IND vs WI 1st TEST : ಅಶ್ವಿನ್ ಸ್ಪಿನ್ ಮೋಡಿ ; ರೋಹಿತ್, ಜೈಸ್ವಾಲ್ ಶತಕದಾಟ‌ – ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಜಯ

IND vs WI 1st TEST : ಅಶ್ವಿನ್ ಸ್ಪಿನ್ ಮೋಡಿ ; ರೋಹಿತ್, ಜೈಸ್ವಾಲ್ ಶತಕದಾಟ‌ – ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಜಯ

ನ್ಯೂಸ್ ಆ್ಯರೋ‌ : ಮತ್ತೊಮ್ಮೆ ಕ್ರಿಕೆಟ್ ಮೈದಾನದಲ್ಲಿ ಪಾರಮ್ಯ ಮೆರೆದ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಮೂರೇ ದಿನಗಳಲ್ಲಿ ನಿರಾಯಾಸವಾಗಿ ಗೆದ್ದುಕೊಂಡಿದೆ. ಇದರೊಂದಿಗೆ ರೋಹಿತ್ ಪಡೆ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ.

ಮಿಂಚಿದ ಅಶ್ವಿನ್
ಡೊಮಿನಿಕಾದ ವಿಂಡ್ಸರ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 141 ರನ್ನುಗಳ ಅಮೋಘ ಜಯ ದಾಖಲಿಸಿದೆ. ಟೀಂ ಇಂಡಿಯಾ ಪರ ಮೊದಲ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಪಡೆದ ಸ್ಪಿನ್ನರ್ ಆರ್.ಅಶ್ವಿನ್, ಎರಡನೇ ಇನ್ನಿಂಗ್ಸ್‍ನಲ್ಲೂ ಮೋಡಿ ಮಾಡಿ 7 ವಿಕೆಟ್ ಬೀಳಿಸಿದರು.

‘ಯಶಸ್ವಿ’ ಜೈಸ್ವಾಲ್
ಚೊಚ್ಚಲ ಟೆಸ್ಟ್ ಪಂದ್ಯವಾಡಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಶತಕ ಬಾರಿಸಿ ಗಮನ ಸೆಳೆದರು. 387 ಎಸೆತಗಳಲ್ಲಿ 171 ರನ್ ಗಳಿದರು. ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ಭಾರತದ 17ನೇ ಆಟಗಾರ ಎನಿಸಿಕೊಂಡ ಜೈಸ್ವಾಲ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಇವರಿಗೆ ಉತ್ತಮ ಬೆಂಬಲ ನೀಡಿ ನಾಯಕನಾಟವಾಡಿದ ರೋಹಿತ್ ಶರ್ಮಾ ಕೂಡ ಸೆಂಚುರಿ ಬಾರಿಸಿದರು(103).

ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 150 ರನ್ ಗಳಿಸಲಷ್ಟೆ ಆತಿಥೇಯ ವಿಂಡೀಸ್ ಶಕ್ತವಾಯಿತು. ಬಳಿಕ ಬ್ಯಾಟಿಂಗ್ ಮಾಡಿದ ಭಾರತ ಜೈಸ್ವಾಲ್, ರೋಹಿತ್ ಶರ್ಮಾ ಶತಕ, ವಿರಾಟ್ ಕೊಹ್ಲಿ ಅರ್ಧ ಶತಕ(76 ರನ್)ನೆರವಿನಿಂದ 421 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ 271 ರನ್ ಗಳ ಲೀಡ್ ಪಡೆದುಕೊಂಡಿತ್ತು.

ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡಕ್ಕೆ ಆರ್.ಅಶ್ವಿನ್ ಚೇತರಿಸಿಕೊಳ್ಳುವ ಅವಕಾಶವನ್ನೇ ನೀಡಲಿಲ್ಲ. ಹೀಗಾಗಿ ಕೇವಲ 130 ರನ್ ಗಳಿಗೆ ಸರ್ವ ಪತನ ಕಂಡಿತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *