CWC2023 : ವಿಶ್ವಕಪ್ ಮಧ್ಯದಲ್ಲೇ ವಿದಾಯ ಘೋಷಿಸಿದ ಇಂಗ್ಲೆಂಡ್ ನ ಸ್ಟಾರ್ ಆಲ್ ರೌಂಡರ್ – ಪಾಕ್ ವಿರುದ್ಧ ಕೊನೆ ಪಂದ್ಯ ಆಡುವ ನಿರೀಕ್ಷೆ

CWC2023 : ವಿಶ್ವಕಪ್ ಮಧ್ಯದಲ್ಲೇ ವಿದಾಯ ಘೋಷಿಸಿದ ಇಂಗ್ಲೆಂಡ್ ನ ಸ್ಟಾರ್ ಆಲ್ ರೌಂಡರ್ – ಪಾಕ್ ವಿರುದ್ಧ ಕೊನೆ ಪಂದ್ಯ ಆಡುವ ನಿರೀಕ್ಷೆ

ನ್ಯೂಸ್ ಆ್ಯರೋ : ಈ ಬಾರಿಯ ವಿಶ್ವಕಪ್ ಪಂದ್ಯಾಟದಲ್ಲಿ ಇಂಗ್ಲೆಂಡ್ ಸತತ ಸೋಲಿನೊಂದಿಗೆ ಕೊನೆಯ ಸ್ಥಾನದಲ್ಲಿದ್ದು, ಇದರ ನಡುವೆ ತಂಡದ ಪ್ರಮುಖ ಆಟಗಾರ ಆಲ್‌ರೌಂಡ್‌ಗಳಲ್ಲಿ ಒಬ್ಬರಾಗಿರುವ ಡೇವಿಡ್ ವಿಲ್ಲಿ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಇವರ ವಿದಾಯದ ಘೋಷಣೆ ಕ್ರಿಕೆಟ್ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಇಂಗ್ಲೆಂಡ್ ತಂಡದ ಪ್ರಮುಖ ಆಲ್​ರೌಂಡರ್​ಗಳಲ್ಲಿ ಒಬ್ಬರಾಗಿರುವ ವಿಲ್ಲಿ, ಈ ಬಾರಿಯ ವಿಶ್ವಕಪ್​ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುವುದಾಗಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ನಡೆಯಲಿರುವ ಪಂದ್ಯವು ಡೇವಿಡ್ ವಿಲ್ಲಿ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗುವ ಸಾಧ್ಯತೆಯಿದೆ. ಈ ಮೂಲಕ 33 ವರ್ಷದ ಎಡಗೈ ಆಲ್​ರೌಂಡರ್ ಇಂಟರ್​ನ್ಯಾಷನಲ್ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಡೇವಿಡ್ ಹೇಳಿಕೆ ಹೀಗಿದೆ:

ನಾನು ಬಾಲ್ಯದಿಂದಲೂ ಇಂಗ್ಲೆಂಡ್ ಪರ ಆಡಬೇಕೆಂಬ ಕನಸು ಕಂಡಿದ್ದೆ. ಈ ಕನಸುಗಳು ಈಡೇರಿವೆ. ಇದೀಗ ನಿವೃತ್ತಿ ಹೊಂದುವ ಬಗ್ಗೆ ಯೋಚಿಸಿದೆ. ಅದರಂತೆ ವಿಶ್ವಕಪ್‌ನ ಕೊನೆಯಲ್ಲಿ ನಾನು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಡೇವಿಡ್ ವಿಲ್ಲಿ ತಿಳಿಸಿದ್ದಾರೆ.

ಡೇವಿಡ್ ವಿಲ್ಲಿ ಕ್ರಿಕೆಟ್ ವೃತ್ತಿ ಜೀವನ:

2015 ರಲ್ಲಿ ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಿದ್ದ ಡೇವಿಡ್ ವಿಲ್ಲಿ 70 ಏಕದಿನ ಪಂದ್ಯಗಳಿಂದ 627 ರನ್ ಕಲೆಹಾಕಿದ್ದಾರೆ. ಹಾಗೆಯೇ 94 ವಿಕೆಟ್​ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಟಿ20 ಕ್ರಿಕೆಟ್​ನಲ್ಲಿ 43 ಪಂದ್ಯಗಳಿಂದ 226 ರನ್ ಹಾಗೂ 51 ವಿಕೆಟ್​ ಕಬಳಿಸಿದ್ದಾರೆ.

8 ವರ್ಷಗಳ ಅಂತರರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲಿರುವ ಡೇವಿಡ್ ಅವರು ಟಿ20ಯಲ್ಲಿ ಆಟವಾಡಬಹುದು. ಇನ್ನೂ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದಲ್ಲಿ ಆಟವಾಡುತ್ತಿರುವ ಡೇವಿಡ್ ಅವರು ಮುಂದೆಯೇ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *