ಐಸಿಸಿ ಅಂಡರ್ 19 ಮಹಿಳಾ ಟಿ ಟ್ವೆಂಟಿ ವಿಶ್ವಕಪ್ ಫೈನಲ್ ಪ್ರವೇಶಿಸಿದ ಭಾರತ – ನ್ಯೂಜಿಲೆಂಡ್ ವಿರುದ್ಧ ಸುಲಭ ಗೆಲುವು

ಐಸಿಸಿ ಅಂಡರ್ 19 ಮಹಿಳಾ ಟಿ ಟ್ವೆಂಟಿ ವಿಶ್ವಕಪ್ ಫೈನಲ್ ಪ್ರವೇಶಿಸಿದ ಭಾರತ – ನ್ಯೂಜಿಲೆಂಡ್ ವಿರುದ್ಧ ಸುಲಭ ಗೆಲುವು

ನ್ಯೂಸ್ ಆ್ಯರೋ : ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 2023ರ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಭಾರತ ಮಹಿಳಾ ತಂಡವು ನ್ಯೂಜಿಲೆಂಡ್ ಮಹಿಳಾ ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ್ದು, ಇದೀಗ ಭಾರತ ಮಹಿಳಾ ತಂಡ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪ್ರವೇಶಿಸಿದೆ.

ಎರಡನೇ ಸೆಮಿಫೈನಲ್ ಪಂದ್ಯ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯಲಿದ್ದು, ಇದರಲ್ಲಿ ಗೆದ್ದ ತಂಡವು ಜನವರಿ 29ರ ಭಾನುವಾರ ನಡೆಯುವ ಪ್ರಶಸ್ತಿ ಸುತ್ತಿನಲ್ಲಿ ಭಾರತ ಮಹಿಳೆಯರನ್ನು ಎದುರಿಸಲಿದೆ.

ಇಂದಿನ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಆರಂಭದಲ್ಲೇ ಎರಡು ವಿಕೆಟ್ ಕಳೆದುಕೊಂಡ ಬ್ಲ್ಯಾಕ್ ಕ್ಯಾಪ್ಸ್ ಗೆ ಬಳಿಕ ಪ್ಲಿಮ್ಮರ್ ಮತ್ತು ವಿ.ಕೀಪರ್ ಇಸಾಬೆಲ್ಲಾ ಗೇಜ್ ನೆರವು ನೀಡಿದರು. ಪ್ಲಿಮ್ಮರ್ 35 ರನ್ ಗಳಿಸಿದರೆ, ಗೇಜ್ 26 ರನ್ ಮಾಡಿದರು.

ಕಿವೀಸ್ ತಂಡವು 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 107 ರನ್ ಮಾತ್ರ ಗಳಿಸಲು ಶಕ್ತವಾಯಿತು. ಭಾರತದ ಪರ ಪಾರ್ಶವಿ ಚೋಪ್ರಾ ಮೂರು ವಿಕೆಟ್, ಟಿಟಸ್ ಸಧು, ಮನ್ನತ್ ಕಶ್ಯಪ್, ಅರ್ಚನಾ ದೇವಿ ಮತ್ತು ನಾಯಕಿ ಶೆಫಾಲಿ ತಲಾ ಒಂದು ವಿಕೆಟ್ ಪಡೆದರು.

ಸುಲಭ ಗುರಿ ಬೆನ್ನತ್ತಿದ ಭಾರತ ತಂಡವು ಆರಂಭದಲ್ಲೇ ನಾಯಕಿ ಶಫಾಲಿ ರೂಪದಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಆದರೆ ಮತ್ತೋರ್ವ ಆರಂಭಿಕ ಆಟಗಾರ್ತಿ ಶ್ವೇತಾ ಸೆಹರಾವತ್ ಅವರು ಅಜೇಯ 61 ರನ್ ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಸೌಮ್ಯ ತಿವಾರಿ 22 ರನ್ ಗಳಿಸಿದರು. ಕೇವಲ 14.2 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡ ಭಾರತ 110 ರನ್ ಗಳಿಸಿ ಫೈನಲ್ ಪ್ರವೇಶಿಸಿತು.

Related post

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…

Leave a Reply

Your email address will not be published. Required fields are marked *