ಟೀಂ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ವಿರುದ್ಧ FIR – ಕುಡಿದ ಮತ್ತಿನಲ್ಲಿ ಹೆಂಡತಿ ಮೇಲೆ ಹಲ್ಲೆಗೈದ್ರಾ ಕಾಂಬ್ಳಿ? ಹೆಂಡತಿ ನೀಡಿದ ದೂರಲ್ಲೇನಿದೆ?

ಟೀಂ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ವಿರುದ್ಧ FIR – ಕುಡಿದ ಮತ್ತಿನಲ್ಲಿ ಹೆಂಡತಿ ಮೇಲೆ ಹಲ್ಲೆಗೈದ್ರಾ ಕಾಂಬ್ಳಿ? ಹೆಂಡತಿ ನೀಡಿದ ದೂರಲ್ಲೇನಿದೆ?

ನ್ಯೂಸ್ ಆ್ಯರೋ : ಟೀಂ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ವಿರುದ್ಧ ಅವರ ಪತ್ನಿ ಆಂಡ್ರಿಯಾ ಹೆವಿಟ್ ದೂರು ನೀಡಿದ್ದು, ಮದ್ಯದ ಅಮಲಿನಲ್ಲಿ ವಿನೋದ್ ಕಾಂಬ್ಳಿ ತನ್ನ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂಬ ಆಂಡ್ರಿಯಾ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂಡ್ರಿಯಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಪತಿಯು ನನಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ, ಬ್ಯಾಟ್‌ ಮತ್ತು ಅಡುಗೆ ಮಾಡೋ ವಸ್ತುವಿನಿಂದ ಹೊಡೆದಿದ್ದು ನನಗೆ ತಲೆಗೆ ಗಾಯವಾಗಿದೆ ಎಂದು ದೂರು ನೀಡಿದ್ದಾರೆ.

ಆಂಡ್ರಿಯಾ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಶುಕ್ರವಾರ ಮಧ್ಯಾಹ್ನ 1 ರಿಂದ 1.30 ರ ನಡುವೆ ಘಟನೆ ನಡೆದಿದೆ. ಆಂಡ್ರಿಯಾ ತನ್ನ ದೂರಿನಲ್ಲಿ, ‘ವಿನೋದ್ ಕಾಂಬ್ಳಿ ಕುಡಿದ ಅಮಲಿನಲ್ಲಿ ಬಾಂದ್ರಾ ಫ್ಲಾಟ್‌ಗೆ ಬಂದು ನನ್ನನ್ನು ನಿಂದಿಸಲು ಪ್ರಾರಂಭಿಸಿದರು. ಬಳಿಕ ಅಡುಗೆ ಮನೆಗೆ ಬಂದು ಪಾತ್ರೆಯ ಹಿಡಿಕೆ ಎಸೆದು ಹಲ್ಲೆ ಮಾಡಿದ್ದಾರೆ ಎಂದು ಆಂಡ್ರಿಯಾ ತಿಳಿಸಿದ್ದಾರೆ.

ಬಾಂದ್ರಾ ಪೊಲೀಸರ ಮಾಹಿತಿ ಪ್ರಕಾರ, ವಿನೋದ್ ಕಾಂಬ್ಳಿ ವಿರುದ್ಧ ಐಪಿಸಿ ಸೆಕ್ಷನ್ 324 ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರು ದಾಖಲಿಸಲು ಬರುವ ಮುನ್ನ ಕಾಂಬ್ಳಿ ಪತ್ನಿ ಆಂಡ್ರಿಯಾ ಭಾಭಾ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿನೋದ್ ಕಾಂಬ್ಳಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ. 90ರ ದಶಕದ ಸ್ಟಾರ್ ಬ್ಯಾಟ್ಸ್​ಮನ್ ಬೇರೆ. ಕ್ರಿಕೆಟ್ ದೇವರು, ಸಚಿನ್ ತೆಂಡೂಲ್ಕರ್​​ನಷ್ಟೇ ಫೇಮಸ್​ ಆಗಿದ್ದ ಕಾಂಬ್ಳಿ, ವಿವಾದದ ಸುಳಿಯಲ್ಲಿ ಸಿಲುಕಿ ಕೆಟ್ಟ ಹೆಸರು ತಂದುಕೊಂಡಿದ್ದರು. ಸದಾ ಒಂದಿಲ್ಲೊಂದು ಆರೋಪಗಳನ್ನ ಮೈಮೇಲೆ ಎಳೆದುಕೊಳ್ತಿದ್ದ ಸ್ಟಾರ್ ಆಟಗಾರ, ಈಗ ಮತ್ತೊಮ್ಮೆ ಠಾಣೆ ಮೆಟ್ಟಿಲೇರುವಂತಹ ಕೃತ್ಯ ಎಸಗಿದ್ದಾರೆ

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *