ಭೀಕರ ರಸ್ತೆ ಅಪಘಾತ – ಗಂಭೀರವಾಗಿ ಗಾಯಗೊಂಡ ಟೀಮ್ ಇಂಡಿಯಾ ಕ್ರಿಕೆಟಿಗ ರಿಷಭ್ ಪಂತ್

ಭೀಕರ ರಸ್ತೆ ಅಪಘಾತ – ಗಂಭೀರವಾಗಿ ಗಾಯಗೊಂಡ ಟೀಮ್ ಇಂಡಿಯಾ ಕ್ರಿಕೆಟಿಗ ರಿಷಭ್ ಪಂತ್

ನ್ಯೂಸ್ ಆ್ಯರೋ‌ : ಟೀಂ ಇಂಡಿಯಾದ ವಿಕೆಟ್ ಕೀಪರ್, ಭರವಸೆಯ ಯುವ ಪ್ರತಿಭೆ ರಿಷಭ್ ಪಂತ್ ಅವರು ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಇಂದು ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಭ್ ಅವರನ್ನು ದೆಹಲಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು ಎಂದು ಮಾಧ್ಯಮಗಳು ವರದಿ ಮಾಡಿವೆ.

ಘಟನೆಯಲ್ಲಿ ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ ಅವರ ಸದ್ಯದ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ ಸುಶೀಲ್ ನಗರ್ ಮಾಹಿತಿ ನೀಡಿದ್ದಾರೆ.

ಸ್ಥಳೀಯರ ಮಾಹಿತಿಯಂತೆ, ರಿಷಬ್ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಕೂಡಲೇ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ಸಾಗಿಸಲಾಗಿತ್ತು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *