ವಿಶ್ವ ಕ್ರಿಕೆಟ್ ನ ಎಲ್ಲಾ ಮೂರು ಮಾದರಿಯಲ್ಲೂ ಟೀಂ ಇಂಡಿಯಾ ನಂಬರ್ ವನ್ – ಇದೇ ಮೊದಲ ಬಾರಿಗೆ ಟೀಂ ಇಂಡಿಯಾದ ಅಮೋಘ ಸಾಧನೆ

ವಿಶ್ವ ಕ್ರಿಕೆಟ್ ನ ಎಲ್ಲಾ ಮೂರು ಮಾದರಿಯಲ್ಲೂ ಟೀಂ ಇಂಡಿಯಾ ನಂಬರ್ ವನ್ – ಇದೇ ಮೊದಲ ಬಾರಿಗೆ ಟೀಂ ಇಂಡಿಯಾದ ಅಮೋಘ ಸಾಧನೆ

ನ್ಯೂಸ್ ಆ್ಯರೋ : ನಾಗ್ಪುರ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭರ್ಜರಿ ಗೆಲುವಿನ ನಂತರ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇತ್ತೀಚಿನ ICC ಪುರುಷರ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದು, ಸದ್ಯ ಎಲ್ಲಾ ಮಾದರಿಯಲ್ಲೂ ನಂಬರ್ ಒನ್ ತಂಡವಾಗಿ ಗುರುತಿಸಿಕೊಂಡಿದೆ ‌

115 ಅಂಕಗಳೊಂದಿಗೆ ಭಾರತ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 111 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಮತ್ತು ಇಂಗ್ಲೆಂಡ್ 106 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಏಕದಿನ ವಿಭಾಗದಲ್ಲಿ ಭಾರತವು 114 ಅಂಕಗಳೊಂದಿಗೆ ಅತ್ಯುತ್ತಮ ತಂಡವಾಗಿದ್ದರೆ 112 ಅಂಕಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ 111 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿದೆ. ಅಲ್ಲದೆ T20I ಶ್ರೇಯಾಂಕ ಪಟ್ಟಿಯಲ್ಲೂ ಭಾರತವು 267 ಅಂಕಗಳೊಂದಿಗೆ ಪ್ರಾಬಲ್ಯ ಸಾಧಿಸಿದ್ದರೆ, ಇಂಗ್ಲೆಂಡ್ 266 ಅಂಕಗಳೊಂದಿಗೆ ಟೇಬಲ್-ಟಾಪ್ಪರ್‌ಗಳಿಗಿಂತ ಕೇವಲ ಒಂದು ಅಂಕ ಹಿಂದೆ ಇದ್ದು ಎರಡನೇ ಸ್ಥಾನದಲ್ಲಿದೆ. ಪಾಕಿಸ್ತಾನ 258 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ನಾಗ್ಪುರದಲ್ಲಿ ನಡೆದ ಆರಂಭಿಕ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎಂಟು ವಿಕೆಟ್‌ಗಳ ಪ್ರದರ್ಶನದ ನಂತರ ಐಸಿಸಿ ಪುರುಷರ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಅವರು ಮೊಣಕಾಲಿನ ಗಾಯದಿಂದಾಗಿ ಸುಮಾರು ಐದು ತಿಂಗಳ ನಂತರ ಯಶಸ್ವಿಯಾಗಿ ಪುನರಾಗಮನ ಮಾಡಿದ್ದು, ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಮೊದಲ ಪಂದ್ಯದ ಗೆಲುವಿನ ಬಳಿಕ 16 ನೇ ಸ್ಥಾನಕ್ಕೆ ಏರಿದ್ದಾರೆ.

ಈ ಸ್ಪಿನ್ ಜೋಡಿಯು ಆಸ್ಟ್ರೇಲಿಯದ ನಡುವಿನ ಮೊದಲ ಟೆಸ್ಟ್‌ನಲ್ಲಿ 15 ವಿಕೆಟ್‌ಗಳನ್ನು ಹಂಚಿಕೊಳ್ಳುವ ಮೂಲಕ ಆಸ್ಟ್ರೇಲಿಯಾವನ್ನು ಕಾಡಿತ್ತಲ್ಲದೇ ಭಾರತವು ಮೂರು ದಿನಗಳಲ್ಲಿ ಇನ್ನಿಂಗ್ಸ್ 132 ರನ್‌ಗಳಿಂದ ಗೆದ್ದಿತ್ತು.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *