Asian Games 2023 : ಬಾಂಗ್ಲಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ – ಚಿನ್ನದ ಪದಕಕ್ಕೆ ಇನ್ನೊಂದೇ ಸವಾಲು‌‌..

Asian Games 2023 : ಬಾಂಗ್ಲಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ – ಚಿನ್ನದ ಪದಕಕ್ಕೆ ಇನ್ನೊಂದೇ ಸವಾಲು‌‌..

ನ್ಯೂಸ್ ಆ್ಯರೋ : ಏಷ್ಯನ್‌ ಗೇಮ್ಸ್‌ನಲ್ಲಿ (Asian Games 2023) ಭಾರತೀಯ ಮಹಿಳಾ ಕ್ರಿಕೆಟ್‌ ತಂಡ ಬಾಂಗ್ಲಾದೇಶ ಮಹಿಳಾ ತಂಡವನ್ನು ಎಂಟು ವಿಕೆಟ್‌ಗಳಿಂದ ಸುಲಭವಾಗಿ ಮಣಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಚೀನಾದ ಹ್ಯಾಂಗ್ಝೌನಲ್ಲಿರುವ ಝಡ್‌ಜೆಯುಟಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತದ ಮಹಿಳಾ ಕ್ರಿಕೆಟ್‌ ತಂಡವು ಬಾಂಗ್ಲಾದೇಶ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಬಾಂಗ್ಲಾ ತಂಡವು 17.5 ಓವರ್‌ಗಳಲ್ಲಿ ಕೇವಲ 51 ರನ್‌ ಗಳಿಸಲಷ್ಟೇ ಶಕ್ತವಾಯಿತು. ಸುಲಭದ ಗುರಿ ಬೆನ್ನತ್ತಿದ ಸ್ಮೃತಿ ಮಂಧಾನಾ ಬಳಗವು ಕೇವಲ 8.2 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ಗುರಿ ತಲುಪುವ ಮೂಲಕ ಗೆಲುವಿನ ಸಿಹಿ ಅನುಭವಿಸಿತು. ಆರಂಭಿಕ ಆಟಗಾರ್ತಿ ಶೆಫಾಲಿ 17 ರನ್ ಗಳಿಸಿದರೆ, ಜೆಮಿಮಾ ರೋಡ್ರಿಗಸ್ 20 ರನ್ ಬಾರಿಸಿ ಅಜೇಯರಾಗುಳಿದರು. ನಾಲ್ಕು ವಿಕೆಟ್ ಕಿತ್ತ ಪೂಜಾ ವಸ್ತ್ರಾಕರ್ ಪಂದ್ಯಶ್ರೇಷ್ಟ ಆಟ ಪ್ರದರ್ಶಿಸಿದರು.

ಸುಲಭದ ಗೆಲುವಿನೊಂದಿಗೆ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ ಮಹಿಳಾ ತಂಡವು ಫೈನಲ್‌ ತಲುಪಿದ ಮೊದಲ ತಂಡ ಎನಿಸಿತು. ಇಂದೇ ಶ್ರೀಲಂಕಾ ಹಾಗೂ ಪಾಕಿಸ್ತಾನದ ಮಧ್ಯೆ ಸೆಮಿಫೈನಲ್‌ ಕಾಳಗ ನಡೆಯಲಿದ್ದು, ಗೆದ್ದ ತಂಡ ಭಾರತವನ್ನು ಫೈನಲ್‌ನಲ್ಲಿ ಎದುರಿಸಲಿದೆ. ಸೋಮವಾರ (ಸೆಪ್ಟೆಂಬರ್‌ 25) ಫೈನಲ್‌ ಸೆಣಸಾಟ ಸಾಗಿಬರಲಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *