ಐಪಿಎಲ್ ನಲ್ಲಿ‌ ಅತೀ ಹೆಚ್ಚು ಸಂಭಾವನೆ ಪಡೆದ ಆಟಗಾರ ಯಾರು ಗೊತ್ತಾ…!? – ಕುಸಿದ ಧೋನಿಯ ಪಟ್ಟ, ಕೊಹ್ಲಿಗಿಂತಲೂ ಹೆಚ್ಚು ಪಡೆದಿದ್ದು ಯಾರು?

ಐಪಿಎಲ್ ನಲ್ಲಿ‌ ಅತೀ ಹೆಚ್ಚು ಸಂಭಾವನೆ ಪಡೆದ ಆಟಗಾರ ಯಾರು ಗೊತ್ತಾ…!? – ಕುಸಿದ ಧೋನಿಯ ಪಟ್ಟ, ಕೊಹ್ಲಿಗಿಂತಲೂ ಹೆಚ್ಚು ಪಡೆದಿದ್ದು ಯಾರು?

ನ್ಯೂಸ್ ಆ್ಯರೋ : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2023ರ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ಹಾಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆಯ ಮೂಲಕ ಸುದ್ದಿಯಲ್ಲಿದ್ದಾರೆ. ಹಿಟ್‌ಮ್ಯಾನ್‌ ಶರ್ಮಾ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಶ್ರೀಮಂತ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದು, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.

ಹೌದು.. ಇಂಡಿಯನ್​ ಪ್ರೀಮಿಯರ್ ಲೀಗ್​ ಮೂಲಕ ಅತೀ ಹೆಚ್ಚು ಮೊತ್ತ ಪಡೆದ ಆಟಗಾರ ಯಾರು ಎಂಬ ಪ್ರಶ್ನೆಗೆ ಎಂಎಸ್​ ಧೋನಿ ಎಂಬ ಉತ್ತರ ಹೊರಬೀಳುತ್ತಿತ್ತು. ಆದರೆ ಈ ಬಾರಿ ಐಪಿಎಲ್​ನ ಟಾಪ್ ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಬದಲಾವಣೆಗಳಾಗಿದ್ದು, ಮಹೇಂದ್ರ ಸಿಂಗ್ ಧೋನಿಯನ್ನು ಹಿಂದಿಕ್ಕಿ ರೋಹಿತ್ ಶರ್ಮಾ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ರೋಹಿತ್ ಶರ್ಮಾ ಅವರು 16 ವರ್ಷಗಳಲ್ಲಿ ಐಪಿಎಲ್‌ನಿಂದ 178.6 ಕೋಟಿ ರೂ ಗಳಿಕೆ ಮಾಡಿದ್ದು,
ಮಹೇಂದ್ರ ಸಿಂಗ್ ಧೋನಿ ಅವರು 16 ವರ್ಷಗಳಲ್ಲಿ ಐಪಿಎಲ್ ಮೂಲಕ 176.84 ಕೋಟಿ ರೂ. ಪಡೆದಿದ್ದಾರೆ.

ಮೊದಲು ಡೆಕ್ಕನ್ ಚಾರ್ಜರ್ಸ್ ತಂಡದ ಭಾಗವಾಗಿದ್ದ ರೋಹಿತ್ ಶರ್ಮಾ 2011 ರಿಂದ ಮುಂಬೈ ಇಂಡಿಯನ್ಸ್​ ತಂಡದಲ್ಲಿ ಪ್ರಮುಖ ಆಟಗಾರನಾಗಿ ಆಡುತ್ತಿದ್ದಾರೆ.

2008ರಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೊದಲ ಆವೃತ್ತಿಯ ಸಂದರ್ಭದಲ್ಲಿ ಡೆಕ್ಕನ್ ಚಾರ್ಜರ್ಸ್ ತಂಡವು ರೋಹಿತ್ ಶರ್ಮಾ ಅವರನ್ನು 3 ಕೋಟಿ ರೂ.ಗೆ ಖರೀದಿಸಿತ್ತು. ಇದಾದ ನಂತರ ಮುಂದಿನ ಎರಡು ಆವೃತ್ತಿಗಳಿಗೆ ರೋಹಿತ್ ಶರ್ಮಾ ತಲಾ 3 ಕೋಟಿ ರೂ ಸಂಭಾವನೆ ಪಡೆದಿದ್ದರು.

ರೋಹಿತ್ ಬ್ಯಾಟಿಂಗ್ ಬಲ ಅರಿತು 2011ರಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾರನ್ನು ಸೆಳೆಯಲು ಸಿದ್ಧತೆ ನಡೆಸಿತ್ತು. ಇದಕ್ಕಾಗಿ 9.2 ಕೋಟಿ ರೂಪಾಯಿಗಳ ಬೃಹತ್ ಮೊತ್ತ ವ್ಯಯಿಸಿತ್ತು.

ಅಷ್ಟೇ ಅಲ್ಲದೇ, ಇದೇ ಫ್ರಾಂಚೈಸಿ 2014ರಲ್ಲಿ 12.5 ಕೋಟಿ ರೂ. ನೀಡಿ ತಂಡದಲ್ಲೇ ಉಳಿಸಿಕೊಂಡಿತ್ತು. 2018 ರಲ್ಲಿ ಶರ್ಮಾರನ್ನು 15 ಕೋಟಿ ರೂ.ಗೆ ಉಳಿಸಿಕೊಂಡು, ಈಗ 2022ರ ಐಪಿಎಲ್ ಹರಾಜಿನಲ್ಲಿಯೂ ತಂಡದ ನಾಯಕತ್ವದಲ್ಲಿಯೇ ಉಳಿಸಿಕೊಂಡು, 16 ಕೋಟಿ ರೂ.ಗೆ ಖರೀದಿಸಿದೆ.

ಇನ್ನೂ ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ಬ್ಯಾಟರ್ ಸುರೇಶ್ ರೈನಾ ಅವರ ಹೆಸರುಗಳೂ ಹೆಚ್ಚು ಗಳಿಕೆ ಮಾಡಿರುವ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ನಿರಂತರ ಆಡುತ್ತಿರುವ ಕೊಹ್ಲಿ ಇದುವರೆಗೂ 173.2 ಕೋಟಿ ರೂ.ಗಳಿಸಿ ಮೂರನೇ ಸ್ಥಾನದಲ್ಲಿದ್ದರೆ, 14 ವರ್ಷಗಳಲ್ಲಿ ಲೀಗ್‌ನಿಂದ 110.7 ಕೋಟಿ ಬಾಚಿಕೊಂಡಿರುವ ಸುರೇಶ್ ರೈನಾ 4ನೇ ಸ್ಥಾನ ಪಡೆದಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *