ವಿಶ್ವಕಪ್ ವಿಜೇತ ಅರ್ಜೆಂಟೀನಾ ನಾಯಕ‌ ಲಿಯೊನೆಲ್ ಮೆಸ್ಸಿ ಚೀನಾದಲ್ಲಿ ಬಂಧನ – ಬಂಧನದ ವಿಡಿಯೋ ವೈರಲ್,‌ ಕಾರಣವೇನು‌ ಗೊತ್ತಾ?

ವಿಶ್ವಕಪ್ ವಿಜೇತ ಅರ್ಜೆಂಟೀನಾ ನಾಯಕ‌ ಲಿಯೊನೆಲ್ ಮೆಸ್ಸಿ ಚೀನಾದಲ್ಲಿ ಬಂಧನ – ಬಂಧನದ ವಿಡಿಯೋ ವೈರಲ್,‌ ಕಾರಣವೇನು‌ ಗೊತ್ತಾ?

ನ್ಯೂಸ್ ಆ್ಯರೋ‌ : ಅರ್ಜೆಂಟೀನಾ ಫುಟ್ಬಾಲ್ ತಂಡದ ನಾಯಕ ಲಿಯೋನೆಲ್ ಮೆಸ್ಸಿ ಅವರನ್ನು ಚೀನಾದ ರಾಜಧಾನಿ ಬೀಜಿಂಗ್‌ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅರ್ಜೆಂಟೀನಾ ಅಂತಾರಾಷ್ಟ್ರೀಯ ಸೌಹಾರ್ದ ಪಂದ್ಯಕ್ಕೂ ಮುನ್ನ ಬೀಜಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿರುವ ಬಗ್ಗೆ ವರದಿಯಾಗಿದೆ.

ಮೆಸ್ಸಿ ತನ್ನ ತಂಡದೊಂದಿಗೆ ಸೌಹಾರ್ದ ಆಟಕ್ಕಾಗಿ ಚೀನಾಕ್ಕೆ ಆಗಮಿಸಿದ್ದಾಗ ಈ ಘಟನೆ ನಡೆದಿದೆ. ಪಾಸ್‌ಪೋರ್ಟ್ ಸಮಸ್ಯೆಯಿಂದಾಗಿ ವಿಮಾನದಲ್ಲಿನ ಭದ್ರತಾ ಸಿಬ್ಬಂದಿ ಮೆಸ್ಸಿಯನ್ನು ತಡೆದು ನಿಲ್ಲಿಸಿದ್ದಾರೆ. ಇದು ಆಟಗಾರರನಿಗೆ ಮುಜುಗರ ಉಂಟು ಮಾಡಿತು. ಆಟಗಾರ ಚೀನಾ ಭೇಟಿಗೂ ಮೊದಲು ವೀಸಾಕ್ಕೆ ಅರ್ಜಿ ಸಲ್ಲಿಸಿರಲಿಲ್ಲ, ಅಲ್ಲದೇ, ತನ್ನ ಅರ್ಜೆಂಟೀನಾದ ಬದಲಿಗೆ ಸ್ಪ್ಯಾನಿಷ್ ಪಾಸ್‌ಪೋರ್ಟ್‌ ನೊಂದಿಗೆ ಪ್ರಯಾಣಿಸುತ್ತಿದ್ದರು. ಅದು ಚೀನಾ ಪ್ರವೇಶದ ಅವಕಾಶ ಹೊಂದಿಲ್ಲ. ಹೀಗಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ವಿಡಿಯೋ ಕ್ಲಿಪ್​ನಲ್ಲಿ ವಿಶ್ವಕಪ್ ವಿಜೇತ ನಾಯಕನನ್ನು ಹಲವಾರು ಪೊಲೀಸ್ ಅಧಿಕಾರಿಗಳು ಸುತ್ತುವರೆದಿದ್ದಾರೆ. ಕೈಯಲ್ಲಿ ಪಾಸ್‌ಪೋರ್ಟ್ ಹಿಡಿದಿರುವ ಮೆಸ್ಸಿ ಪೊಲೀಸರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಇವರ ಜೊತೆಗೆ ಕೆಲ ಸಹ ಆಟಗಾರರೂ ಇದ್ದರು.

ಸರಿಸುಮಾರು 30 ನಿಮಿಷಗಳ ನಂತರ ವಿಚಾರಣೆ ಮತ್ತು ವೀಸಾ ಸಮಸ್ಯೆ ಕುರಿತು ಚರ್ಚಿಸಿದ ಬಳಿಕ ಅವರನ್ನು ಪೊಲೀಸರು ಅಲ್ಲಿಂದ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *