ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿಗೆ ಟೀಂ ಇಂಡಿಯಾ ಸಜ್ಜು – ಪ್ರವಾಸದ ವೇಳಾಪಟ್ಟಿ ಹೇಗಿದೆ? ನೇರಪ್ರಸಾರ ಯಾವ ಚಾನೆಲ್ ನಲ್ಲಿ? ವಿವರ ಇಲ್ಲಿದೆ.‌‌

ನ್ಯೂಸ್ ಆ್ಯರೋ‌: ಸದ್ಯ ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ತಂಡ ಕಿವೀಸ್​ ವಿರುದ್ಧದ ಏಕದಿನ ಸರಣಿ ಬಳಿಕ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಸಿದ್ಧತೆಯ ಭಾಗವಾಗಿ ಟೀಂ ಇಂಡಿಯಾ ವಿವಿಧ ಸರಣಿಗಳನ್ನು ಆಡಲಿದೆ.

ಟೀಂ ಇಂಡಿಯಾವು ಈ ಪ್ರವಾಸದಲ್ಲಿ ಬಾಂಗ್ಲಾದೇಶದೊಂದಿಗೆ ಏಕದಿನ ಹಾಗೂ ಟೆಸ್ಟ್ ಸರಣಿಗಳನ್ನು ಆಡಲಿದೆ. ಈ ಪ್ರವಾಸವು ಡಿಸೆಂಬರ್ 4 ರಂದು ಪ್ರಾರಂಭವಾಗಿ ಡಿಸೆಂಬರ್ 26 ರಂದು ಕೊನೆಗೊಳ್ಳಲಿದೆ.

ನ್ಯೂಜಿಲೆಂಡ್ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಶಮಿ ಮತ್ತು ನಾಯಕ ರೋಹಿತ್ ಶರ್ಮಾ ತಂಡಕ್ಕೆ ಮರಳಲಿದ್ದು, ಬಾಂಗ್ಲಾದೇಶ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೆಲ ಸಮಯದಿಂದ ಕಳಪೆ ಫಾರ್ಮ್‌ನಲ್ಲಿರುವ ರಿಷಭ್ ಪಂತ್ ಮತ್ತು ಕೆಎಲ್ ರಾಹುಲ್‌ಗೆ ಈ ಪ್ರವಾಸ ಅತ್ಯಂತ ನಿರ್ಣಾಯಕವಾಗಿದೆ. ಇದರಲ್ಲಿ ವಿಫಲರಾದರೆ ಮುಂಬರುವ ದಿನಗಳಲ್ಲಿ ಇವರಿಬ್ಬರ ಆಯ್ಕೆ ಕಷ್ಟವಾಗಲಿದೆ.

ಇನ್ನುಳಿದಂತೆ ಐಪಿಎಲ್ ನಲ್ಲಿ ಮಿಂಚಿರುವ ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಯಶ್ ದಯಾಳ್ ಈ ಬಾರಿಯ ಬಾಂಗ್ಲಾದೇಶ ವಿರುದ್ಧ ಆಡಲಿರುವ ಟೀಂ ಇಂಡಿಯಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ‌.

ವೇಳಾಪಟ್ಟಿ ಇಂತಿದೆ..

ಮೊದಲ ODI: ಡಿಸೆಂಬರ್ 4, ಢಾಕಾ – ಮಧ್ಯಾಹ್ನ 12.30ಕ್ಕೆ
ಎರಡನೇ ODI: ಡಿಸೆಂಬರ್ 7, ಢಾಕಾ – ಮಧ್ಯಾಹ್ನ 12.30ಕ್ಕೆ
ಮೂರನೇ ODI: ಡಿಸೆಂಬರ್ 10, ಢಾಕಾ – ಮಧ್ಯಾಹ್ನ 12.30ಕ್ಕೆ

ಮೊದಲ ಟೆಸ್ಟ್: ಡಿಸೆಂಬರ್ 14 ರಿಂದ 18ರ ವರೆಗೆ – ಚಟ್ಟೋಗ್ರಾಮ್, ಬೆಳಗ್ಗೆ 9.30ಕ್ಕೆ
ಎರಡನೇ ಟೆಸ್ಟ್: ಡಿಸೆಂಬರ್ 22 ರಿಂದ 26ರ ವರೆಗೆ – ಢಾಕಾ, ಬೆಳಗ್ಗೆ 9.30ಕ್ಕೆ

ನೇರ ಪ್ರಸಾರ ;

ಎಲ್ಲಾ ಪಂದ್ಯಗಳನ್ನು ಸೋನಿ ನೆಟ್‌ವರ್ಕ್ ನೇರ ಪ್ರಸಾರ ಮಾಡಲಿದೆ. ಡಿಜಿಟಲ್‌ನಲ್ಲಿ ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೀವು ಈ ಪಂದ್ಯಗಳನ್ನು ಲೈವ್ ಆಗಿ ವೀಕ್ಷಿಸಬಹುದು. ಇವುಗಳ ಜೊತೆಗೆ ಡಿಡಿ ಸ್ಪೋರ್ಟ್ಸ್ ಕೂಡ ಈ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.

ಏಕದಿನ ಸರಣಿಗೆ ಟೀಂ ಇಂಡಿಯಾ ಹೀಗಿದೆ..

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ಇಶಾನ್ ಕಿಶನ್, ರಿಷಭ್ ಪಂತ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಸಿರಾಜ್, ಶಾರ್ದೂಲ್ ಠಾಕೂರ್, ಯಾಸ್ ದಯಾಲ್, ಶಾಬಾಜ್ ಅಹ್ಮದ್, ಶಮಿ, ದೀಪಕ್ ಚಹಾರ್

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *