Ind Vs Bangla 3rd ODI : ಆಕರ್ಷಕ ದ್ವಿಶತಕ ಸಿಡಿಸಿದ ಇಶಾನ್ ಕಿಶನ್ – ಅಬ್ಬರದ ದ್ವಿಶತಕದ ವೇಳೆ ಹಲವು ದಾಖಲೆ ಸೃಷ್ಟಿ

Ind Vs Bangla 3rd ODI : ಆಕರ್ಷಕ ದ್ವಿಶತಕ ಸಿಡಿಸಿದ ಇಶಾನ್ ಕಿಶನ್ – ಅಬ್ಬರದ ದ್ವಿಶತಕದ ವೇಳೆ ಹಲವು ದಾಖಲೆ ಸೃಷ್ಟಿ

ನ್ಯೂಸ್ ಆ್ಯರೋ : ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡ ಕಾರಣ ಆಡುವ ಅವಕಾಶ ಪಡೆದ ಇಶಾನ್ ಕಿಶನ್‌, ಬಾಂಗ್ಲಾದೇಶ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಆಕರ್ಷಕ ದ್ವಿಶತಕ ಸಿಡಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಚೊಚ್ಚಲ ಶತಕವನ್ನೇ ದ್ವಿಶತಕವನ್ನಾಗಿ ಪರಿವರ್ತಿಸಿದ ಮೊದಲ ಕ್ರಿಕೆಟಿಗ ಎನ್ನುವ ಹಿರಿಮೆಗೆ ಇಶಾನ್ ಕಿಶನ್ ಪಾತ್ರರಾಗಿದ್ದಾರೆ.

ಭಾರತದ ಪರ ಸಚಿನ್ ತೆಂಡುಲ್ಕರ್, ವಿರೇಂದ್ರ ಸೆಹ್ವಾಗ್ ಹಾಗೂ ರೋಹಿತ್ ಶರ್ಮಾ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ 4ನೇ ಬ್ಯಾಟರ್‌ ಎನ್ನುವ ಹಿರಿಮೆಗೆ ಇಶಾನ್ ಕಿಶನ್ ಪಾತ್ರರಾಗಿದ್ದಾರೆ.

ಝಹೂರ್ ಅಹಮದ್ ಚೌಧರಿ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ ಆರಂಭದಲ್ಲೇ ಅನುಭವಿ ಬ್ಯಾಟರ್ ಶಿಖರ್ ಧವನ್ ವಿಕೆಟ್‌ ಕಳೆದುಕೊಂಡಿತು. ಆದರೆ ಎರಡನೇ ವಿಕೆಟ್‌ಗೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ಇಶಾನ್‌ ಕಿಶನ್‌, ಬಾಂಗ್ಲಾದೇಶ ಬ್ಯಾಟರ್‌ಗಳ ಮೇಲೆ ಸವಾರಿ ಮಾಡಿದರು. ಎರಡನೇ ವಿಕೆಟ್‌ಗೆ ಈ ಜೋಡಿ ದ್ವಿಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ್ದ ಇಶಾನ್ ಕಿಶನ್‌ 49 ಎಸೆತಗಳನ್ನು ಎದುರಿಸಿ ಅರ್ಧಶತಕವನ್ನು ಪೂರೈಸಿದರು. ಅರ್ಧಶಕ ಬಾರಿಸಿದ ಬಳಿಕ ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ಮೊರೆ ಹೋದರು. ಪರಿಣಾಮ ಕೇವಲ 85 ಎಸೆತಗಳಲ್ಲಿ ಇಶಾನ್ ಕಿಶನ್‌, ಚೊಚ್ಚಲ ಏಕದಿನ ಕ್ರಿಕೆಟ್ ಶತಕ ಸಿಡಿಸಿ ಸಂಭ್ರಮಿಸಿದರು.

ಇಶಾನ್‌ ಕಿಶನ್‌ ಶತಕ ಬಾರಿಸುತ್ತಿದ್ದಂತೆಯೇ ಮತ್ತಷ್ಟು ಆಕ್ರಮಣಕಾರಿಯಾಟ ಆಡತೊಡಗಿದರು. 100ರಿಂದ 150 ರನ್ ಬಾರಿಸಲು ಇಶಾನ್ ಕಿಶನ್ ಕೇವಲ 18 ಎಸೆತಗಳನ್ನು ಮಾತ್ರ ತೆಗೆದುಕೊಂಡರು. ಇಶಾನ್ ಕಿಶನ್ ಕೇವಲ 103 ಎಸೆತಗಳನ್ನು ಎದುರಿಸಿ 150+ ರನ್ ಗಡಿ ದಾಟುವಲ್ಲಿ ಯಶಸ್ವಿಯಾದರು.

ಬಾಲ್ ಇರುವುದೇ ದಂಡಿಸುವುದಕ್ಕೆ ಎನ್ನುವಂತೆ ಬ್ಯಾಟ್‌ ಬೀಸಿದ ಇಶಾನ್ ಕಿಶನ್ ಕೇವಲ 131 ಎಸೆತಗಳನ್ನು ಎದುರಿಸಿ 24 ಬೌಂಡರಿ ಹಾಗೂ 10 ಸಿಕ್ಸರ್ ಸಹಿತ ಆಕರ್ಷಕ 210 ರನ್ ಗಳಿಸಿ ಟಸ್ಕಿನ್ ಅಹಮದ್ ಬೌಲಿಂಗ್ ನಲ್ಲಿ ಲಿಟನ್ ದಾಸ್ ಅವರಿಗೆ ಕ್ಯಾಚಿತ್ತು ಔಟಾದರು.

Related post

Mangalore : ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ರಿಂಗ್ ಆಯ್ತು ಬಚ್ಚಿಟ್ಟ ಮೊಬೈಲ್..!! – 17ರ ಹರೆಯದ ಅಪ್ರಾಪ್ತ ಬಾಲಕ ಪೋಲಿಸರ ವಶಕ್ಕೆ..!!

Mangalore : ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ರಿಂಗ್ ಆಯ್ತು…

ನ್ಯೂಸ್ ಆ್ಯರೋ : ಮಂಗಳೂರಿನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಖಲಾಗಿರುವ ದೂರಿನ ಪ್ರಕಾರ…
ದಿನ‌ ಭವಿಷ್ಯ 08-05-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-05-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದ ಚೇತರಿಸಿಕೊಳ್ಳುತ್ತೀರಿ. ಆದರೆ ಸ್ವಾರ್ಥಿಗಳಾದ, ಮುಂಗೋಪಿ ವ್ಯಕ್ತಿಯ ಸಹವಾಸವನ್ನು ತಪ್ಪಿಸಿ – ಅವರು ನಿಮ್ಮ ಮೇಲೆ ಒತ್ತಡ ಹಾಕಬಹುದು-ಇದು ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸಬಹುದು. ಇಂವು ನಿಮಗೆ…
ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…

Leave a Reply

Your email address will not be published. Required fields are marked *