ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ದೂರಿಗೆ ರೋಚಕ ಟ್ವಿಸ್ಟ್ – ಸಿಟ್ಟಿನಲ್ಲಿ ಸುಳ್ಳು ದೂರು‌, ಮಗಳಿಗೆ ಲೈಂಗಿಕ ದೌರ್ಜನ್ಯ ಆಗಿಲ್ಲ : ಕುಸ್ತಿಪಟು ತಂದೆ ಹೇಳಿಕೆ

ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ದೂರಿಗೆ ರೋಚಕ ಟ್ವಿಸ್ಟ್ – ಸಿಟ್ಟಿನಲ್ಲಿ ಸುಳ್ಳು ದೂರು‌, ಮಗಳಿಗೆ ಲೈಂಗಿಕ ದೌರ್ಜನ್ಯ ಆಗಿಲ್ಲ : ಕುಸ್ತಿಪಟು ತಂದೆ ಹೇಳಿಕೆ

ನ್ಯೂಸ್ ಆ್ಯರೋ‌ : ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್‍ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಸದ್ಯ ಅಲ್ಪ ವಿರಾಮ ಘೋಷಿಸಲಾಗಿದೆ. ಈ ಮಧ್ಯೆ ಆರೋಪ ಹೊರಿಸಿರುವ 17 ವರ್ಷದ ಕುಸ್ತಿಪಟುವಿನ ತಂದೆ ಉಲ್ಟಾ ಹೊಡೆದಿದ್ದಾರೆ.

ಕುಸ್ತಿಪಟುವಿನ ತಂದೆ ಬುಧವಾರ ಬಿಜೆಪಿ ಸಂಸದರ ವಿರುದ್ಧ ಇಂತಹ ಗಂಭೀರ ಆರೋಪಗಳನ್ನು ‘ಸಿಟ್ಟಿನ ಭರದಲ್ಲಿ ಮಾಡಿದ್ದೆ’ ಎಂದು ಹೇಳಿಕೆ ನೀಡಿದ್ದಾರೆ. ಅವರ 17ರ ಮಗಳು, ತಾರತಮ್ಯವನ್ನು ಎದುರಿಸುತ್ತಿದ್ದಳು ಎಂದಿದ್ದಾರೆ. ಅಪ್ರಾಪ್ತ ಕುಸ್ತಿಪಟುವಿನ ತಂದೆ ನ್ಯಾಯಾಲಯದಲ್ಲಿ ಹೇಳಿಕೆಯನ್ನು ಬದಲಾಯಿಸಿದ್ದು, ಪ್ರಕರಣವನ್ನು ಹಿಂತೆಗೆದುಕೊಂಡಿಲ್ಲ ಎಂದೂ ಹೇಳಿದ್ದಾರೆ.

ಡಬ್ಲ್ಯುಎಫ್ಐ ನನ್ನ ಮಗಳ ವಿರುದ್ಧ ತಾರತಮ್ಯ ಮಾಡಿದ ನಂತರ ಕೋಪಗೊಂಡ ಸ್ಥಿತಿಯಲ್ಲಿ ನಾವು ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಮಾಡಿದ್ದೆವು. ಭೂಷಣ್ ನನ್ನ ಮಗಳೊಂದಿಗೆ ಅನುಚಿತವಾಗಿ ವರ್ತಿಸಲಿಲ್ಲ. ಜೂ. 5ರಂದು ಮ್ಯಾಜಿಸ್ಟ್ರೇಟ್ ಮುಂದೆ ಸೆಕ್ಷನ್ 164ರ ಅಡಿಯಲ್ಲಿ ನಮ್ಮ ಹೇಳಿಕೆಯನ್ನು ಬದಲಾಯಿಸಿದ್ದೇವೆ. ಡಬ್ಲ್ಯುಎಫ್ಐ ಮುಖ್ಯಸ್ಥರಿಂದ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ನಾವು ಸುಪ್ರೀಂ ಕೋರ್ಟ್ ನಲ್ಲಿ ಸ್ಪಷ್ಟಪಡಿಸಿದ್ದೇವೆ. ಆದರೆ ತಾರತಮ್ಯದ ಆರೋಪಗಳು ಇನ್ನೂ ಇವೆ” ಎಂದು ದೂರು ನೀಡಿದಾಕೆಯ ತಂದೆ ಹೇಳಿದರು.

ಪ್ರಕರಣ ಹಿಂತೆಗೆದುಕೊಂಡಿಲ್ಲ

”ನಾವು ಯಾವುದೇ ದುರಾಸೆ, ಒತ್ತಡ ಅಥವಾ ಭಯವಿಲ್ಲದೆ ನಮ್ಮ ಹೇಳಿಕೆಯನ್ನು ಬದಲಾಯಿಸಿದ್ದೇವೆ. ನನ್ನ ಮಗಳು ಅಪ್ರಾಪ್ತ ವಯಸ್ಕಳು ಎಂಬುದು ಸಂಪೂರ್ಣವಾಗಿ ಸರಿಯಾಗಿದೆ. ನಾವು ಪ್ರಕರಣವನ್ನು ಹಿಂತೆಗೆದುಕೊಂಡಿಲ್ಲ, ಹೇಳಿಕೆಯನ್ನು ಬದಲಾಯಿಸಿದ್ದೇವೆ ಅಷ್ಟೇ” ಎಂದು ಸ್ಪಷ್ಟ ಪಡಿಸಿದ್ದಾರೆ. ಬ್ರಿಜ್ ಭೂಷಣ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ ಅಪ್ರಾಪ್ತ ಕುಸ್ತಿಪಟು ತನ್ನ ದೂರನ್ನು ಹಿಂತೆಗೆದುಕೊಂಡಿದ್ದಾರೆ ಎಂದು ವರದಿ ಬಂದ ಬಳಿಕ ಈ ಪ್ರತಿಕ್ರಿಯೆ ನೀಡಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *