ಕೆ.ಎಲ್‌. ರಾಹುಲ್ ಮತ್ತು ಅಥಿಯಾ ಶೆಟ್ಟಿ ಮದುವೆಯ ದಿನಾಂಕ ನಿಗದಿ‌ – ಮದುವೆ ನಡೆಯೋದು ಎಲ್ಲಿ ಗೊತ್ತಾ…!?

ಕೆ.ಎಲ್‌. ರಾಹುಲ್ ಮತ್ತು ಅಥಿಯಾ ಶೆಟ್ಟಿ ಮದುವೆಯ ದಿನಾಂಕ ನಿಗದಿ‌ – ಮದುವೆ ನಡೆಯೋದು ಎಲ್ಲಿ ಗೊತ್ತಾ…!?

ನ್ಯೂಸ್ ಆ್ಯರೋ‌ : ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಪ್ರೀತಿಯಲ್ಲಿ ಬಿದ್ದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಈ ಪ್ರಣಯ ಪಕ್ಷಿಗಳು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ವರದಿಗಳು ಆಗಾಗ್ಗೆ ಬಿತ್ತರಿಸುತ್ತಲೆ ಇದ್ದವು. ಆದರೀಗ ಈ ಜೋಡಿಗಳ ಮದುವೆ ಡೇಟ್ ಫಿಕ್ಸ್ ಆಗಿದ್ದು, ಈ ಸ್ಟಾರ್ ಕಪಲ್ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ.

ಹೌದು.. ಬಾಲಿವುಡ್‌ನಲ್ಲಿ ಸದ್ಯ ಗಟ್ಟಿಮೇಳದ ಸೌಂಡ್ ಜೋರಾಗಿದ್ದು, ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜೋಡಿ ಹಸೆಮಣೆ ಏರಲು ಸಜ್ಜಾಗುತ್ತಿದ್ದಾರೆ. ಅಷ್ಟೇ ಅಲ್ಲ, ಈ ಜೋಡಿಯ ಮದುವೆ ದಿನಾಂಕದ ಜೊತೆ ಸ್ಥಳ ಕೂಡ ನಿಗದಿಯಾಗಿದ್ದು, ಕ್ರಿಕೆಟ್ ಮತ್ತು ನಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಜೋಡಿ ರಾಹುಲ್ ಮತ್ತು ಅಥಿಯಾ ಇದೀಗ ಹೊಸ ವರ್ಷದ ಹೊಸ್ತಿಲಿನಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ.

ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ, ಕಳೆದ ಮೂರು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ. ಯಾವಾಗ ಈ ಜೋಡಿ ಮದುವೆಯಾಗುತ್ತಾರೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ನಟ ಸುನೀಲ್ ಶೆಟ್ಟಿ ಕೂಡ ಮಗಳ ಮದುವೆಯ ಸಕಲ ತಯಾರಿಯಲ್ಲಿದ್ದಾರೆ. ಮದುವೆಗೆ ಡೇಟ್ ಅಷ್ಟೇ ಫಿಕ್ಸ್ ಮಾಡಿರುವುದಲ್ಲ, ಸ್ಥಳ ಕೂಡ ಫಿಕ್ಸ್ ಮಾಡಿದ್ದಾರೆ.

ನಟ ಸುನೀಲ್ ಶೆಟ್ಟಿ ಅವರ ಮುಂಬೈನ ತೋಟದ ಮನೆಯಲ್ಲಿ ಕೆ.ಎಲ್ ರಾಹುಲ್ – ಅಥಿಯಾ ಶೆಟ್ಟಿ ಮದುವೆ ಸಮಾರಂಭ ನಡೆಯಲಿದ್ದು, ಜನವರಿ 21 ರಿಂದ 23 ರವರೆಗೆ ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮದುವೆ ಕಾರ್ಯಕ್ರಮ ನಡೆಯಲಿದೆ ಎಂದು ವರದಿಯಾಗಿದೆ.

ಅಲ್ಲದೇ ಸುಧೀರ್ಘ ಸಮಯಕ್ಕೆ ರಾಹುಲ್ ವೈಯಕ್ತಿಕ ರಜೆ ಕೋರಿದ್ದು, ಬಿಸಿಸಿಐ ಅನುಮತಿಯನ್ನೂ ನೀಡಿದೆ. ಇದಾದ ಬೆನ್ನಲ್ಲೇ ಮದುವೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಜನವರಿಯ ಆರಂಭದಲ್ಲಿ ಕೆಎಲ್ ರಾಹುಲ್ ಒಂದು ವಾರದ ರಜೆಯಲ್ಲಿರುತ್ತಾರೆ. ಜೊತೆಗೆ ವಿವಾಹದ ಕಾರಣ ಕೆಎಲ್ ರಾಹುಲ್ ಮುಂದಿನ ವರ್ಷ ಶ್ರೀಲಂಕಾ ವಿರುದ್ಧದ ಕ್ರಿಕೆಟ್ ಸರಣಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ವರದಿಯಾಗಿದ್ದು, ಈ ಬೆಳವಣಿಗೆಯನ್ನು ಗಮನಿಸಿದ ಅಭಿಮಾನಿಗಳು ಆಗಲೇ ಮದುವೆ ಸಮಾರಂಭ ನಡೆಯಲಿದೆ ಎಂದೂ ಗುಸು ಗುಸು ಶುರು ಮಾಡಿದ್ದಾರೆ.

ಮೂರು ವರ್ಷಗಳ ಹಿಂದೆ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ ಪರಿಚಯವಾಗಿ ಡೇಟಿಂಗ್ ಶುರುವಾಗಿತ್ತು. ಅವರಿಬ್ಬರೂ ಕಾಮನ್ ಫ್ರೆಂಡ್ ಮೂಲಕ ಭೇಟಿಯಾಗಿದ್ದರು. ನಂತರ ಇಬ್ಬರೂ ಒಬ್ಬರನ್ನೊಬ್ಬರು ಹೆಚ್ಚಾಗಿ ಭೇಟಿಯಾಗುತ್ತಿದ್ದು, ನಂತರ ಪ್ರೀತಿ ಶುರುವಾಗಿದೆ.ಆದರೆ ಅವರ ಪ್ರೀತಿಯ ಬಗ್ಗೆ ಎಲ್ಲೂ ಬಾಯಿ ಬಿಟ್ಟಿರಲಿಲ್ಲ. ಕಳೆದ ವರ್ಷ ಕೆಎಲ್ ರಾಹುಲ್ ಅಥಿಯಾ ಶೆಟ್ಟಿ ಹುಟ್ಟುಹಬ್ಬದ ವೇಳೆ ತಮ್ಮ ಪ್ರೀತಿಯನ್ನು ಅಧಿಕೃತಗೊಳಿಸಿದ್ದರು.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *