
World Cup 2023 : ಬಲಿಷ್ಠ ಟೀಂ ಇಂಡಿಯಾ ಪ್ರಕಟ – ಏಕೈಕ ಕನ್ನಡಿಗನಿಗೆ ತಂಡದಲ್ಲಿ ಸ್ಥಾನ
- ಕ್ರೀಡಾ ಸುದ್ದಿ
- September 5, 2023
- No Comment
- 122
ನ್ಯೂಸ್ ಆ್ಯರೋ ಭಾರತದಲ್ಲಿ ಈ ವರ್ಷದ ಅಕ್ಟೋಬರ್ -ನವೆಂಬರ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ 15 ಸದಸ್ಯರುಗಳನ್ನು ಒಳಗೊಂಡ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ.
ನಾಯಕ ರೋಹಿತ್ ಶರ್ಮಾ ಹಾಗೂ ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಜಂಟಿ ಸುದ್ದಿಗೋಷ್ಠಿ ನಡೆಸಿ ವಿಶ್ವಕಪ್ ನಲ್ಲಿ ಭಾಗವಹಿಸುವ ಭಾರತದ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದಾರೆ.
ನಿರೀಕ್ಷೆಯಂತೆಯೇ ಕನ್ನಡಿಗ ಕೆ ಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಉಪನಾಯಕ ಪಟ್ಟ ಕಟ್ಟಲಾಗಿದೆ. ಸದ್ಯ ಏಷ್ಯಾಕಪ್ ಟೂರ್ನಿಯಲ್ಲೂ ಹಾರ್ದಿಕ್ ಪಾಂಡ್ಯ ಭಾರತ ತಂಡದ ಉಪನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಧೋನಿ ನೇತೃತ್ವದಲ್ಲಿ ಟೀಂ ಇಂಡಿಯಾ 2011ರಲ್ಲಿ ಕೊನೆಯ ಬಾರಿಗೆ ಐಸಿಸಿ ಏಕದಿನ ವಿಶ್ವಕಪ್ ಜಯಿಸಿತ್ತು. ಇದಾದ ಬಳಿಕ ಭಾರತ ವಿಶ್ವಕಪ್ ಜಯಿಸಿಲ್ಲ. ಇದೀಗ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತವೇ ಆತಿಥ್ಯ ವಹಿಸುತ್ತಿದ್ದು, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.
46 ದಿನ, 48 ಪಂದ್ಯ:
46 ದಿನಗಳ ಕಾಲ ನಡೆಯಲಿರುವ ಟೂರ್ನಿಯಲ್ಲಿ 10 ತಂಡಗಳು ಪಾಲ್ಗೊಳ್ಳುತ್ತಿದ್ದು, ಫೈನಲ್ ಸೇರಿ ಒಟ್ಟು 48 ಪಂದ್ಯಗಳು ನಡೆಯಲಿವೆ. ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್, ಬಾಂಗ್ಲಾದೇಶ, ನ್ಯೂಜಿಲೆಂಡ್, ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ. ಈ 8 ತಂಡಗಳು ನೇರ ಅರ್ಹತೆ ಗಿಟ್ಟಿಸಿಕೊಂಡಿದ್ದು, ಇನ್ನೆರಡು ತಂಡಗಳಾದ ಶ್ರೀಲಂಕಾ ಹಾಗೂ ನೆದರ್‌ಲೆಂಡ್ಸ್ ತಂಡಗಳು ಅರ್ಹತಾ ಸುತ್ತಿನ ಮೂಲಕ ಪ್ರಧಾನ ಸುತ್ತಿಗೆ ಲಗ್ಗೆಯಿಟ್ಟಿವೆ.
ಭಾರತ ತಂಡ ಇಂತಿದೆ.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್