ಮುಲ್ತಾನ್ ಟೆಸ್ಟ್ ನಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನಕ್ಕೆ ಸೋಲು – ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ರೇಸ್ ನಿಂದ ಪಾಕ್ ಔಟ್

ಮುಲ್ತಾನ್ ಟೆಸ್ಟ್ ನಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನಕ್ಕೆ ಸೋಲು – ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ರೇಸ್ ನಿಂದ ಪಾಕ್ ಔಟ್

ನ್ಯೂಸ್ ಆ್ಯರೋ‌ : ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್‌ ತಂಡವು 26 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂರು ಪಂದ್ಯಗಳ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಇಂಗ್ಲೆಂಡ್ ತಂಡವು 2-0 ಅಂತರದಲ್ಲಿ ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಸರಣಿ ಸೋತ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಈ ಸೋಲಿನೊಂದಿಗೆ ಪಾಕಿಸ್ತಾನ ತಂಡ 2021-23ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ರೇಸ್‌ನಿಂದ ಹೊರಬಿದ್ದಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದ್ದ ಪಾಕಿಸ್ತಾನ ಈ ಸರಣಿಯಲ್ಲಿ ಸೋಲನುಭವಿಸುವ ಮೂಲಕ 6ನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಸರಣಿಯಲ್ಲಿ ಜಯ ಸಾಧಿಸಿರುವ ಇಂಗ್ಲೆಂಡ್ 5ನೇ ಸ್ಥಾನಕ್ಕೆ ಜಿಗಿದಿದೆ.

ಪಾಕಿಸ್ತಾನ 42.42 ಪಿಟಿಸಿ (ಪಾಯಿಂಟ್ ಪರ್ಸಂಟೇಜ್ ಸಿಸ್ಟಮ್) ಪಡೆಯುವ ಮೂಲಕ ಆರನೇ ಸ್ಥಾನಕ್ಕೆ ಕುಸಿದರೆ, ಇಂಗ್ಲೆಂಡ್ 44.44 ಪಿಟಿಸಿ ಮೂಲಕ 5ನೇ ಸ್ಥಾನಕ್ಕೇರಿತು. ಭಾರತ 52.08 ಪಿಟಿಸಿಯೊಂದಿದೆ 4ನೇ ಸ್ಥಾನದಲ್ಲಿದೆ. ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಯ ಸಾಧಿಸಿದರೆ, 53.33 ಪಿಟಿಸಿ ಹೊಂದಿರುವ ಶ್ರೀಲಂಕಾ ತಂಡವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಲಿದೆ. 75.00 ಪಿಟಿಸಿಯೊಂದಿಗೆ ಆಸ್ಟ್ರೇಲಿಯಾ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. 60.0 ಪಿಟಿಸಿಯೊಂದಿಗೆ ದಕ್ಷಿಣ ಆಫ್ರಿಕಾ 2ನೇ ಸ್ಥಾನದಲ್ಲಿದೆ.

ಮೂರನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 198 ರನ್ ಗಳಿಸಿದ್ದ ಪಾಕಿಸ್ತಾನ 4ನೇ ಉತ್ತಮವಾಗಿ ಮುಂದುವರೆಸುವ ವಿಶ್ವಾಸದಲ್ಲಿತ್ತು. ಆದರೆ 4ನೇ ದಿನ 12 ರನ್ ಗಳಿಸುವಷ್ಟರಲ್ಲಿ ಫಹೀಮ್ ಅಶ್ರಫ್ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ನಂತರ ಬಂದ ಮೊಹಮ್ಮದ್ ನವಾಜ್ 62 ಎಸೆತಗಳಲ್ಲಿ 45 ರನ್ ಗಳಿಸುವ ಮೂಲಕ ಪಾಕಿಸ್ತಾನಕ್ಕೆ ಗೆಲುವಿನ ಭರವಸೆ ಮೂಡಿಸಿದ್ದರು. ನವಾಜ್ ಮತ್ತು ಸೌದ್ ಶಕೀಲ್ 80 ರನ್‌ಗಳ ಜೊತೆಯಾಟ ಆಡುವ ಮೂಲಕ ಇಂಗ್ಲೆಂಡ್‌ ಮೇಲೆ ಒತ್ತಡ ಹೇರಿದರು. ಆದರೆ ಮಾರ್ಕ್ ವುಡ್ ಈ ಜೋಡಿಯನ್ನು ಪೆವಿಲಿಯನ್‌ಗೆ ಕಳುಹಿಸುವ ಮೂಲಕ ಇಂಗ್ಲೆಂಡ್‌ ತಂಡದ ಸೋಲಿನ ಭಯವನ್ನು ದೂರವಾಗಿಸಿದರು.

ನವಾಜ್ ಮತ್ತು ಸೌದ್ ಶಕೀಲ್ ವಿಕೆಟ್ ಪತನವಾಗುತ್ತಿದ್ದಂತೆ ಪಾಕಿಸ್ತಾನದ ಸೋಲು ಖಚಿತವಾಗಿತ್ತು. ಅಘಾ ಅಸ್ಲಾಮ್ ಮತ್ತು ಅಬ್ರಾರ್ ಅಹ್ಮದ್ ಮಿನಿ ಕ್ಯಾಮಿಯೋ ಆಡಿದರು ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಪಾಕಿಸ್ತಾನ ಎರಡನೇ ಇನ್ನಿಂಗ್ಸ್‌ನಲ್ಲಿ 328 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ 26 ರನ್‌ಗಳ ಸೋಲೊಪ್ಪಿಕೊಂಡಿತು. ಮಾರ್ಕ್‌ವುಡ್ ಎರಡನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆಯುವ ಮೂಲಕ ಪಾಕಿಸ್ತಾನದ ಸೋಲಿಗೆ ಪ್ರಮುಖ ಕಾರಣವಾದರು.

ಇಂಗ್ಲೆಂಡ್ ತಂಡದ ಆಟಗಾರ ಹ್ಯಾರಿ ಬ್ರೂಕ್ ಮುಲ್ತಾನ್‌ ಟೆಸ್ಟ್‌ನ ಪಂದ್ಯದ ಆಟಗಾರ ಪ್ರಶಸ್ತಿ ಪಡೆದುಕೊಂಡರು. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 9 ರನ್‌ ಗಳಿಸಿದ್ದ ಬ್ರೂಕ್, ಎರಡನೇ ಇನ್ನಿಂಗ್ಸ್‌ನಲ್ಲಿ ಅಮೋಘ ಶತಕ ದಾಖಲಿಸಿದರು. ತಂಡ ಕಡಿಮೆ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದಾಗ ಅಮೋಘ ಪ್ರದರ್ಶನ ನೀಡಿದ್ದ ಬ್ರೂಕ್, 149 ಎಸೆತಗಳಲ್ಲಿ 109 ರನ್ ಗಳಿಸಿ ಮಿಂಚಿದ್ದರು. ಅವರ ಈ ಅಮೋಘ ಇನ್ನಿಂಗ್ಸ್‌ನಲ್ಲಿ 14 ಬೌಂಡರಿ ಒಂದು ಸಿಕ್ಸರ್ ಸೇರಿತ್ತು. ಒತ್ತಡದಲ್ಲಿ ಶತಕ ಗಳಿಸಿದ್ದ ಹ್ಯಾರಿ ಬ್ರೂಕ್‌ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಟೀಂ ಇಂಡಿಯಾಕ್ಕೆ ಫೈನಲ್ ಗೆ ಅರ್ಹತೆ ಪಡೆಯೋ ಚಾನ್ಸ್…!!

ಟೀಮ್ ಇಂಡಿಯಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ವೇಳಾಪಟ್ಟಿಯಲ್ಲಿ ಆರು ಪಂದ್ಯಗಳು ಉಳಿದಿದ್ದು, ಫೈನಲ್ ತಲುಪಲು ಟೀಂ ಇಂಡಿಯಾ ಕನಿಷ್ಠ ಐದು ಪಂದ್ಯಗಳನ್ನು ಗೆಲ್ಲಬೇಕಿದೆ.
ಭಾರತ ತಂಡ ಡಿಸೆಂಬರ್ 14ರಿಂದ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಬಾಂಗ್ಲಾದೇಶದ ವಿರುದ್ದ ಎರಡು ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಫೈನಲ್ ತಲುಪಲು ಸಾಕಷ್ಟು ಅವಕಾಶ ಸಿಕ್ಕಂತಾಗುತ್ತದೆ.

ಬಾಂಗ್ಲಾದೇಶದ ಸರಣಿಯ ನಂತರ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿ ಆಡಲಿದ್ದು, ಇವುಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸಹ, ಜೂನ್ ತಿಂಗಳಿನಲ್ಲಿ ನಡೆಯುವ ಫೈನಲ್‌ಗೆ ಅರ್ಹತೆ ಪಡೆದುಕೊಳ್ಳಲಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *