WFI ಮಾಜಿ‌ ಅಧ್ಯಕ್ಷರ ವಿರುದ್ಧ ಪ್ರತಿಭಟನೆ ವಾಪಾಸ್ – ನ್ಯಾಯಕ್ಕಾಗಿ ಅನ್ಯ ಮಾರ್ಗ ಹಿಡಿದ ಕುಸ್ತಿಪಟುಗಳು

WFI ಮಾಜಿ‌ ಅಧ್ಯಕ್ಷರ ವಿರುದ್ಧ ಪ್ರತಿಭಟನೆ ವಾಪಾಸ್ – ನ್ಯಾಯಕ್ಕಾಗಿ ಅನ್ಯ ಮಾರ್ಗ ಹಿಡಿದ ಕುಸ್ತಿಪಟುಗಳು

ನ್ಯೂಸ್ ಆ್ಯರೋ‌ : ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯು.ಎಫ್.ಐ.) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಸುತ್ತಿರುವ ಹೋರಾಟದ ಮಾರ್ಗವನ್ನು ಬದಲಾಯಿಸಲು ಕುಸ್ತಿ ಪಟುಗಳು ನಿರ್ಧರಿಸಿದ್ದು, ಕೋರ್ಟ್ ಮೊರೆ ಹೋಗಿದ್ದಾರೆ.

ಹೋರಾಟ ನಿಲ್ಲಲ್ಲ

ಸುಮಾರು ಐದು ತಿಂಗಳ ಬಳಿಕ ಕುಸ್ತಿಪಟುಗಳು ಪ್ರತಿಭಟನೆಯನ್ನು ಹಿಂಪಡೆದಿದ್ದು, ನ್ಯಾಯಾಲಯದಲ್ಲಿ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸುವ ಭರವಸೆಯನ್ನು ಸರಕಾರ ಈಡೇರಿಸಿದೆ ಎಂದು ಹೋರಾಟಗಾರರಾದ ವಿನೇಶ್ ಪೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ತಿಳಿಸಿದ್ದಾರೆ.

ಡಬ್ಲ್ಯು.ಎಫ್.ಐ. ಸುಧಾರಣೆಗೆ ಸಂಬಂಧಿಸಿದಂತೆ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಜು. 11ರ ಚುನಾವಣೆಗೆ ಸಂಬಂಧಿಸಿದಂತೆ ಸರಕಾರ ನೀಡಿದ ಭರವಸೆಗಳ ಈಡೇರಿಕೆಗಾಗಿ ಕಾಯುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದಾಗಿ ಕೆಲವೇ ಹೊತ್ತಿನಲ್ಲಿ ಮತ್ತೊಂದು ಪೋಸ್ಟ್ ಮಾಡಿರುವ ವಿನೇಶ್ ಮತ್ತು ಸಾಕ್ಷಿ ತಾವು ಸಾಮಾಜಿಕ ಜಾಲತಾಣಗಳಿಂದ ಸ್ವಲ್ಪ ಕಾಲ ವಿರಮಿಸುವುದಾಗಿ ಹೇಳಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *