IND vs SA Test Series : ಇಂದಿನಿಂದ ಭಾರತ-ದ.ಆಫ್ರಿಕಾ ಬಾಕ್ಸಿಂಗ್ ಡೇ ಟೆಸ್ಟ್ – ನೇರಪ್ರಸಾರ ವೀಕ್ಷಣೆ ಹೇಗೆ? ತಂಡಗಳು ಹೇಗಿವೆ?

IND vs SA Test Series : ಇಂದಿನಿಂದ ಭಾರತ-ದ.ಆಫ್ರಿಕಾ ಬಾಕ್ಸಿಂಗ್ ಡೇ ಟೆಸ್ಟ್ – ನೇರಪ್ರಸಾರ ವೀಕ್ಷಣೆ ಹೇಗೆ? ತಂಡಗಳು ಹೇಗಿವೆ?

ನ್ಯೂಸ್ ಆ್ಯರೋ : ಒಂದು ಕಡೆ ದೇಶದಲ್ಲಿ ಪ್ರೊ ಕಬಡ್ಡಿ ಪಂದ್ಯಾಟ ರಣರೋಚಕವಾಗಿ ನಡೆಯುತ್ತಿದೆ. ಮತ್ತೊಂದೆಡೆ ಭಾರತ ಕ್ರಿಕೆಟ್ ಟೀಂ ಟೆಸ್ಟ್ ಪಂದ್ಯಕ್ಕೆ ಅಣಿಯಾಗುತ್ತಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಬಾಕ್ಸಿಂಗ್ ಟೆಸ್ಟ್ ಪಂದ್ಯಕ್ಕೆ ಇಂದು ಚಾಲನೆ ಸಿಗಲಿದ್ದು, ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಮಧ್ಯಾಹ್ನ ಪಂದ್ಯ ಆರಂಭವಾಗಲಿದೆ.

ಮೊದಲಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟಿ20 ಸರಣಿಯನ್ನು ಸಮಬಲ ಮಾಡಿಕೊಂಡಿದ್ದ ಟೀಮ್ ಇಂಡಿಯಾ, ಬಳಿಕ ಕೆಎಲ್ ರಾಹುಲ್ ನಾಯಕತ್ವದಲ್ಲಿ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿತು. ಇದೀಗ ಉಭಯ ತಂಡಗಳು ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಅನೇಕ ರೀತಿಯ ಅಸಮಾಧಾನ- ಚರ್ಚೆಯ ನಡುವೆಯೂ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ತೆಂಬಾ ಬವುಮಾ ಆಫ್ರಿಕಾ ನಾಯಕನಾಗಿದ್ದಾರೆ.

  1. ಭಾರತ- ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಯಾವಾಗ?

ಇಂದು ಡಿಸೆಂಬರ್ 26 ರಿಂದ ಡಿ. 30 ವರೆಗೆ ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್ ಪಂದ್ಯ ನಡೆಯಲಿದೆ.

  1. ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ.

  1. ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಎಲ್ಲಿ ಆಡಲಾಗುತ್ತದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಸೆಂಚುರಿಯನ್​ನ ಸೂಪರ್ ಸ್ಪೋರ್ಟ್ಸ್ ಪಾರ್ಕ್​ನಲ್ಲಿ ನಡೆಯಲಿದೆ.

  1. ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.

  1. ಟೆಸ್ಟ್ ಸರಣಿಗೆ ಸಜ್ಜಾದ ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ, ಕೆಎಸ್ ಭರತ್ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್.

ದ. ಆಫ್ರಿಕಾ ಟೆಸ್ಟ್ ತಂಡ: ತೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್‌ಹ್ಯಾಮ್, ಆಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಟೋನಿ ಡಿ ಜೊರ್ಜಿ, ಡೀನ್ ಎಲ್ಗರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರೆನ್.

ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಈ ಕ್ರಿಕೆಟ್ ಪಂದ್ಯ ಇಂದು ರೋಚಕವಾಗಿ ಮೂಡಿಬರಲಿದೆ. ದ.ಆಫ್ರಿಕಾ ತಂಡದ ವಿರುದ್ಧ ಟೀಂ ಇಂಡಿಯಾ ವಿನ್ ಆಗುತ್ತಾ ಕಾದುನೋಡಬೇಕು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *