ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಫುಟ್ಬಾಲ್ ದಂತಕಥೆ ಪೀಲೆ: ತೀವ್ರ ಹದಗೆಟ್ಟ ಆರೋಗ್ಯ, ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ

ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಫುಟ್ಬಾಲ್ ದಂತಕಥೆ ಪೀಲೆ: ತೀವ್ರ ಹದಗೆಟ್ಟ ಆರೋಗ್ಯ, ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ

ನ್ಯೂಸ್ ಆ್ಯರೋ : ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದು ಅವರು ಕೀಮೋ ಥೆರಪಿಗೆ ಸ್ಪಂದಿಸುತ್ತಿಲ್ಲ ಎಂದು ವರದಿಯಾಗಿದೆ.

ಪೀಲೆಗೆ ಕಳೆದ ವರ್ಷ ಕರುಳಿನ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ವೈದ್ಯರು ಅವರ ದೊಡ್ಡ ಕರುಳಿನಿಂದ ಗಡ್ಡೆಯನ್ನು ಹೊರತೆಗೆದಿದ್ದಾರೆ. ಕ್ಯಾನ್ಸರ್‌ನಿಂದಾಗಿ ಪೀಲೆ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ಹದಗೆಟ್ಟಿತು ಮತ್ತು ಕುಟುಂಬವು ಬ್ರೆಜಿಲ್‌ನ ಸಾವೊ ಪಾಲೊ ನಗರದ ಆಲ್ಬರ್ಟ್ ಐನ್‌ಸ್ಟೈನ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.

ಈಚೆಗೆ ಪೀಲೆ ಅವರ ಆರೋಗ್ಯ ಸ್ಥಿತಿ ಚೇತರಿಸಿಕೊಂಡು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿತ್ತು. ಆದರೆ ಶನಿವಾರ ಬ್ರೆಜಿಲ್‌ನ ಮಾಧ್ಯಮಗಳು ಪೀಲೆ ಅವರ ಆರೋಗ್ಯ ಹದಗೆಟ್ಟಿದೆ ಎಂದು ಸುದ್ದಿ ಬಿತ್ತರಿಸಿದೆ. ಸದ್ಯ ಪೀಲೆ ಅವರನ್ನು ಉಪಶಾಮಕ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ. ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಈ ಉಪಶಾಮಕ ನಿಗಾ ಘಟಕಕ್ಕೆ ವರ್ಗಾಯಿಸಲಾಗುತ್ತದೆ. ಕುಟುಂಬ ಸದಸ್ಯರ ಅನುಮತಿ ಮೇರೆಗೆ ಪೀಲೆ ಅವರನ್ನು ಉಪಶಾಮಕ ಆರೈಕೆಗೆ ಸ್ಥಳಾಂತರಿಸಲಾಗಿದೆ.

ಬ್ರೆಜಿಲ್ ಪರ 92 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 77 ಗೋಲು ಮಾಡಿದ ಪೀಲೆ:

ವೃತ್ತಿಜೀವನದಲ್ಲಿ ಒಟ್ಟು 1,363 ಪಂದ್ಯಗಳನ್ನು ಆಡಿರುವ ಪೀಲೆ 1,279 ಗೋಲುಗಳನ್ನು ಗಳಿಸಿದ್ದಾರೆ.ಬ್ರೆಜಿಲ್ ಪರ 92 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 77 ಗೋಲು ಗಳಿಸಿದ್ದಾರೆ. ಅತೀ ಹೆಚ್ಚು ಗೋಲು ಗಳಿಸಿದ ಆಟಗಾರ ಎಂಬ ಗಿನ್ನಿಸ್ ದಾಖಲೆಯನ್ನು ಪೀಲೆ ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *