ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ – ಘೋಷಣೆ ಮಾಡಿದ ಬಿಸಿಸಿಐ

ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ – ಘೋಷಣೆ ಮಾಡಿದ ಬಿಸಿಸಿಐ

ನ್ಯೂಸ್ ಆ್ಯರೋ : ವಿಶ್ವಕಪ್ ಮುಗಿದ ಮೇಲೆ ಇದೀಗ ಟ್ವೆಂಟಿ ಟ್ವೆಂಟಿ ಕ್ರಿಕೆಟ್ ನಡೆಯುತ್ತಿದೆ. ಇನ್ನೇನೋ ಐಪಿಎಲ್ ಗೆ ಕೂಡಾ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಟೀಂ ಆಟಗಾರರು ಅಲ್ಲಿಂದಿಲ್ಲಿ ಪಲಾಯನ ಮಾಡುತ್ತಿದ್ದಾರೆ. ಇನ್ನು ಏನೇನೋ ಬೆಳವಣಿಗೆಗಳು ನಡೆಯುತ್ತಿದೆ. ಇವೆಲ್ಲವೂ ನಿಮಗೆ ಗೊತ್ತಿರುವ ವಿಚಾರ. ಇದೀಗ ಬಿಸಿಸಿಐ ಮಹತ್ವದ ಘೋಷಣೆಯೊಂದು ಮಾಡಿದೆ.

ಭಾರತ ಕ್ರಿಕೆಟ್​ ನಿಯಂತ್ರಣ ಮಂಡಳಿ (BCCI) ಮತ್ತೊಮ್ಮೆ ಟೀಮ್​ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್​ ದ್ರಾವಿಡ್ ಅವರನ್ನು ನೇಮಕ ಮಾಡಿರುವುದಾಗಿ ಅಧಿಕೃತವಾಗಿ ಘೋಷಿಸಿದೆ. ಆದರೆ ಎಷ್ಟು ಅವಧಿ ವರೆಗೆ ಈ ಹುದ್ಧೆಯಲ್ಲಿ ಮುಂದುವರೆಯಲಿದ್ದಾರೆ ಎಂಬುದರ ಕುರಿತು ಬಿಸಿಸಿಐ ಬಹಿರಂಗ ಪಡಿಸಿಲ್ಲವಾದರೂ, 2024ರ ಜೂನ್​ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​​ ವರೆಗೆ ಮುಂದುವರೆಯಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಕಳೆದ 2021ರ ನವೆಂಬರ್​ ತಿಂಗಳಲ್ಲಿ ದ್ರಾವಿಡ್​ ಅವರನ್ನು ಟೀಮ್​ ಇಂಡಿಯಾದ ಮುಖ್ಯ ಕೋಚ್​ ಆಗಿ 2 ವರ್ಷದ ಅವಧಿಗೆ ಬಿಸಿಸಿಐ ನೇಮಕ ಮಾಡಿತ್ತು. ಇತ್ತೀಚೆಗೆ ಮುಕ್ತಾಯಗೊಂಡ 2023ರ ಏಕದಿನ (ODI) ವಿಶ್ವಕಪ್​ (World Cup) ನಂತರ ಮುಖ್ಯ ಕೋಚ್​ ಹುದ್ದೆಯ ಅವಧಿ ಪೂರ್ಣಗೊಂಡಿತ್ತು. ಅದಾದ ಬಳಿಕ ಈ ಹುದ್ದೆಗೆ ಯಾರನ್ನು ನೇಮಕ ಮಾಡಲಾಗುತ್ತದೆ ಎಂಬ ಊಹಪೋಹಗಳಿಗೆ ತೆರೆ ಬಿದ್ದಿದೆ.

ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ಏನು ಮಾಹಿತಿ ನೀಡಿದೆ..?

‘ಇತ್ತೀಚೆಗೆ ಮುಕ್ತಾಯಗೊಂಡ ODI ವಿಶ್ವಕಪ್ ನಂತರ ದ್ರಾವಿಡ್​ ಅವರ ಮುಖ್ಯ ಕೋಚ್ ಹುದ್ದೆಯ ಒಪ್ಪಂದದ ಅವಧಿ ಪೂರ್ಣಗೊಂಡಿತ್ತು. ಇದಾದ ಬಳಿಕ ಈ ಹುದ್ದೆಗೆ ಯಾರನ್ನು ನೇಮಕ ಮಾಡಬೇಕು ಎಂದು ಚರ್ಚೆ ನಡೆಸಲಾಗಿತ್ತು. ಎಲ್ಲರ ಒಪ್ಪಿಗೆ ಪಡೆದು ನಂತರ ರಾಹುಲ್​ ದ್ರಾವಿಡ್​ ಅವರನ್ನೇ ಮುಖ್ಯ ಕೋಚ್​ ಆಗಿ ಒಪ್ಪಂದವನ್ನು ವಿಸ್ತರಿಸಲು ನಿರ್ಧರಿಸಲಾಯಿತು.

ಈ ಒಪ್ಪಂದವನ್ನು ದ್ರಾವಿಡ್ ಅವರು ಒಪ್ಪಿದ್ದಕ್ಕಾಗಿ ಸಂತಸ ತಂದಿದೆ. ​ಅವರ ಮಾರ್ಗದರ್ಶನದಲ್ಲಿ ಟೀಮ್​ ಇಂಡಿಯಾ ಮತ್ತಷ್ಟು ಉನ್ನತ ಸ್ಥಾನಕ್ಕೆ ಏರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ​ ಹೇಳಿದ್ದಾರೆ.

ರಾಹುಲ್ ದ್ರಾವಿಡ್ ಮರು ಆಯ್ಕೆ ಬಗ್ಗೆ ಗೌತಮ್ ಗಂಭೀರ್ ಅಭಿಪ್ರಾಯವೇನು ಗೊತ್ತಾ..?

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ‘ಇದು ಒಳ್ಳೆಯ ನಿರ್ಧಾರ ಏಕೆಂದರೆ ಮುಂದಿನ ವರ್ಷ ಟಿ -20 ವಿಶ್ವಕಪ್ ಇರುವುದರಿಂದ ಇದು ಉತ್ತಮ ನಿರ್ಧಾರವಾಗಿದೆ’ ಎಂದು ಹೇಳಿದ್ದಾರೆ.

ಈ ಬಗ್ಗೆ ರಾಹುಲ್ ದ್ರಾವಿಡ್ ಹೇಳಿದ್ದೇನು..?

ಈ ಬಗ್ಗೆ ರಾಹುಲ್​ ದ್ರಾವಿಡ್​ ಮಾತನಾಡಿ, ಟೀಮ್ ಇಂಡಿಯಾದೊಂದಿಗೆ ಕಳೆದ ಎರಡು ವರ್ಷಗಳು ಪಯಣ ಸ್ಮರಣೀಯವಾಗಿದೆ. ಈ ಪಯಣದಲ್ಲಿ ಭಾರತ ಏರಿಳಿತಗಳನ್ನು ಕಂಡಿದೆ. ಪ್ರಯಾಣದುದ್ದಕ್ಕೂ, ಗುಂಪಿನೊಳಗಿನ ಬೆಂಬಲ ಮತ್ತು ಒಡನಾಟವು ಅಸಾಧಾರಣವಾಗಿದೆ.

ಈ ಬಗ್ಗೆ ನಾನು ನಿಜವಾಗಿಯೂ ಹೆಮ್ಮೆಪಡುತ್ತೇನೆ. ಮತ್ತೊಮ್ಮ ನನ್ನನ್ನು ಮುಖ್ಯ ಕೋಚ್​ ಹುದ್ದಗೆ ಮರು ನೇಮಕ ಮಾಡಿದ್ದಕ್ಕಾಗಿ BCCI ಮತ್ತು ಪದಾಧಿಕಾರಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ’ ಎಂದಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *