ದೋನಿ ದಾಖಲೆ ಸರಿಗಟ್ಟಿ ಇತಿಹಾಸ ನಿರ್ಮಿಸಿದ ಹಿಟ್ ಮ್ಯಾನ್; ODI ನಲ್ಲಿ ರೋಹಿತ್ ಶರ್ಮಾ ಹೊಸ ದಾಖಲೆ

ದೋನಿ ದಾಖಲೆ ಸರಿಗಟ್ಟಿ ಇತಿಹಾಸ ನಿರ್ಮಿಸಿದ ಹಿಟ್ ಮ್ಯಾನ್; ODI ನಲ್ಲಿ ರೋಹಿತ್ ಶರ್ಮಾ ಹೊಸ ದಾಖಲೆ

ನ್ಯೂಸ್ ಆ್ಯರೋ : ವಿಶ್ವ ಕ್ರಿಕೆಟ್ ಅಂಗಳದಲ್ಲಿ ಹಿಟ್ ಮ್ಯಾನ್ ಎಂದೇ ಗುರುತಿಸಿಕೊಂಡಿರುವ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಏಕದಿನ ಕ್ರಿಕೇಟ್ ನೂತನ ದಾಖಲೆ ನಿರ್ಮಿಸಿದ್ದಾರೆ. ಆ ಮೂಲಕ ಮಾಜಿ ನಾಯಕ ಎಂ.ಎಸ್ ಧೋನಿ‌ ಹೆಸರಿನಲ್ಲಿದ್ದ ಅತೀ ಹೆಚ್ಚು ಸಿಕ್ಸರ್ ಗಳ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ.

ಈ ಹಿಂದೆ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್.ಧೋನಿ ಏಕದಿನ‌ ಕ್ರಿಕೆಟ್ ನಲ್ಲಿ ಒಟ್ಟು 123 ಸಿಕ್ಸರ್ ಸಿಡಿಸುವ ಮೂಲಕ ಅಗ್ರಸ್ಥಾನ ಅಲಂಕರಿಸಿದ್ದರು. ಆದರೆ ಈ ದಾಖಲೆ ರೋಹಿತ್ ಪಾಲಾಗಿದೆ. ಹೈದರಾಬಾದ್ ಉಪ್ಪಲದ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ‌ ಸರಣಿಯ ಮೊದಲ ಪಂದ್ಯದಲ್ಲಿ 2 ಸಿಕ್ಸರ್ ಸಿಡಿಸುವ ಮೂಲಕ ಭಾರತದಲ್ಲಿ ಏಕದಿನ ಕ್ರಿಕೆಟ್ ನಲ್ಲಿ 125 ಸಿಕ್ಸರ್ ಸಿಡಿಸುವ ಮೂಲಕ ಧೋನಿ ದಾಖಲೆಯನ್ನು ಸರಿಗಟ್ಟಿದರು.

ರೋಹಿತ್ ಎದುರಿಸಿದ 38 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸೇರಿ ಒಟ್ಟು 34 ರನ್ ಗಳಿಸಿದರು. ಈ ಮೂಲಕ ಮತ್ತೆ ಕ್ರಿಕೆಟ್ ಅಂಗಳದಲ್ಲಿ ವೈಫಲ್ಯ ಸಾಧಿಸಿದರು. ಇತ್ತೀಚೆಗೆ ನಿರಂತರವಾಗಿ ರೋಹಿತ್ ದೊಡ್ಡ ಮೊತ್ತ ಪೇರಿಸುವಲ್ಲಿ ನಿರಾಸೆ ಮೂಡಿಸುತ್ತಿದ್ದಾರೆ. ಇಂದು ಕಿವೀಸ್ ವೇಗಿ ಬ್ಲೇರ್ ಟಿಕ್ನರ್ 13ನೇ ಓವರ್ ನ ಮೊದಲ ಎಸೆತಕ್ಕೆ ಔಟಾಗಿ ಪೆವಿಲಿಯನ್ ಸೇರಿದರು.

ಇದೇ ವೇಳೆಯಲ್ಲಿ ಅತೀ ಹೆಚ್ಚು ರನ್ ಬಾರಿಸಿದವರ ಪಟ್ಟಿಯಲ್ಲಿ 16ನೇ ಸ್ಥಾನಕ್ಕೇರುವುದರೊಂದಿಗೆ ಆಸ್ಟ್ರೇಲಿಯಾದ ಲೆಜಂಡರಿ ಆಟಗಾರ ಆ್ಯಡಂ ಗಿಲ್ ಕ್ರಿಸ್ಟ್ ಅವರನ್ನು ರೋಹಿತ್ ಶರ್ಮ ಸರಿಗಟ್ಟಿದರು. ಸದ್ಯ ಏಕದಿನ‌ ಕ್ರಿಕೇಟ್‌ನಲ್ಲಿ ರೋಹಿತ್ ಶರ್ಮಾ ಅತಿ‌ ಹೆಚ್ಚು ರನ್ ಗಳಿಸಿದ 16ನೇ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದರು.

ಆಡಮ್ ಗಿಲ್‌ಕ್ರಿಸ್ಟ್‌ 279 ಏಕದಿನ ಇನ್ನಿಂಗ್ಸ್‌ನಲ್ಲಿ ಒಟ್ಟು 9619 ರನ್ ಗಳಿಸಿದ್ದಾರೆ. 50 ಓವರ್‌ಗಳ ಪಂದ್ಯಾಟದಲ್ಲಿ ಆಸ್ಟ್ರೇಲಿಯಾ ಪರ ಅವರು 16 ಶತಕ ಮತ್ತು 55 ಅರ್ಧಶತಕಗಳನ್ನು ಬಾರಿಸಿದ್ದಾರೆ.

ರೋಹಿತ್ ಶರ್ಮಾ ಇದುವರೆಗೂ 232 ಏಕದಿನ ಇನ್ನಿಂಗ್ಸ್‌ನಲ್ಲಿ 9630 ರನ್ ಗಳಿಸಿ ಗಿಲ್‌ಕ್ರಿಸ್ಟ್‌ರನ್ನು ಹಿಂದಿಕ್ಕಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕಗಳನ್ನು ಗಳಿಸಿರುವ ಹಿಟ್‌ಮ್ಯಾನ್ 47 ಅರ್ಧಶತಕ ಮತ್ತು 29 ಶತಕಗಳನ್ನು ಸಿಡಿಸಿದ್ದಾರೆ.

ಭಾರತೀಯರ ಪೈಕಿ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್ ಮತ್ತು ಎಂಎಸ್ ಧೋನಿ ನಂತರ 6ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹಿರಿಮೆಗೆ ಪಾತ್ರವಾಗಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *