Delhi Capitals : ರಿಷಬ್ ಪಂತ್ ಬದಲಿಗೆ ಹೊಸ ನಾಯಕನಿಗೆ ಪಟ್ಟ – ಈ ಬಾರಿ ಡೆಲ್ಲಿ‌ ಮುನ್ನಡೆಸೋದು ಯಾರು ಗೊತ್ತಾ..!

Delhi Capitals : ರಿಷಬ್ ಪಂತ್ ಬದಲಿಗೆ ಹೊಸ ನಾಯಕನಿಗೆ ಪಟ್ಟ – ಈ ಬಾರಿ ಡೆಲ್ಲಿ‌ ಮುನ್ನಡೆಸೋದು ಯಾರು ಗೊತ್ತಾ..!

ನ್ಯೂಸ್ ಆ್ಯರೋ : ಮಹಿಳಾ ಐಪಿಎಲ್ ಮುಗಿದ ಬೆನ್ನಲ್ಲೇ ಪುರುಷರ ಐಪಿಎಲ್ ಆರಂಭಗೊಳ್ಳಲಿದ್ದು, ಈಗಾಗಲೇ ಫ್ರ್ಯಾಂಚೈಸ್ ಗಳು ತಮ್ಮ‌‌ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಅವರು ಗಾಯಗೊಂಡ ಕಾರಣದಿಂದ ಈ ಸೀಸನ್ ಗೆ ನೂತನ ನಾಯಕನ ನೇಮಕ ಮಾಡಲಾಗಿದೆ.

ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಹೆಡ್ ಕೋಚ್ ರಿಕಿ ಪಾಂಟಿಂಗ್ ಮತ್ತು ಟೀಂ ಮ್ಯಾನೇಜ್ ಮೆಂಟ್ ಈ ಬಗ್ಗೆ ಸರ್ವಾನುಮತದ ನಿರ್ಧಾರ ಕೈಗೊಂಡಿದೆ. ಅಕ್ಷರ್ ಪಟೇಲ್ ಅವರು ಉಪ ನಾಯಕರಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ.

ಕಳೆದ ಡಿಸೆಂಬರ್‌ ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಪಂತ್ ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ. ಪಂತ್ ಸಂಪೂರ್ಣ ಕೂಟದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಮಧ್ಯಂತರ ಆಧಾರದ ಮೇಲೆ ತಂಡವನ್ನು ಮುನ್ನಡೆಸಲು ವಾರ್ನರ್ ಅವರನ್ನು ನೇಮಿಸಲಾಗಿದೆ.

ಈ ಮೊದಲು ಡೇವಿಡ್ ವಾರ್ನರ್ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿದ್ದರು. ಆದರೆ ವಾರ್ನರ್ ಫಾರ್ಮ್ ಕಳೆದುಕೊಂಡ ಬಳಿಕ, ತಂಡವೂ ಸತತ ಸೋಲಿನಿಂದ ನಿರಾಸೆ ಅನುಭವಿಸಿತ್ತು. ಇದಾದ ನಂತರ ವಾರ್ನರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ತಂಡದಿಂದಲೇ ಹೊರಗಿಡಲಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *