ಐಪಿಎಲ್‌ 2023 : LSG ಯ ಮುಂದಿನ ಪಂದ್ಯಗಳಿಗೆ ನಾಯಕ ಕೆ.ಎಲ್‌.ರಾಹುಲ್‌ ಅಲಭ್ಯ? – ಸ್ಟಾರ್ ಆಲ್ ರೌಂಡರ್ ಗೆ ಲಕ್ನೋ ತಂಡದ ನಾಯಕನ ಪಟ್ಟ…!!

ಐಪಿಎಲ್‌ 2023 : LSG ಯ ಮುಂದಿನ ಪಂದ್ಯಗಳಿಗೆ ನಾಯಕ ಕೆ.ಎಲ್‌.ರಾಹುಲ್‌ ಅಲಭ್ಯ? – ಸ್ಟಾರ್ ಆಲ್ ರೌಂಡರ್ ಗೆ ಲಕ್ನೋ ತಂಡದ ನಾಯಕನ ಪಟ್ಟ…!!

ನ್ಯೂಸ್ ಆ್ಯರೋ‌: ಕನ್ನಡಿಗ, ಲಕ್ನೋ ಸೂಪರ್‌ ಜಯಂಟ್ಸ್‌ ನಾಯಕ ಕೆ.ಎಲ್‌.ರಾಹುಲ್‌ 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮುಂದಿನ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದ್ದು, ಅವರು ಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಸೋಮವಾರ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದ ವೇಳೆ ಬೌಂಡರಿ ತಡೆಯುವ ಪ್ರಯತ್ನದಲ್ಲಿ ರಾಹುಲ್ ನೆಲಕ್ಕೆ ಉರುಳಿದ್ದರು. ಈ ವೇಳೆ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದರು. ಆ ವೇಳೆ ನಡೆಯಲು ಕಷ್ಟ ಪಟ್ಟಿದ್ದ ಅವರು, ತಮ್ಮ ತಂಡದ ಸಹಾಯಕ ಸಿಬ್ಬಂದಿ ನೆರವಿನಿಂದ ಮೈದಾನ ತೊರೆದಿದ್ದರು. ರಾಹುಲ್ ಅನುಪಸ್ಥಿತಿಯಲ್ಲಿ ಆಲ್‌ರೌಂಡರ್‌ ಕೃಣಾಲ್‌ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿದೆ.

ಗಾಯಕ್ಕೆ ಒಳಗಾಗಿರುವ ರಾಹುಲ್ ಅವರನ್ನು ಬಿಸಿಸಿಐ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ರಾಹುಲ್‌ ಅವರ ಗಾಯ ಗಂಭೀರವಾಗಿದ್ದರೆ, ಟೂರ್ನಿಯ ಇನ್ನುಳಿದ ಭಾಗದಿಂದ ಹೊರ ಬೀಳುವ ಸಾಧ್ಯತೆ ಇದೆ. ಇಲ್ಲವಾದಲ್ಲಿ ಕೆಲವು ಪಂದ್ಯಗಳ ಬಳಿಕ ತಂಡಕ್ಕೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ತಿಂಗಳ ಆರಂಭದಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್ ಇದೆ. ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಕೆ.ಎಸ್‌.ಭರತ್‌ ಜೊತೆಗೆ ಎರಡನೇ ವಿಕೆಟ್‌ ಕೀಪರ್‌ ಆಗಿ ರಾಹುಲ್‌ ಆಯ್ಕೆಯಾಗಿದ್ದಾರೆ. ಹೀಗಾಗಿ ಸಂಪೂರ್ಣ ಫಿಟ್‌ ಆಗುವುದು ಅಗತ್ಯ. ಇಂಗ್ಲೆಂಡ್‌ ಕಂಡೀಷನ್ಸ್‌ನಲ್ಲಿ ಉತ್ತಮ ದಾಖಲೆ ಹೊಂದಿರುವ ಅವರು, ಭಾರತ ತಂಡಕ್ಕೆ ಕೀ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡಿಗನ ಗಾಯದ ನಿರ್ವಹಣೆಯನ್ನು ಬಿಸಿಸಿಐ ವೈದ್ಯರು ನೋಡಿಕೊಳ್ಳಲಿದ್ದಾರೆ.

ಬುಧವಾರ ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೃಣಾಲ್‌ ಪಾಂಡ್ಯ ಲಕ್ನೋ ಸೂಪರ್‌ ಜಯಂಟ್ಸ್ ತಂಡದ ಕ್ಯಾಪ್ಟನ್ ಕ್ಯಾಪ್ ತೊಡಲಿದ್ದು, ಮತ್ತೆ ತಂಡವನ್ನು ಗೆಲುವಿನ ದಾರಿಗೆ ತರುವ ಹೊಣೆ ಹೊರಲಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *