಿದರು.

ಅಲಿಸ್ಸಾ ಹೀಲಿ 26 ಎಸೆತಗಳಲ್ಲಿ 25 ರನ್ ಗಳಿಸಿ ಔಟಾದರೆ, ಬೆತ್ ಮೂನಿ ಅತ್ಯುತ್ತಮ ಬ್ಯಾಟಿಂಗ್ ಮುಂದುವರೆಸಿದರು. 37 ಎಸೆತಗಳಲ್ಲಿ 7 ಬೌಂಡರಿ 1 ಸಿಕ್ಸರ್ ಸಹಿತ 54 ರನ್ ಗಳಿಸಿ ಈ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಎರಡನೇ ಅರ್ಧಶತಕ ಗಳಿಸಿದರು. ಭಾರತ ತಂಡದ ಫೀಲ್ಡಿಂಗ್‌ ಸಾಧಾರಣವಾಗಿತ್ತು, ಹಲವು ಕ್ಯಾಚ್‌ಗಳು, ಸ್ಟಂಪೌಟ್ ಅವಕಾಶಗಳನ್ನು ಕೈಚೆಲ್ಲಿದರು. ಆಶ್ಲೆ ಗಾರ್ಡನರ್ 18 ಎಸೆತಗಳಲ್ಲಿ 31 ರನ್ ಗಳಿಸಿ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಗ್ರೇಸ್ ಹ್ಯಾರಿಸ್ 4 ಎಸೆತಗಳಲ್ಲಿ 7 ರನ್ ಗಳಿಸಿ ಶಿಖಾ ಪಾಂಡೆಗೆ ಕ್ಲೀನ್‌ ಬೌಲ್ಡ್ ಆದರು.

ನಾಯಕಿ ಮೆಗ್ ಲ್ಯಾನಿಂಗ್ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು. ಆರಂಭದಲ್ಲಿ ನಿಧಾನಗತಿಯಲ್ಲಿ ಆಡಿದ ಅವರು ಅಂತಿಮ ಓವರ್ ಗಳಲ್ಲಿ ಅಬ್ಬರಿಸಿದರು. 34 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ಸಹಿತ 49 ರನ್ ಗಳಿಸಿ ಮಿಂಚಿದರು. 20ನೇ ಓವರ್ ನಲ್ಲಿ ಅವರು 18 ರನ್ ಗಳಿಸಿ ಆಸ್ಟ್ರೇಲಿಯಾ ಬೃಹತ್ ಮೊತ್ತ ಕಲೆ ಹಾಕಲು ಸಹಕಾರಿಯಾದರು. ಭಾರತದ ಪರವಾಗಿ ಶಿಖಾ ಪಾಂಡೆ 4 ಓವರ್ ಗಳಲ್ಲಿ 32 ರನ್ ನೀಡಿ 2 ವಿಕೆಟ್ ಪಡೆದುಕೊಂಡರು. ರಾಧಾ ಯಾದವ್ ಮತ್ತು ದೀಪ್ತಿ ಶರ್ಮಾ ತಲಾ ಒಂದು ವಿಕೆಟ್ ಪಡೆದರು. ಪ್ರಮುಖ ವೇಗದ ಬೌಲರ್ ರೇಣುಕಾ ಸಿಂಗ್ ಠಾಕೂರ್ 4 ಓವರ್ ಗಳಲ್ಲಿ 41 ರನ್ ನೀಡುವ ಮೂಲಕ ದುಬಾರಿಯಾದರು.

ಭಾರೀ ಗುರಿ ಬೆನ್ನತ್ತಿದ್ದ ಭಾರತ ಆರಂಭಿಕ ಆಘಾತ ಅನುಭವಿಸಿ ಸತತ ಮೂರು ವಿಕೆಟ್ ಕಳೆದುಕೊಂಡಿತು. ಆದರೆ ನಾಲ್ಕನೇ ವಿಕೆಟ್ ಗೆ ನಾಯಕಿ ಹರ್ಮನ್ ಪ್ರೀತ್ ಕೌರ್ ಹಾಗೂ ಜೆಮಿಮಾ ರೋಡ್ರಿಗಸ್ ಅರ್ಧಶತಕದ ಜೊತೆಯಾಟ ನೀಡಿದರು.

ಕೆಟ್ಟ ಹೊಡೆತಕ್ಕೆ ಯತ್ನಿಸಿದ ಜೆಮಿಮಾ ರೋಡ್ರಿಗಸ್ 43 ರನ್ ಗಳಿಸಿ ಔಟಾದರೆ, ನಾಯಕಿ ಹರ್ಮನ್ ಪ್ರೀತ್ ಕೌರ್ 52 ರನ್ ಗಳಿಸಿ ರನೌಟ್ ಆದರು‌. ಕೊನೆಯಲ್ಲಿ ಸತತ ವಿಕೆಟ್ ಕಳೆದುಕೊಂಡ ಭಾರತ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ಕೇವಲ ರನ್ ಗಳಿಸಲಷ್ಟೇ ಶಕ್ತವಾಗಿ ಸೋಲನುಭವಿಸಿತು.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *