ಟ್ರಾನ್ಸ್‌ಜೆಂಡರ್ ಕ್ರಿಕೆಟರ್ ಗೆ ಐಸಿಸಿ ನಿಷೇಧ ವಿಧಿಸಿದ್ದು ಯಾಕೆ ಗೊತ್ತೇ?‌ – ವಿರೋಧಕ್ಕೆ ಕಾರಣ ಬಿಚ್ಚಿಟ್ಟ ಐಸಿಸಿ ಹೇಳಿದ್ದೇನು?

ಟ್ರಾನ್ಸ್‌ಜೆಂಡರ್ ಕ್ರಿಕೆಟರ್ ಗೆ ಐಸಿಸಿ ನಿಷೇಧ ವಿಧಿಸಿದ್ದು ಯಾಕೆ ಗೊತ್ತೇ?‌ – ವಿರೋಧಕ್ಕೆ ಕಾರಣ ಬಿಚ್ಚಿಟ್ಟ ಐಸಿಸಿ ಹೇಳಿದ್ದೇನು?

ನ್ಯೂಸ್ ಆ್ಯರೋ : ಲಿಂಗ ಪರಿವರ್ತನೆ ಮಾಡಿಕೊಂಡವರಿಗೆ ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಆಡಲು ಅವಕಾಶವಿಲ್ಲ. ಈ ಹೊಸ ನಿಯಮವನ್ನು ಐಸಿಸಿ ಜಾರಿಗೆ ತಂದಿದೆ.

ಪ್ರೌಢಾವಸ್ಥೆಯ ಪುರುಷ ಅಥವಾ ಮಹಿಳೆ ಯಾವುದೇ ಶಸ್ತ್ರಚಿಕಿತ್ಸೆ ಅಥವಾ ಲಿಂಗ ಪುನರ್ವಿತರಣೆ ಚಿಕಿತ್ಸೆಗೆ ಒಳಗಾಗಿದ್ದರೆ ಅವರಿಗೆ ಮಹಿಳಾ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಲು ಅನುಮತಿಸಲಾಗುವುದಿಲ್ಲ ಎಂದು ಐಸಿಸಿ ತಿಳಿಸಿದೆ.

ಡಾ. ಪೀಟರ್ ಹಾರ್ಕೋರ್ಟ್ ನೇತೃತ್ವದ ಐಸಿಸಿ ವೈದ್ಯಕೀಯ ಸಲಹಾ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಆಟದ ಸಮಗ್ರತೆಯನ್ನು ಕಾಪಾಡುವ ಸಲುವಾಗಿ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಿಂದ ಟ್ರಾನ್ಸ್‌ಜೆಂಡರ್ ಕ್ರಿಕೆಟಿಗರಿಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದೆ.

ಹೀಗಾಗಿ ಇನ್ನು ಮುಂದೆ ಯಾವುದೇ ಪುರುಷ ಆಟಗಾರರು ಲಿಂಗವನ್ನು ಬದಲಾಯಿಸಿ ಮಹಿಳಾ ಕ್ರಿಕೆಟ್‌ ತಂಡದಲ್ಲಿ ಆಡಲು ಸಾಧ್ಯವಿಲ್ಲ. ಮಹಿಳಾ ಕ್ರೀಡೆಯ ಸಮಗ್ರತೆ, ಸುರಕ್ಷತೆ, ನ್ಯಾಯಸಮ್ಮತತೆ ಮತ್ತು ಒಳಗೊಳ್ಳುವಿಕೆಯನ್ನು ಕಾಪಾಡಿಕೊಳ್ಳಲು ಈ ನಿಯಮವನ್ನು ಜಾರಿಗೆ ತಂದಿರುವುದಾಗಿ ಐಸಿಸಿ ತಿಳಿಸಿದೆ.

ಈ ನಿಯಮವು ಮಹಿಳಾ ಪಂದ್ಯಗಳಿಗೆ ಮಾತ್ರ ಅನ್ವಯಿಸುತ್ತದೆ. ದೇಶೀಯ ಮಟ್ಟದಲ್ಲಿ ಲಿಂಗ ಅರ್ಹತೆಯನ್ನು ನಿರ್ಧರಿಸುವುದು ಸದಸ್ಯ ಸಂಸ್ಥೆಗಳಿಗೆ ಬಿಟ್ಟದ್ದು ಎಂದು ತಿಳಿಸಿದೆ.

ಕೆನಡಾದಲ್ಲಿ ಮೊದಲ ಟ್ರಾನ್ಸ್‌ಜೆಂಡರ್ ಕ್ರಿಕೆಟರ್ ಡೇನಿಯಲ್ ಮೆಕ್‌ಹೇ ಕಳೆದ ಕೆಲವು ದಿನಗಳ ಹಿಂದೆ ಸುದ್ದಿ ಮಾಡಿದ್ದರು. ಲಾಸ್ ಏಂಜಲೀಸ್ ನಲ್ಲಿ ನಡೆದ ಅರ್ಹತಾ ಪಂದ್ಯಾವಳಿಯಲ್ಲಿ ಡೇನಿಯಲ್ ಕೆನಡಾ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಐಸಿಸಿಯ ಹೊಸ ನಿಯಮದಿಂದಾಗಿ ಅವರಿಗೆ ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಭಾಗವಹಿಸಲು ಸಾಧ್ಯವಿಲ್ಲ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *