IND vs AUS ODI SERIES 2023 : ಸರಣಿಯ ವೇಳಾಪಟ್ಟಿ, ಇತ್ತಂಡಗಳು ಹೀಗಿವೆ..

IND vs AUS ODI SERIES 2023 : ಸರಣಿಯ ವೇಳಾಪಟ್ಟಿ, ಇತ್ತಂಡಗಳು ಹೀಗಿವೆ..

ನ್ಯೂಸ್ ಆ್ಯರೋ‌ : ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಮುಕ್ತಾಯಗೊಂಡಿದ್ದು, ಭಾರತ 2-1 ರೊಂದಿಗೆ ಸರಣಿ ಗೆದ್ದಿದೆ.‌ ಇದರ ಬೆನ್ನಲ್ಲೇ ಏಕದಿನ ಸರಣಿ ಆರಂಭಗೊಳ್ಳುಲಿದ್ದು, ಸರಣಿಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಾರ್ಚ್ 17 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ಭಾರತ ತಂಡವು 3 ಪಂದ್ಯಗಳನ್ನು ಆಡಲಿದೆ. ಈ ಪಂದ್ಯಗಳು ಪಂದ್ಯಗಳು ಮುಂಬೈ, ವಿಶಾಖಪಟ್ಟಣಂ ಹಾಗೂ ಚೆನ್ನೈನಲ್ಲಿ ನಡೆಯಲಿದೆ. ಈಗಾಗಲೇ ಈ ಸರಣಿಗಾಗಿ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಇದಾಗ್ಯೂ ಅಹಮದಾಬಾದ್ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿರುವ ಶ್ರೇಯಸ್ ಅಯ್ಯರ್ ಬದಲಿಗೆ ಸಂಜು ಸ್ಯಾಮ್ಸನ್ ಗೆ ಅವಕಾಶ ಸಿಗುವ ಸಾಧ್ಯತೆಯಿದೆ.

ಹಾಗೆಯೇ ತಾಯಿಯ ನಿಧನದ ಕಾರಣ ಆಸ್ಟ್ರೇಲಿಯಾ ತಂಡದಿಂದ ಹೊರಗುಳಿದಿರುವ ನಾಯಕ ಪ್ಯಾಟ್ ಕಮಿನ್ಸ್ ಕೂಡ ಈ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಇನ್ನು ವೈಯುಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯವಾಡುತ್ತಿಲ್ಲ. ಹೀಗಾಗಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಅಲ್ಲದೆ ವಿಶಾಖಪಟ್ಟಣಂದಲ್ಲಿ ನಡೆಯಲಿರುವ 2ನೇ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  • ಮಾರ್ಚ್ 17- ಮೊದಲ ಏಕದಿನ ಪಂದ್ಯ (ವಾಂಖೆಡೆ ಸ್ಟೇಡಿಯಂ, ಮುಂಬೈ)
  • ಮಾರ್ಚ್ 19- ಎರಡನೇ ಏಕದಿನ ಪಂದ್ಯ (ವೈಎಸ್​ಆರ್ ಸ್ಟೇಡಿಯಂ, ವಿಶಾಖಪಟ್ಟಣಂ)
  • ಮಾರ್ಚ್ 22- ಮೂರನೇ ಏಕದಿನ ಪಂದ್ಯ (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ)

ಭಾರತ ಏಕದಿನ ತಂಡ ಇಂತಿದೆ..

ಹಾರ್ದಿಕ್ ಪಾಂಡ್ಯ (ನಾಯಕ-ಮೊದಲ ಏಕದಿನ) ರೋಹಿತ್ ಶರ್ಮಾ (ಮೊದಲ ಪಂದ್ಯಕ್ಕೆ ಅಲಭ್ಯ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

ಆಸ್ಟ್ರೇಲಿಯಾ ಏಕದಿನ ತಂಡ ಹೀಗಿದೆ..

ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *