Mary Kom : ಬಾಕ್ಸಿಂಗ್ ಗೆ ನಿವೃತ್ತಿ ಘೋಷಿಸಿದ ಚಾಂಪಿಯನ್‌ ಬಾಕ್ಸರ್ – ಸ್ಪರ್ಧಿಸುವ ಹಸಿವು ಇದೆ, ಆದರೆ ಎಲ್ಲವನ್ನೂ ಸಾಧಿಸಿದ್ದೇನೆ : ಕೋಮ್

ನ್ಯೂಸ್ ಆ್ಯರೋ : ಭಾರತದ ಲೆಜೆಂಡರಿ ಬಾಕ್ಸರ್ ಮತ್ತು ಒಲಿಂಪಿಕ್ ಪದಕ ವಿಜೇತೆ, 6 ಬಾರಿಯ ಚಾಂಪಿಯನ್‌ ಮೇರಿ ಕೋಮ್‌ ಇದೀಗ ವಯಸ್ಸಿನ ಕಾರಣದ ಹಿನ್ನೆಲೆಯಲ್ಲಿ ಅವರು ಬಾಕ್ಸಿಂಗ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಅಂತರಾಷ್ಟ್ರೀಯ ಬಾಕ್ಸಿಂಗ್‌ ಅಸೋಸಿಯೇಷನ್‌ ನಿಯಮದ ಪ್ರಕಾರ (IBA), ಪುರುಷರು ಹಾಗೂ ಮಹಿಳಾ ಬಾಕ್ಸಿಂಗ್‌ ಪಟುಗಳಿಗೆ 19 ರಿಂದ 40 ವಯಸ್ಸಿನ ವರೆಗೆ ಮಾಡಲು ಎಲೈಟ್‌ ಮಟ್ಟದಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ಲೆಜೆಂಡರಿ ಬಾಕ್ಸರ್ ಮಾರ್ಕ್ ಕೋಮ್ ಜನವರಿ 24 ರಂದು ಕ್ರೀಡೆಯಿಂದ ನಿವೃತ್ತಿಯಾಗುವ ನಿರ್ಧಾರವನ್ನು ಪ್ರಕಟಿಸಿದ್ದು, 23 ವರ್ಷಗಳ ತಮ್ಮ ಬಾಕ್ಸಿಂಗ್ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ.

ನಾನು ನನ್ನ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ. ನನಗೆ ಇನ್ನೂ ಸ್ಪರ್ಧಿಸುವ ಹಸಿವು ಇದೆ. ಆದರೆ ಅಂತರಾಷ್ಟ್ರೀಯ ಬಾಕ್ಸಿಂಗ್ ಫೆಡರೇಶನ್ ನಿಯಮಗಳು ನನಗೆ ಹಾಗೆ ಮಾಡಲು ಅನುಮತಿಸುವುದಿಲ್ಲ. ಪುರುಷ ಮತ್ತು ಮಹಿಳಾ ಬಾಕ್ಸರ್‌ಗಳಿಗೆ 40 ವರ್ಷ ವಯಸ್ಸಿನವರೆಗೆ ಮಾತ್ರ ಹೋರಾಡಲು ಅವಕಾಶವಿದೆ. ಆದ್ದರಿಂದ ನಾನು ಈಗ ಯಾವುದೇ ದೊಡ್ಡ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಹೀಗಾಗಿ ನಿವೃತ್ತಿ ನಿರ್ಧಾರ ಮಾಡಿದ್ದೇನೆ ಎಂದು 41 ವರ್ಷದ ಮೇರಿ ಕೋಮ್ ತಿಳಿಸಿದ್ದಾರೆ.

ಮೇರಿ ಕೋಮ್ ತಮ್ಮ ಬಾಕ್ಸಿಂಗ್ ವೃತ್ತಿಜೀವನವನ್ನು 18ನೇ ವಯಸ್ಸಿನಲ್ಲಿ ಪೆನ್ಸಿಲ್ವೇನಿಯಾದ ಸ್ಕ್ರಾಂಟನ್‌ನಲ್ಲಿ ಪ್ರಾರಂಭಿಸಿದರು. ಮೊದಲ ಪಂದ್ಯದಲ್ಲೇ ತಮ್ಮ ನಿಖರ ಬಾಕ್ಸಿಂಗ್ ತಂತ್ರದಿಂದ ಎಲ್ಲರ ಗಮನ ಸೆಳೆದಿದ್ದರು. ಅಷ್ಟೇ ಅಲ್ಲದೆ ಚೊಚ್ಚಲ ಪಂದ್ಯದಲ್ಲೇ 48 ಕೆಜಿ ವಿಭಾಗದಲ್ಲಿ ಫೈನಲ್‌ಗೆ ತಲುಪಿದ್ದರು. ಆದರೆ ಕೊನೆಯ ಸುತ್ತಿನಲ್ಲಿ ಸೋತರೂ ಅದಾಗಲೇ ಬಾಕ್ಸಿಂಗ್ ರಿಂಗ್​ನೊಳಗೆ ಹೊಸ ಸಂಚಲನ ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದರು.

ಮೇರಿ ಕೋಮ್ ಕೊನೆಯ ಬಾರಿ ಭಾರತವನ್ನು ಪ್ರತಿನಿಧಿಸಿದ್ದು 2022 ರಲ್ಲಿ ಕಾಮನ್‌ವೆಲ್ತ್ ಗೇಮ್ಸ್​ನ ಟ್ರಯಲ್ಸ್‌ನಲ್ಲಿ ಆಡಿದ್ದ ಅವರು ಮೊಣಕಾಲು ಗಾಯಕ್ಕೆ ತುತ್ತಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.

ಎಐಬಿಎ (AIBA) ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎನಿಸಿದ್ದಾರೆ. 2005, 2006, 2008 ಮತ್ತು 2010ರ ಸೀಸನ್​ಗಳಲ್ಲಿ ವಿಶ್ವ ಚಾಂಪಿಯನ್‌ ಶಿಪ್ ಪ್ರಶಸ್ತಿ ಗೆದ್ದಿದ್ದಾರೆ.

2008ರಲ್ಲಿ ಪ್ರಶಸ್ತಿ ಗೆದ್ದ ನಂತರ ಮೇರಿ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದರಿಂದ ಕೆಲ ಕಾಲ ಬಾಕ್ಸಿಂಗ್​ನಿಂದ ವಿರಾಮ ತೆಗೆದುಕೊಂಡಿದ್ದರು. 2012ರ ಒಲಿಂಪಿಕ್ ಪದಕವನ್ನು ಗೆದ್ದ ನಂತರ, ಮೇರಿ ತನ್ನ ಮೂರನೇ ಮಗುವಿಗೆ ಜನ್ಮ ನೀಡಿದರು. ಬಳಿಕ ಮತ್ತೊಮ್ಮೆ ವಿಶ್ರಾಂತಿ ಪಡೆದುಕೊಂಡಿದ್ದರು.

ನಂತರ ಬಾಕ್ಸಿಂಗ್​ಗೆ ಮರಳಿದ ಮೇರಿ 2018ರ ವಿಶ್ವ ಚಾಂಪಿಯನ್ ​ಶಿಪ್​​ನಲ್ಲಿ ಸ್ಥಾನ ಪಡೆದು ಉಕ್ರೇನ್​ನ ಹನ್ನಾ ಒಖೋಟಾ ವಿರುದ್ಧ 5-0 ಅಂತರದ ಗೆಲುವು ಸಾಧಿಸಿ 6ನೇ ಬಾರಿಗೆ ವಿಶ್ವ ಚಾಂಪಿಯನ್​ ಆದರು. ಇದಾದ ಒಂದು ವರ್ಷದ ಬಳಿಕ ತಮ್ಮ 8ನೇ ವಿಶ್ವ ಪದಕಕ್ಕೆ ಮುತ್ತಿಕ್ಕಿದರು.