
ಇಂದಿನಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಟಿ20 ಸರಣಿ ಆರಂಭ – ಹಿರಿಯರ ಅನುಪಸ್ಥಿತಿಯಲ್ಲಿ ಕಿರಿಯರಿಗೆ ತಾಕತ್ ತೋರಿಸೋ ಒತ್ತಡ..!!
- ಕ್ರೀಡಾ ಸುದ್ದಿ
- November 18, 2022
- No Comment
- 215
ನ್ಯೂಸ್ ಆ್ಯರೋ : ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಲಿದೆ. ವೆಲ್ಲಿಂಗ್ಟನ್ ಕ್ರೀಡಾಂಗಣದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿದ್ದು ಭಾರತ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಮತ್ತೊಂದೆಡೆ ನ್ಯೂಜಿಲೆಂಡ್ ತಂಡ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ಪೈಪೋಟಿ ನಡೆಸಲಿದೆ.
ಭಾರತ ಹಾಗೂ ನ್ಯೂಜಿಲೆಂಡ್ ಎರಡು ತಂಡಗಳು ಕೂಡ ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದವು. ಆದರೆ ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ ಈ ತಂಡಗಳು ವಿಶ್ವಕಪ್ ಗೆಲ್ಲುವ ಕನಸನ್ನು ಭಗ್ನಗೊಳಿಸಿಕೊಂಡವು. ಇದೀಗ ಆ ವಿಶ್ವಕಪ್ ಸೋಲಿನ ಕಹಿ ನೆನಪಿನಿಂದ ಹೊರಬಂದಿರುವ ತಂಡಗಳು ಮತ್ತೆ ದ್ವಿಪಕ್ಷೀಯ ಸರಣಿಯಲ್ಲಿ ಪೈಪೋಟಿ ನೀಡಲು ಸಜ್ಜಾಗಿದೆ.
ಅತ್ತ ರೋಹಿತ್ ಶರ್ಮಾ ಸೇರಿದಂತೆ ಹಲವು ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿದ್ದು, ತಂಡವನ್ನು ಮುನ್ನಡೆಸಲಿದ್ದಾರೆ. ಇಂದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ಟಾಸ್ ಪ್ರಕ್ರಿಯೆ 11:30ಕ್ಕೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಮೂಲಕ ವೀಕ್ಷಿಸಬಹುದಾಗಿದೆ.
ಸಂಭಾವ್ಯ ತಂಡಗಳು ಇಂತಿವೆ.
ನ್ಯೂಜಿಲೆಂಡ್ : ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಲಾಕಿ ಫರ್ಗುಸನ್, ಟಿಮ್ ಸೌಥಿ ಮತ್ತು ಇಶ್ ಸೋಧಿ.
ಭಾರತ ತಂಡ : ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್ ಮತ್ತು ವಾಷಿಂಗ್ಟನ್ ಸುಂದರ್.