World Cup Cricket 2023 : ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕಿಸ್ತಾನ ತಂಡ – ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭ

World Cup Cricket 2023 : ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕಿಸ್ತಾನ ತಂಡ – ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭ

ನ್ಯೂಸ್ ಆ್ಯರೋ : ಈ ಬಾರಿಯ ಏಕದಿನ ವಿಶ್ವಕಪ್ ಕ್ರಿಕೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ವೀಸಾ ಗೊಂದಲ ಮುಗಿಯುತ್ತಿದ್ದಂತೆ ಪಾಕಿಸ್ತಾನ ಕ್ರಿಕೆಟ್ ತಂಡ (Pakistan Cricket Team) ನಿನ್ನೆ (ಸೆಪ್ಟೆಂಬರ್ 27, ಬುಧವಾರ) ಹೈದರಾಬಾದ್‌ಗೆ ಆಗಮಿಸಿದೆ. 2023ರ ವಿಶ್ವಕಪ್‌ನಲ್ಲಿ (ICC ODI World Cup 2023) ಪಾಕ್ ತಂಡ ಎರಡು ಅಭ್ಯಾಸ ಪಂದ್ಯಗಳನ್ನು ಹೈದರಾಬಾದ್‌ನಲ್ಲಿ ಆಡಲಿದೆ. ಹೀಗಾಗಿ ನೇರವಾಗಿ ಹೈದರಾಬಾದ್‌ಗೆ ಬಂದಿಳಿದಿದೆ.

ಪಾಕಿಸ್ತಾನ ತಂಡ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಾಳೆ (ಸೆಪ್ಟೆಂಬರ್ 29, ಶುಕ್ರವಾರ) ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ಹೈದರಾಬಾದ್‌ನ ಉಪ್ಪಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕಳೆದ ಬಾರಿ 2016ರ ಟಿ20 ವಿಶ್ವಕಪ್‌ಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಆಗಮಿಸಿತ್ತು. ಒಂದು ದಶಕದಿಂದ ಟೀಂ ಇಂಡಿಯಾ ಜೊತೆಗೆ ಯಾವುದೇ ದ್ವಿಪಕ್ಷೀಯ ಸರಣಿಗಳನ್ನು ಆಡದ ಕಾರಣ ಪಾಕ್ ತಂಡ ಭಾರತಕ್ಕೆ ಬರಲು ಸಾಧ್ಯವಾಗಲಿಲ್ಲ. ಏಕದಿನ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲು 7 ವರ್ಷಗಳ ಬಳಿಕ ಆಗಮಿಸಿರುವುದು ವಿಶೇಷ.

ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ತಂಡ ದುಬೈನಿಂದ ಹೈದರಾಬಾದ್‌ಗೆ ಆಗಮಿಸಿದೆ. ಹಲವು ದಿನಗಳಿಂದ ಭಾರತೀಯ ವೀಸಾಗಾಗಿ ಕಾಯುತ್ತಿದ್ದ ಈ ತಂಡಕ್ಕೆ ಸೋಮವಾರ (ಸೆಪ್ಟೆಂಬರ್ 25) ರಾತ್ರಿ ವೀಸಾ ಕೈಸೇರಿತ್ತು. ಆ ಬಳಿಕ ಪಾಕಿಸ್ತಾನದಿಂದ ದುಬೈಗೆ ಹೋಗಿ ಅಲ್ಲಿಂದ 9 ಗಂಟೆ ಪ್ರಯಾಣಿಸಿ ಹೈದರಾಬಾದ್‌ಗೆ ಬಂದಿಳಿದಿದೆ. ಪಾಕಿಸ್ತಾನ ತಂಡದ ಆಗಮನಕ್ಕೆ ವಿರಾಟ್ ಕೊಹ್ಲಿ ಟ್ವಿಟರ್ ನಲ್ಲಿ ಸಂಭ್ರಮ ಸೂಚಿಸಿದ್ದಾರೆ‌.

ಇದೇ ಅಕ್ಟೋಬರ್ 5 ರಿಂದ ವಿಶ್ವಕಪ್ ಆರಂಭವಾಗಲಿದ್ದು, ಪಾಕಿಸ್ತಾನ ತನ್ನ ಮೊದಲ ಪಂದ್ಯವನ್ನು ನೆದರ್‌ಲ್ಯಾಂಡ್ಸ್ ವಿರುದ್ಧ ಅಕ್ಟೋಬರ್ 6 ರಂದು ಆಡಲಿದೆ. ಈ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅಕ್ಟೋಬರ್ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳ ನಡುವೆ ರೋಚಕ ಪಂದ್ಯ ಸಾಗಿಬರಲಿದೆ.

ಪಾಕಿಸ್ತಾನ ತಂಡ ಇಂತಿದೆ.
ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್ ಉಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಶಾ ಅಫ್ರಿದಿ, ಮೊಹಮ್ಮದ್ ವಾಸೀಂ ಜೂ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *