IND vs SA T20 : ಭಾರತಕ್ಕಿಂದು ‘ಮಾಡು ಇಲ್ಲವೇ ಮಡಿ’ ಪಂದ್ಯ…! – ಸೂರ್ಯ-ದ್ರಾವಿಡ್ ಮಾಸ್ಟರ್ ಪ್ಲ್ಯಾನ್ ಸಕ್ಸಸ್ ಆಗುತ್ತಾ..?

IND vs SA T20 : ಭಾರತಕ್ಕಿಂದು ‘ಮಾಡು ಇಲ್ಲವೇ ಮಡಿ’ ಪಂದ್ಯ…! – ಸೂರ್ಯ-ದ್ರಾವಿಡ್ ಮಾಸ್ಟರ್ ಪ್ಲ್ಯಾನ್ ಸಕ್ಸಸ್ ಆಗುತ್ತಾ..?

ನ್ಯೂಸ್ ಆ್ಯರೋ : ಭಾರತ ಕ್ರಿಕೆಟ್ ಟೀಂಗೆ ಇಂದು ತಮ್ಮನ್ನು ಪ್ರೂವ್ ಮಾಡಿಕೊಳ್ಳಲು ಇರುವ ಅಗ್ನಿಪರೀಕ್ಷೆಯಲ್ಲಿ ಗೆಲ್ತಾರಾ..? ಅನ್ನೋ ಯಕ್ಷ ಪ್ರಶ್ನೆ ಕಾದಿದೆ. ಭಾರತ ಇಂದು ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುತ್ತಿದೆ. ಇಂದು ಭಾರತ ಸೋತರೆ, 2023 ರಲ್ಲಿ ತವರಿನಿಂದ ಹೊರಗೆ ಎರಡನೇ ಬಾರಿ ಟಿ20 ಸರಣಿ ಸೋತಂತಾಗುತ್ತದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿದೆ. ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಯಿತು, ನಂತರ ಎರಡನೇ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಹೀಗಾಗಿ ಮೂರನೇ ಟಿ20 ಯಲ್ಲಿ ಭಾರತ ಗೆದ್ದರಷ್ಟೆ ಸರಣಿ ಸೋಲನ್ನು ತಪ್ಪಿಸಬಹುದು.

2024 ರ ಟಿ20 ವಿಶ್ವಕಪ್‌ನ ಸಿದ್ಧತೆಗಳ ಮೇಲೆ ಕಣ್ಣಿಟ್ಟಿರುವ ರಾಹುಲ್ ದ್ರಾವಿಡ್ -ಸೂರ್ಯಕುಮಾರ್ ಯಾದವ್ ಇಂದಿನ ಪಂದ್ಯ ಗೆಲ್ಲಲು ಮಾಸ್ಟರ್ ರೂಪಿಸಿರುವುದು ಖಚಿತ. ಜೊಹಾನ್ಸ್‌ಬರ್ಗ್‌ನಲ್ಲಿ ಭಾರತ ಸೋತರೆ, 2023 ರಲ್ಲಿ ತವರಿನಿಂದ ಹೊರಗೆ ಎರಡನೇ ಬಾರಿ ಟಿ20 ಸರಣಿ ಸೋತಂತಾಗುತ್ತದೆ. ಟೀಮ್ ಇಂಡಿಯಾ ಈ ವರ್ಷದ ಆರಂಭದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-3 ಅಂತರದಲ್ಲಿ ಸೋತಿತ್ತು. 2017 ರಿಂದ, ಭಾರತವು ಮೂರು ಟಿ20I ಸರಣಿಗಳನ್ನು ವಿದೇಶದಲ್ಲಿ ಕಳೆದುಕೊಂಡಿದೆ. ಇದೀಗ ಗೆಲ್ಲಲೇ ಬೇಕಾದ ಪಂದ್ಯಕ್ಕೆ ಬದಲಾವಣೆ ಖಚಿತ ಎನ್ನಲಾಗಿದೆ.

ಕಳೆದ ಪಂದ್ಯದಲ್ಲಿ ಬೌಲಿಂಗ್ ನಲ್ಲಿ ಎಡವಿದ ಭಾರತ…!

ಕಳೆದ ಪಂದ್ಯದಲ್ಲಿ ಭಾರತವು ಬೌಲಿಂಗ್ ವಿಭಾಗದಲ್ಲಿ ಎಡವಿತ್ತು. ಬ್ಯಾಟಿಂಗ್ನಲ್ಲಿ ಸೂರ್ಯಕುಮಾರ್ ಮತ್ತು ರಿಂಕು ಸಿಂಗ್ ಬಿಟ್ಟರೆ ಉಳಿದವರಿಂದ ಉತ್ತಮ ಆಟ ಬರಲಿಲ್ಲ. ಇಂದಿನ ಪಂದ್ಯಕ್ಕೆ ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್ ಮತ್ತು ಕುಲ್ದೀಪ್ ಯಾದವ್ ಬದಲಿಗೆ ರವಿ ಬಿಷ್ಣೋಯ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಜಿತೇಶ್ ಶರ್ಮಾ ಜಾಗಕ್ಕೆ ಇಶಾನ್ ಕಿಶನ್ ಬಂದರೆ ಅಚ್ಚರಿ ಪಡಬೇಕಿಲ್ಲ.

ಇತ್ತ ದಕ್ಷಿಣ ಆಫ್ರಿಕಾ ಕೂಡ ಇದೇ ದೋಣಿಯಲ್ಲಿದೆ. ಟಿ20 ವಿಶ್ವಕಪ್‌ಗೆ ತಯಾರಾಗಲು ಹರಿಣಗಳ ಪಡೆಗೆ ಕೇವಲ ನಾಲ್ಕು ಟಿ20 ಪಂದ್ಯಗಳು ಇವೆಯಷ್ಟೆ. ಆಫ್ರಿಕಾ ಪರ ರೀಝ ಹೆಂಡ್ರಿಕ್ಸ್ ಹಾಗೂ ಮ್ಯೂಥ್ಯೂ ಬ್ರೀಟ್ಝ್​ಕೆ ಸ್ಪೋಟಕ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ನಾಯಕ ಐಡೆನ್ ಮಾರ್ಕ್ರಾಮ್ ಕೂಡ ನೆರವಾಗುತ್ತಿದ್ದಾರೆ. ಬೌಲಿಂಗ್​ನಲ್ಲೂ ಆಫ್ರಿಕಾ ಮಾರಕವಾಗಿದ್ದು, ಸ್ಪಿನ್ನರ್​ಗಳಿಂದ ಉತ್ತಮ ಪ್ರದರ್ಶನ ಬರುತ್ತಿದೆ. ವೆದರ್‌ಕಾಮ್ ಒದಗಿಸಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಭಾನುವಾರದಂದು ಜೋಹಾನ್ಸ್‌ಬರ್ಗ್‌ನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ. ಪಂದ್ಯದುದ್ದಕ್ಕೂ ಮಳೆಯಾಗುವ ಸಾಧ್ಯತೆ ಕಡಿಮೆಯಾದರೂ ಮೋಡ ಕವಿದ ವಾತಾವರಣವಿರುತ್ತದೆ.

ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್‌ನಲ್ಲಿ ನಡೆಯಲಿದೆ. ವಾಂಡರರ್ಸ್ ಸ್ಟೇಡಿಯಂನ ಪಿಚ್ ಬ್ಯಾಟಿಂಗ್‌ಗೆ ಅನುಕೂಲಕರವೆಂದು ಪರಿಗಣಿಸಲಾಗಿದೆ. ನಿರಂತರ ಮಳೆಯಿಂದಾಗಿ, ಪಿಚ್‌ನಲ್ಲಿನ ತೇವಾಂಶವು ಬೌಲರ್‌ಗಳಿಗೆ ಸಹಾಯ ಮಾಡುತ್ತದೆ. ಟಿ20 ಸ್ವರೂಪದಲ್ಲಿ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್‌ನಲ್ಲಿ ದೊಡ್ಡ ಸ್ಕೋರ್‌ಗಳನ್ನು ಮಾಡಬಹುದು. ಇಲ್ಲಿ ಶ್ರೀಲಂಕಾ ತಂಡ ಕೀನ್ಯಾ ವಿರುದ್ಧ 260 ರನ್ ಗಳಿಸಿರುವುದು ಗರಿಷ್ಠ ಸ್ಕೋರ್ ಆಗಿದೆ. ಮೊದಲ ಇನ್ನಿಂಗ್ಸ್‌ ಸರಾಸರಿ ಸ್ಕೋರ್ 171 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 145 ಆಗಿದೆ.

Related post

Loksabha Results : ಗೆಲುವಿನ ಖಾತೆ ತೆರೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ – ಚಾಮರಾಜನಗರ, ಹಾಸನ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

Loksabha Results : ಗೆಲುವಿನ ಖಾತೆ ತೆರೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ –…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಗೆಲುವಿನ ಖಾತೆ ತೆರೆದಿದೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರು ಒಂದು ಲಕ್ಷಕ್ಕೂ ಅಧಿಕ…
Loksabha Results : ಸರಳ ಬಹುಮತ ಗಳಿಸುವಲ್ಲಿ ಎಡವುತ್ತಾ ಬಿಜೆಪಿ? – ದಕ್ಷಿಣ ಕನ್ನಡ, ಬೆಂ.ಗ್ರಾಮಾಂತರ ಉಡುಪಿಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

Loksabha Results : ಸರಳ ಬಹುಮತ ಗಳಿಸುವಲ್ಲಿ ಎಡವುತ್ತಾ ಬಿಜೆಪಿ? –…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಎಣಿಕೆ ಕಾರ್ಯ ಇನ್ನೂ ಮುಂದುವರಿದಿದ್ದು, ಆಡಳಿತಾರೂಢ ಬಿಜೆಪಿ ಪಕ್ಷ ಸರಳ ಬಹುಮತದ ಕೊರತೆ ಎದುರಿಸುವ ಆತಂಕಕ್ಕೆ ಸಿಲುಕಿದೆ. ಎಲ್ಲಾ ಮತಗಟ್ಟೆ ಸಮೀಕ್ಷೆಗಳನ್ನು…
ದಿನ‌ ಭವಿಷ್ಯ 04-06-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 04-06-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಬಸುರಿಯು ನೆಲದ ಮೇಲೆ ನಡೆದುಕೊಂಡು ಹೋಗುವಾಗ ವಿಶೇಷ ಕಾಳಜಿ ವಹಿಸಬೇಕು. ಇನ್ನೂ ಸಂಬಳ ಪಡೆಯದವರು, ಇಂದು ಅವರು ಹಣಕ್ಕಾಗಿ ತುಂಬಾ ಚಿಂತೆ ಮಾಡಬಹುದು ಮತ್ತು ನಿಮ್ಮ ಸ್ನೇಹಿತರಿಂದ ಸಾಲವನ್ನು…

Leave a Reply

Your email address will not be published. Required fields are marked *