ಫ್ರೀ ಹಿಟ್, ಸಾಫ್ಟ್ ಸಿಗ್ನಲ್ ನಿಯಮಗಳಲ್ಲಿ ಬದಲಾವಣೆ ತಂದ ಐಸಿಸಿ – ಹೊಸ ನಿಯಮಗಳಲ್ಲಿ ಏನಿದೆ ವಿಶೇಷ?

ಫ್ರೀ ಹಿಟ್, ಸಾಫ್ಟ್ ಸಿಗ್ನಲ್ ನಿಯಮಗಳಲ್ಲಿ ಬದಲಾವಣೆ ತಂದ ಐಸಿಸಿ – ಹೊಸ ನಿಯಮಗಳಲ್ಲಿ ಏನಿದೆ ವಿಶೇಷ?

ನ್ಯೂಸ್ ಆ್ಯರೋ‌ : ಟೀಕೆಗೆ ಗುರಿಯಾಗುತ್ತಿದ್ದ ‘ಸಾಫ್ಟ್ ಸಿಗ್ನಲ್‌’ ಅನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ(ಐಸಿಸಿ) ರದ್ದುಗೊಳಿಸಿದೆ. ಇದರಿಂದ ಮೈದಾನದಲ್ಲಿರುವ ಅಂಪೈರ್‌ಗಳ ಮೇಲೆ ಹೊರೆ ಕಡಿಮೆಯಾಗಲಿದ್ದು, ಗೊಂದಲದ ಸಂದರ್ಭದಲ್ಲಿ ಬ್ಯಾಟರ್‌ ಔಟಾಗಿದ್ದಾರೋ ಇಲ್ಲವೋ ಎನ್ನುವುದನ್ನು 3ನೇ ಅಂಪೈರ್‌ ನಿರ್ಧರಿಸಲಿದ್ದಾರೆ. ಈ ನಿಯಮ ಜೂ. 1ರಿಂದಲೇ ಜಾರಿಗೆ ಬರಲಿದ್ದು, ಭಾರತ-ಆಸ್ಪ್ರೇಲಿಯಾ ನಡುವಿನ ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೂ ಅನ್ವಯವಾಗಲಿದೆ.

ಫೀಲ್ಡರ್‌ ಕ್ಯಾಚ್‌ ಹಿಡಿದಾಗ ಚೆಂಡು ನೆಲಕ್ಕೆ ತಗುಲಿದೆಯೋ ಇಲ್ಲವೋ ಎನ್ನುವುದು ಬರಿಗಣ್ಣಿಗೆ ಸ್ಪಷ್ಟವಾಗಿ ತಿಳಿಯದಿದ್ದಾಗ ಬೌಲರ್‌ ಎಂಡ್‌ನಲ್ಲಿರುವ ಅಂಪೈರ್‌, ಲೆಗ್‌ ಅಂಪೈರ್‌ ಜೊತೆ ಚರ್ಚಿಸಿ ತೀರ್ಪು ಪ್ರಕಟಿಸಲು 3ನೇ ಅಂಪೈರ್‌ನ ಮೊರೆ ಹೋಗುತ್ತಿದ್ದರು. 3ನೇ ಅಂಪೈರ್‌ ಜೊತೆ ಸಂಪರ್ಕ ಸಾಧಿಸುವಾಗ ಮೈದಾನದಲ್ಲಿರುವ ಅಂಪೈರ್‌, ಬ್ಯಾಟರ್‌ ಔಟಾಗಿದ್ದಾರೋ ಇಲ್ಲವೋ ಎನ್ನುವುದನ್ನು ಊಹಿಸಬೇಕಿತ್ತು. ಅದನ್ನೇ ‘ಸಾಫ್ಟ್‌ ಸಿಗ್ನಲ್‌’ ಎನ್ನುತ್ತಾರೆ.

3ನೇ ಅಂಪೈರ್‌ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದ ಹೊರತಾಗಿಯೂ ಸೂಕ್ತ ಸಾಕ್ಷ್ಯಗಳು ದೊರೆಯದಿದ್ದಾಗ ಮೈದಾನದಲ್ಲಿದ್ದ ಅಂಪೈರ್‌ ‘ಸಾಫ್ಟ್ ಸಿಗ್ನಲ್‌’ ಆಗಿ ಏನು ತೀರ್ಪು ನೀಡಿರುತ್ತಾರೋ ಅದನ್ನೇ ಎತ್ತಿಹಿಡಿಯಲಾಗುತ್ತಿತ್ತು. ಇದರಿಂದಾಗಿ ಹಲವು ಬಾರಿ ವಿವಾದಗಳಾಗಿವೆ. ಹೀಗಾಗಿ ಈ ನಿಯಮದ ಬದಲಾವಣೆಗೆ ಐಸಿಸಿ ಮುಂದಾಗಿದೆ.

ಫ್ಲಡ್‌ ಲೈಟ್ಸ್‌ ಬಳಕೆಗೆ ಅನುಮತಿ
ಟೆಸ್ಟ್‌ ಪಂದ್ಯದ ವೇಳೆ ಬೆಳಕಿನ ಸಮಸ್ಯೆಯಾದಾಗ ಫ್ಲಡ್‌ ಲೈಟ್ಸ್‌ ಬಳಸಲು ಐಸಿಸಿ ಅನುಮತಿ ನೀಡಿದೆ. ಮಂದ ಬೆಳಕಿನ ಕಾರಣ ಆಟ ಸ್ಥಗಿತಗೊಂಡ ಅನೇಕ ಉದಾಹರಣೆಗಳಿದ್ದು, ಇದನ್ನು ತಡೆಯಲು ಐಸಿಸಿ ನಿಯಮದಲ್ಲಿ ಬದಲಾವಣೆ ತಂದಿರುವುದಾಗಿ ತಿಳಿಸಿದೆ. ಆದರೆ ಈಗಾಗಲೇ ಕೆಲ ಸಂದರ್ಭದಲ್ಲಿ ಫ್ಲಡ್‌ ಲೈಟ್ಸ್‌ ಬಳಸಿದ ಉದಾಹರಣೆಗಳಿವೆ. ಜೊತೆಗೆ ಫ್ಲಡ್‌ಲೈಟ್ಸ್‌ನಲ್ಲಿ ಕೆಂಪು ಚೆಂಡಿನಲ್ಲಿ ಆಡುವುದು ಕಷ್ಟ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದ್ದು, ಐಸಿಸಿಯಿಂದ ಈ ಕುರಿತು ಸ್ಪಷ್ಟನೆ ನೀಡಬೇಕಿದೆ.

ಇನ್ನೊಂದು ಮಹತ್ವದ ಬದಲಾವಣೆಯಲ್ಲಿ ಫ್ರೀ ಹಿಟ್‌ನಲ್ಲಿ ಚೆಂಡು ಬ್ಯಾಟರ್‌ನ ಬ್ಯಾಟ್‌ಗೆ ತಗುಲಿ ವಿಕೆಟ್‌ಗೆ ಬಡಿದಾಗ ರನ್‌ ಓಡಿದರೆ, ಆ ರನ್‌ ಬ್ಯಾಟರ್‌ನ ಖಾತೆಗೆ ಸೇರ್ಪಡೆಗೊಳ್ಳಲಿದೆ. ಇಷ್ಟು ದಿನ ರನ್‌ಗಳು ‘ಬೈ’ ಎಂದು ಪರಿಗಣಿಸಲಾಗುತ್ತಿತ್ತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *