ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ – ಮತ್ತೆ ಡ್ಯೂಕ್-ಕೂಕಬುರಾ ಚೆಂಡು ವಿವಾದ, ಈ ಚೆಂಡುಗಳ ವ್ಯತ್ಯಾಸವೇನು ಗೊತ್ತಾ!

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ – ಮತ್ತೆ ಡ್ಯೂಕ್-ಕೂಕಬುರಾ ಚೆಂಡು ವಿವಾದ, ಈ ಚೆಂಡುಗಳ ವ್ಯತ್ಯಾಸವೇನು ಗೊತ್ತಾ!

ನ್ಯೂಸ್ ಆ್ಯರೋ‌ : ಭಾರತ ಕ್ರಿಕೆಟ್ ತಂಡ ಟೆಸ್ಟ್ ಪಂದ್ಯಗಳನ್ನು ಆಡಲು ವಿದೇಶದತ್ತ ಮುಖ ಮಾಡಿದಾಗಲೆಲ್ಲಾ ಡ್ಯೂಕ್ ಮತ್ತು ಕೂಕಬುರಾ ಚೆಂಡುಗಳ ವಿವಾದ ಮುನ್ನಲೆಗೆ ಬರುತ್ತದೆ. ವಿದೇಶಿ ಕ್ರಿಕೆಟಿಗರ ಅಚ್ಚುಮೆಚ್ಚಿನ ಕುಕಬುರಾ ಚೆಂಡಿಗೆ ಬಿಸಿಸಿಐ ವಿರೋಧ ವ್ಯಕ್ತಪಡಿಸುತ್ತದೆ. ಮುಂದಿನ ತಿಂಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ಈ ಚರ್ಚೆ ಮತ್ತೆ ಆರಂಭವಾಗಿದೆ. ಹಾಗಾದರೆ ಈ ಎರಡು ಚೆಂಡುಗಳ ವ್ಯತ್ಯಾಸಗಳೇನು? ವಿವಾದ ಯಾಕೆ? ಎನ್ನುವುದರ ಮಾಹಿತಿ ಇಲ್ಲಿದೆ.

ಜೂ. 7ರಿಂದ ಓವಲ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯಲಿದ್ದು, ಅದಕ್ಕಾಗಿ ಭಾರತ ತಂಡವು ಸಿದ್ಧತೆ ನಡೆಸಿದೆ. ಈ ಮಹತ್ತರ ಪಂದ್ಯದಲ್ಲಿ ಬಳಸಲಾಗುವ ಚೆಂಡು ಇದೀಗ ಸುದ್ದಿಗೆ ಗ್ರಾಸವಾಗಿದ್ದು, ಬಿಸಿಸಿಐ ಮತ್ತು ವಿದೇಶ ಆಟಗಾರರ ನಡುವಿನ ತಿಕ್ಕಾಟಕ್ಕೂ ಕಾರಣವಾಗಿದೆ.

ಆಸ್ಟ್ರೇಲಿಯಾದ ಮಾಜಿ ಆಟಗಾರರು ಕೂಕಬುರಾ ಬಾಲ್​ನಲ್ಲೇ ಪಂದ್ಯವನ್ನಾಡುವ ಮಾತುಗಳನ್ನಾಡಿದ್ದರು. ಇದಕ್ಕೆ ಬೆಂಬಲ ನೀಡಿದ್ದ ಮಾಜಿ ಆಸಿಸ್ ಕ್ರಿಕೆಟ್ ಆಟಗಾರ ರಿಕ್ಕಿ ಪಾಂಟಿಂಗ್ ಕೂಕಬುರಾ ಚೆಂಡಿನಲ್ಲೇ ಫೈನಲ್ ಪಂದ್ಯ ನಡೆಯಲಿದ್ದು, ಕೂಕಬುರಾ ಬಾಲ್​ನಲ್ಲೇ ಕಣಕ್ಕಿಳಿಯುತ್ತೇವೆ ಎಂದಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿಸಿಸಿಐ, ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಫೈನಲ್ ಪಂದ್ಯವನ್ನು ಡ್ಯೂಕ್ಸ್ ಬಾಲ್‌ ನಲ್ಲೇ ಆಡಲಾಗುತ್ತದೆ ಮತ್ತು ಕೂಕಬುರಾ ಚೆಂಡಿನಲ್ಲಿ ಅಲ್ಲ ಎಂದು ಸ್ಪಷ್ಟನೆ ನೀಡಿದೆ.

ವ್ಯತ್ಯಾಸಗಳೇನು?

ಆಸ್ಟ್ರೇಲಿಯಾದ ಕ್ರೀಡಾ ಪರಿಕರಗಳನ್ನು ತಯಾರಿಸುವ ಕಂಪನಿಯ ಹೆಸರು ಕೂಕಬುರಾ. ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಸೇರಿದಂತೆ ಹೆಚ್ಚಿನ ತಂಡಗಳು ತಮ್ಮ ದೇಶದಲ್ಲಿ ಟೆಸ್ಟ್‌ ಕ್ರಿಕೆಟ್ ಆಡಲು ಬಳಸುವುದು ಕೂಕಬುರಾ ಕಂಪನಿಯ ಚೆಂಡನ್ನು. ಈ ಚೆಂಡಿನ ಒಳಗಿನ ಎರಡು ಪದರಗಳನ್ನು ಕೈಯಲ್ಲೇ ಹೊಲಿಯಲಾಗುತ್ತದೆ. ಭಾರತ ಹಾಗೂ ನ್ಯೂಜಿಲೆಂಡ್‌ ನಡುವೆ ನಡೆದ ಡಬ್ಲ್ಯುಟಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಬಳಕೆಯಾದದ್ದು ಡ್ಯೂಕ್ಸ್‌ ಚೆಂಡು. ಇದರ ಬಣ್ಣ ಚೆರ‍್ರಿ ಹಣ್ಣಿನ ಕೆಂಪು.

ಕೂಕಬುರಾ ಚೆಂಡಿಗೆ ಹೋಲಿಸಿದರೆ ಎಸ್‌ಜಿ ಡ್ಯೂಕ್ಸ್ ಚೆಂಡಿನ ಹೊಲಿಗೆಗೆ ಬಳಸುವ ದಾರ ದಪ್ಪವಾಗಿರುತ್ತದೆ. ಹೊಲಿಗೆಗಳ ನಡುವಿನ ಅಂತರ ಎಸ್‌ಜಿ ಚೆಂಡಿನಲ್ಲಿ ಕಡಿಮೆ ಇರುತ್ತದೆ. ಡ್ಯೂಕ್ಸ್ ಬಾಲ್‌ನಲ್ಲಿನ ಭಾರವಾದ ಮೆರುಗೆಣ್ಣೆಯು ಚೆಂಡು ಸುಮಾರು 60 ಓವರ್‌ಗಳವರೆಗೆ ತನ್ನ ಸ್ವಿಂಗ್ ಅನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. 60 ಓವರ್‌ಗಳ ನಂತರ, ಚೆಂಡು ರಿವರ್ಸ್ ಸ್ವಿಂಗ್ ಪಡೆಯುತ್ತದೆ. ಕೂಕಬುರಾ ಚೆಂಡಿನ ಸೀಮ್‌ ಭಾಗದ ಗ್ರಿಪ್ ಚೆನ್ನಾಗಿರುವುದರಿಂದ ಬೌಲರ್‌ಗಳಿಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ಅದನ್ನು ಭದ್ರವಾಗಿ ಹಿಡಿಯಬಹುದು. ಕೂಕಬುರಾ ಚೆಂಡು ಹೊಳಪು ಕಳೆದುಕೊಂಡ ನಂತರವೂ ಎತ್ತರಕ್ಕೆ ಪುಟಿಯಬಲ್ಲದು. ಹೀಗಾಗಿ ವೇಗ ಹಾಗೂ ಮಧ್ಯಮ ವೇಗದ ಬೌಲರ್‌ಗಳು ಬೌನ್ಸ್‌ ಮೂಲಕವೇ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಬಹುದು ಎಂಬುದು ಕ್ರಿಕೆಟ್ ಪಂಡಿತರ ಲೆಕ್ಕಾಚಾರ.

ಡ್ಯೂಕ್ಸ್ ಹೆಚ್ಚಾಗಿ ಸ್ವಿಂಗ್ ಆಗಲು ಕಾರಣ
ಡ್ಯೂಕ್ಸ್ ಚೆಂಡಿನ ಉತ್ಪಾದನಾ ಪ್ರಕ್ರಿಯೆಯಲ್ಲಿ ಟ್ಯಾನಿಂಗ್ ಸಮಯದಲ್ಲಿ ಅದರ ಹೊರಭಾಗಕ್ಕೆ ಗ್ರೀಸ್ ಅನ್ವಯಿಸಲಾಗುತ್ತದೆ. ಸಾಮಾನ್ಯವಾಗಿ ಇಂಗ್ಲಿಷ್ ಕ್ರಿಕೆಟ್ ಋತುವಿನಲ್ಲಿ ಸಾಕಷ್ಟು ಮಳೆಯಾಗುತ್ತದೆ. ಆದ್ದರಿಂದ ಚೆಂಡನ್ನು ನೀರಿನಿಂದ ರಕ್ಷಿಸಲು ಗ್ರೀಸ್ ಬಳಕೆ ಮಾಡಗುತ್ತದೆ. ಕ್ರಿಕೆಟ್ ಋತುವಿನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾದಂತಹ ದೇಶಗಳಲ್ಲಿ ಹೆಚ್ಚು ಮಳೆಯಾಗದ ಕಾರಣ ಇಲ್ಲಿ ಈ ಚೆಂಡುಗಳ ಅಗತ್ಯವಿರುವುದಿಲ್ಲ.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *