IND vs BAN : ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಇಲ್ಲ, ರಾಹುಲ್ ನಾಯಕ – ನೇರಪ್ರಸಾರ ಯಾವ ಚಾನೆಲ್ ನಲ್ಲಿ? ತಂಡ ಹೇಗಿದೆ? ವಿವರ ಇಲ್ಲಿದೆ..

IND vs BAN : ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಇಲ್ಲ, ರಾಹುಲ್ ನಾಯಕ – ನೇರಪ್ರಸಾರ ಯಾವ ಚಾನೆಲ್ ನಲ್ಲಿ? ತಂಡ ಹೇಗಿದೆ? ವಿವರ ಇಲ್ಲಿದೆ..

ನ್ಯೂಸ್ ಆ್ಯರೋ : ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್ ತಂಡಗಳು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿ ಆಗಲಿದ್ದು, ಸರಣಿಯ ಮೊದಲ ಟೆಸ್ಟ್ ಪಂದ್ಯ ಬುಧವಾರದಿಂದ (ಡಿಸೆಂಬರ್ 14) ಆರಂಭವಾಗಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸರಣಿಯ ಮೊದಲ ಟೆಸ್ಟ್ ಪಂದ್ಯ ಚಿತ್ತಗಾಂಗ್ ಜಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಾಮಾನ್ಯ ನಾಯಕ ರೋಹಿತ್ ಶರ್ಮಾ ಗಾಯದ ಕಾರಣದಿಂದ ಹೊರಗುಳಿಯಲಿದ್ದು, ಕೆ.ಎಲ್. ರಾಹುಲ್ ತಂಡದ ನಾಯಕನಾಗಲಿದ್ದಾರೆ‌. ಅಲ್ಲದೆ ರೋಹಿತ್ ಶರ್ಮಾ ಬದಲಾಗಿ ಅಭಿಮನ್ಯು ಈಶ್ವರನ್ ಅವರು ಈಗಾಗಲೇ ತಂಡ ಕೂಡಿಕೊಂಡಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸರಣಿಯ ಮೊದಲ ಟೆಸ್ಟ್ ಪಂದ್ಯವು 9:00 AM ISTಗೆ ನಡೆಯಲಿದ್ದು, ಟಾಸ್ ಅರ್ಧ ಗಂಟೆ ಮುಂಚಿತವಾಗಿ ನಡೆಯಲಿದೆ.

ಭಾರತ vs ಬಾಂಗ್ಲಾದೇಶ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯ ನೇರ ಪ್ರಸಾರ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ ನಲ್ಲಿ ಲಭ್ಯವಾಗಲಿದೆ‌. ಜೊತೆಗೆ ಈ ಸರಣಿಯ ಲೈವ್ ಸ್ಟ್ರೀಮಿಂಗ್ ಅನ್ನು ನೀವು ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.

ಭಾರತ ತಂಡ ಇಂತಿದೆ.

ಕೆ.ಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿ.ಕೀ), ಕೆ.ಎಸ್ ಭರತ್(ವಿ‌.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ (ಅನುಮಾನ), ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್

ಬಾಂಗ್ಲಾದೇಶ ತಂಡ ಇಂತಿದೆ.

ಮಹ್ಮುದುಲ್ ಹಸನ್ ಜಾಯ್, ನಜ್ಮುಲ್ ಹಸನ್ ಶಾಂಟೊ, ಮೊಮಿನುಲ್ ಹಕ್, ಯಾಸಿರ್ ಅಲಿ ಚೌಧರಿ, ಮುಷ್ಫೀಕರ್ ರಹಿಮ್, ಶಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನೂರುಲ್ ಹಸನ್, ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ತಸ್ಕಿನ್ ಅಹ್ಮದ್, ಸೈಯದ್ ಖಲೀದ್ ಅಹ್ಮದ್, ಇಬಾ ಇಸ್ಲಾಮ್ ಇಸ್ಲಾಮ್ , ಝಾಕಿರ್ ಹಸನ್, ರೆಜೌರ್ ರೆಹಮಾನ್ ರಾಜಾ, ಅನಾಮುಲ್ ಹಕ್ ಬಿಜೋಯ್.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *